:: ಆರ್. ಕೆ ಬಾಲಚಂದ್ರ
(ಲೇಖಕರು ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ʼವಿಸ್ತಾರ ಕಾಯಕ ಯೋಗಿʼ ಪ್ರಶಸ್ತಿ ಪುರಸ್ಕೃತರು)
ಬ್ಯಾಂಕಿಂಗ್ ವಲಯದಲ್ಲಿ ಕೆಲಸಕ್ಕೆ ಸೇರಿಕೊಳ್ಳುವ ಉತ್ಸಾಹ ಹೊಂದಿರುವ ಯುವಕ/ಯುವತಿಯರಿಗೆ ಇಲ್ಲಿದೆ ಹೊಸ ಅವಕಾಶ. ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ಸ್ಪೆಶಲಿಸ್ಟ್ ಅಧಿಕಾರಿಗಳ (special officers) ನೇಮಕಾತಿ (Banking Jobs) ಪ್ರಕ್ರಿಯೆಗೆ (ಸಿಆರ್‌ಪಿ) ಅರ್ಜಿ ಆಹ್ವಾನಿಸಿದೆ. ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳು (nationalized banks) ಇದರಲ್ಲಿ ಪಾಲ್ಗೊಳ್ಳುತ್ತಿವೆ.
ಯಾವ್ಯಾವ ಹುದ್ದೆಗಳು? (ಸ್ಕೇಲ್-1)
⮚ ಐಟಿ ಆಫೀಸರ್ -120
⮚ ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ -500
⮚ ರಾಜ್‌ಭಾಷಾ ಅಧಿಕಾರಿ -41
⮚ ಲಾ ಆಫೀಸರ್ -10
⮚ ಎಚ್ಆರ್/ಪರ್ಸನಲ್ ಆಫೀಸರ್ – 31
⮚ ಮಾರ್ಕೆಟಿಂಗ್ ಆಫೀಸರ್ -700
ಯಾವ್ಯಾವ ಬ್ಯಾಂಕ್‌ಗಳಲ್ಲಿ ಹುದ್ದೆ?
● ಬ್ಯಾಂಕ್ ಆಫ್ ಇಂಡಿಯಾ
● ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
● ಇಂಡಿಯನ್ ಒವರ್‌ಸೀಸ್ ಬ್ಯಾಂಕ್
● ಪಂಜಾಬ್ ನ್ಯಾಷನಲ್ ಬ್ಯಾಂಕ್
ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್-500
BANK | SC | ST | OBC | EWS | UR | TOTAL |
CBI | 60 | 30 | 108 | 40 | 162 | 400 |
PNB | 15 | 07 | 27 | 10 | 41 | 100 |
TOTAL | 75 | 37 | 135 | 50 | 203 | 500 |
ಎಚ್ಆರ್/ಪರ್ಸನಲ್ ಆಫೀಸರ್ – 31
BANK | SC | ST | OBC | EWS | UR | TOTAL |
BOI | 1 | 0 | 3 | 1 | 7 | 12 |
CBI | 2 | 1 | 4 | 1 | 7 | 15 |
IOB | 0 | 0 | 1 | 0 | 3 | 4 |
TOTAL | 3 | 1 | 8 | 2 | 17 | 31 |
ಐಟಿ ಆಫೀಸರ್ -120
BANK | SC | ST | OBC | EWS | UR | TOTAL |
IOB | 3 | 1 | 5 | 3 | 8 | 20 |
PNB | 15 | 7 | 27 | 10 | 41 | 100 |
TOTAL | 18 | 8 | 32 | 13 | 49 | 120 |
ಲಾ ಆಫೀಸರ್ -10
BANK | SC | ST | OBC | EWS | UR | TOTAL |
BOI | 1 | 0 | 2 | 1 | 6 | 10 |
TOTAL | 1 | 0 | 2 | 1 | 6 | 1O |
ಮಾರ್ಕೆಟಿಂಗ್ ಆಫೀಸರ್ -700
BANK | SC | ST | OBC | EWS | UR | TOTAL |
PNB | 105 | 52 | 189 | 70 | 284 | 700 |
TOTAL | 105 | 52 | 189 | 70 | 284 | 700 |
ರಾಜ್ ಭಾಷಾ ಅಧಿಕಾರಿ -41
BANK | SC | ST | OBC | EWS | UR | TOTAL |
BOI | 2 | 1 | 4 | 1 | 8 | 16 |
CBI | 2 | 1 | 4 | 1 | 7 | 15 |
IOB | 2 | 1 | 3 | 1 | 3 | 10 |
TOTAL | 6 | 3 | 11 | 3 | 18 | 41 |
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: 850 ರೂ. (GSTಯೂ ಸೇರಿ)
ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ 175 ರೂ. (GSTಯೂ ಸೇರಿ)
ಶುಲ್ಕ ಪಾವತಿ
ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ವಿಧಾನ
ಆನ್‌ಲೈನ್‌ನಲ್ಲಿ ಮಾತ್ರ.
ಪ್ರಮುಖ ದಿನಾಂಕಗಳು:
ಆಗಸ್ಟ್ 1ರಿಂದ ಆಗಸ್ಟ್ 21, 2023ರವರೆಗೆ.
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?
ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್):
ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಮುಖ್ಯ ಪರೀಕ್ಷೆ:
ಬೆಂಗಳೂರು ಮತ್ತು ಹುಬ್ಬಳ್ಳಿ- ಧಾರವಾಡ
ವಯೋಮಿತಿ:
01.08.2023ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1993ಕ್ಕಿಂತ ಮುಂಚಿತವಾಗಿ ಮತ್ತು 01.08.2003ರ ನಂತರ ಜನಿಸಿರಬಾರದು. (ಎರಡೂ ದಿನಗಳು ಸೇರಿದಂತೆ)
ವಯೋಮಿತಿ ಸಡಿಲಿಕೆ:
ಸರಕಾರದ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು, ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು.
ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ – ಡಿಸೆಂಬರ್ 30/ 31, 2023ರಂದು.
ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ- ಜನವರಿ 28, 2024.
ಮೂರನೇ ಹಂತ: ಸಂದರ್ಶನ
ಫೆಬ್ರವರಿ- ಮಾರ್ಚ್ 2024.
ಪ್ರಾತಿನಿಧಿಕ ಹಂಚಿಕೆ: ಏಪ್ರಿಲ್ 2024
ನೇಮಕಾತಿ ಹೇಗೆ?
ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ, ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ.
ಆನ್ಲೈನ್‌ನಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು. ಅವರು ಮುಖ್ಯ ಪರೀಕ್ಷೆಗೆ ಹಾಜರಾಗಬೇಕು, ನಂತರ ಅಲ್ಲಿ ಪಡೆದ ಅಂಕೆಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ಶೈಕ್ಷಣಿಕ ಅರ್ಹತೆಗಳೇನು?
ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
1) ಐಟಿ ಆಫೀಸರ್ ಹುದ್ದೆಗೆ: ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಎಲೆಕ್ಟ್ರಾನಿಕ್ಸ್/ /ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ ಸ್ಟ್ರುಮೆಂಟೇಷನ್‌ನಲ್ಲಿ ನಾಲ್ಕು ವರ್ಷಗಳ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿ ಪದವಿ ಅಥವಾ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟುಮೆಂಟೇಶನ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅಥವಾ ಪದವಿ ಜೊತೆಯಲ್ಲಿ DOEACC “B” ಲೆವೆಲ್ ಪಾಸಾಗಿರಬೇಕು.
2) ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್: ಕೃಷಿ/ತೋಟಗಾರಿಕೆ / ಪಶುಸಂಗೋಪನೆ/ ಪಶು ವೈದ್ಯಕೀಯ ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿಎಂಜಿನಿಯರಿಂಗ್ ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಕೃಷಿ/ ಮೀನುಗಾರಿಕೆ ಇಂಜಿನಿಯರಿಂಗ್ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.
3) ಲಾ ಆಫೀಸರ್ ಹುದ್ದೆಗೆ: ಎಲ್‌ಎಲ್‌ಬಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್‌ನ ಸದಸ್ಯತ್ವ ಪಡೆದಿರಬೇಕು.
4) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ: ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.
5) ಎಚ್‌ಆರ್/ ಪರ್ಸನಲ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್ಆರ್/ ಎಚ್ಆರ್ಡಿ/ ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರ ಅಥವಾ ಡಿಪ್ಲೊಮಾ ಮಾಡಿರಬೇಕು.
6) ಮಾರ್ಕೆಟಿಂಗ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಎರಡು ವರ್ಷಗಳ ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ PGDBA /PGDBM/PGPM/PGDM ಮಾರ್ಕೆಟಿಂಗ್‌ನಲ್ಲಿ ಸ್ಪೆಶಲೈಜನೇಶನ್ ಮಾಡಿರಬೇಕು. ಎರಡು ವಿಷಯಗಳ ಸ್ಪೆಶಲೈಜನೇಶನ್ ಸಂದರ್ಭದಲ್ಲಿ, ಒಂದು ವಿಷಯ ಮೇಲೆ ಸೂಚಿಸಿದ ಕ್ಷೇತ್ರದಲ್ಲಿರಬೇಕು. ಮೇಜರ್/ಮೈನರ್ ವಿಶೇಷತೆಗಳ ಸಂದರ್ಭದಲ್ಲಿ, ಮೇಜರ್ ವಿಷಯ ಸೂಚಿಸಲಾದ ಸ್ಟ್ರೀಮ್‌ನಲ್ಲಿರಬೇಕು. ಎರಡಕ್ಕಿಂತ ಹೆಚ್ಚು ಸ್ಪೆಶಲೈಜನೇಶನ್‌ನಲ್ಲಿ ಪಿಜಿ ಪದವಿ (ಎಂಎಂಎಸ್ ಅಥವಾ ಎಂಬಿಎ)/ಪಿಜಿ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಇದನ್ನೂ ಗಮನಿಸಿ:
IT ಆಫೀಸರ್ ಸ್ಕೇಲ್-I ಹೊರತುಪಡಿಸಿ ಬೇರೆ ಹುದ್ದೆಗಳಿಗೆ: ಅಭ್ಯರ್ಥಿಯು ಕಂಪ್ಯೂಟರ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ. (ಕಂಪ್ಯೂಟರ್‌ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಪ್ರೌಢಶಾಲೆ /ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (Information Technology) ಯನ್ನು ಒಂದು ವಿಷಯವಾಗಿ ಓದಿರಬೇಕು.
ಕ್ರೆಡಿಟ್ ಇತಿಹಾಸ:
(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು. ಮತ್ತು ಬ್ಯಾಂಕ್‌ಗಳಿಗೆ ಸೇರುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿನದನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್‌ಗಳ ನೀತಿಯ ಪ್ರಕಾರ ಇರುತ್ತದೆ, ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.
(ii) ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದ ಅಭ್ಯರ್ಥಿಗಳು, CIBIL ಸ್ಥಿತಿಯನ್ನು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಪೇಕ್ಷಣಾ ಪತ್ರ(NOC) ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.
ಸೂಚನೆ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯವಿಲ್ಲ.
ನೇಮಕ ಹೇಗೆ?
ಪೂರ್ವಭಾವಿ ಪರೀಕ್ಷೆ ಒಂದು ಗಂಟೆ ಕಾಲ ನಡೆಯಲಿದ್ದು, (ಪ್ರತಿ ಪತ್ರಿಕೆಗೂ 40 ನಿಮಿಷಗಳಂತೆ ಒಟ್ಟಾರೆ 120 ನಿಮಿಷಗಳು) 125 ಅಂಕಗಳಿಗೆ 150 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲೀಷ್ ಲಾಂಗ್ವೇಜ್‌ಗೆ 50 ಪ್ರಶ್ನೆ (25 ಅಂಕ), ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್‌ಗೆ 50 ಪ್ರಶ್ನೆ (50 ಅಂಕ) ಹಾಗೂ ರೀಸನಿಂಗ್ ಎಬಿಲಿಟಿಯ 50 ಪ್ರಶ್ನೆ(50 ಅಂಕ)ಗಳಿರಲಿವೆ. (ಇದು ರಾಜ್‌ಭಾಷಾ ಅಧಿಕಾರಿ ಹಾಗೂ ಲಾ ಆಫೀಸರ್ ಹುದ್ದೆಗಳಿಗೆ ಹೊರತಾಗಿ. ಇವೆರಡೂ ಹುದ್ದೆಗಳಿಗೆ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಪರೀಕ್ಷೆ ಬದಲಾಗಿ General Awareness with Special Reference to Banking Industry 50(50 ಅಂಕ) ಪ್ರಶ್ನೆಗಳಿರಲಿವೆ.)
ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ. (ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ) ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡಗಳಲ್ಲಿ ಮಾತ್ರ ನಡೆಯಲಿದ್ದು, ನಿಗದಿತ ದಿನದಂದು ಆನ್‌ಲೈನ್‌ನಲ್ಲಿಯೇ ಲಿಖಿತ ಪರೀಕ್ಷೆ ನಡೆಯಲಿವೆ. ಮುಖ್ಯ ಪರೀಕ್ಷೆಯು ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ್ದು 45 ನಿಮಿಷಗಳ ಕಾಲ ನಡೆಯಲಿದ್ದು, 60 ಪ್ರಶ್ನೆಗಳನ್ನು 60 ಅಂಕಗಳಿಗೆ ಕೇಳಲಾಗುತ್ತದೆ. (ರಾಜಭಾಷಾ ಅಧಿಕಾರಿಗಳ ಹುದ್ದೆಗಳಿಗೆ ಡಿಸ್ಕೃಪ್ಟಿವ್ ಟೆಸ್ಟ್ ಎರಡು ಹಂತಗಳಲ್ಲಿ ನಡೆಯಲಿದ್ದು ವೃತ್ತಿಪರ ಜ್ಞಾನಕ್ಕೆ ಸಂಬಂಧಿಸಿದ 45 ಪ್ರಶ್ನೆ ಒಬ್ಜೆಕ್ಟಿವ್ ಮಾದರಿಯಲ್ಲಿದ್ದು, ವ್ತತ್ತಿಪರ ಜ್ಞಾನಕ್ಕೆ ಸಂಬಂದಿಸಿದಂತೆ ಇನ್ನೊಂದು ಡಿಸ್ಕ್ರೆಪ್ಟಿವ್ ಪತ್ರಿಕೆಯಲ್ಲಿ ಎರಡು ಪ್ರಶ್ನೆಗಳಿರಲಿದ್ದು ಅವಧಿ ಎರಡೂ ಪರೀಕ್ಷೆಗಳಿಗೆ 30 ನಿಮಿಷಗಳಂತೆ ಒಟ್ಟಾರೆ ಒಂದು ಗಂಟೆಯ ಅವಧಿ ನೀಡಲಾಗಿದ್ದು ಗರಿಷ್ಟ 60 ಸಂಕ ಗಳಾಗಿದ್ದು ಸಂಕಗಳಾಗಿದ್ದು ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರವನ್ನು ಬರೆಯಬೇಕು.
ಕನ್ನಡದಲ್ಲಿ ಪರೀಕ್ಷೆ ಇಲ್ಲ
ಈ ಹಿಂದಿನಂತೆ ಇದ್ದ ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡಿದ್ದು ಈ ಸಲ ವೃತ್ತಿಪರ ಜ್ಞಾನದ ಪರೀಕ್ಷೆ ಬರೆಯಬೇಕು. (ಸ್ಪೆಶಲಿಸ್ಟ್ ಹುದ್ದೆಗಳಾಗಿರುವುದರಿಂದ). ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.
ಮೂರನೇ ಹಂತ ಸಂದರ್ಶನ
ಮುಖ್ಯ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ. ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸಂದರ್ಶನ (100 ಅಂಕಗಳು) ಬ್ಯಾಂಕ್‌ಗಳು ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ'(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿಕೊಂಡಿರುವ ಆದರೆ (‘Non-Creamy layer’)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. EWS ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.
ಆಯ್ಕೆ ಪಟ್ಟಿ:
ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ-3ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ-1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ-2ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (60 ಅಂಕಗಳನ್ನು 100ಕ್ಕೆ ಪರಿವರ್ತನೆ ಮಾಡಿ) ಅದರ 80% ಅಂಕಗಳು ಮತ್ತು ಅಭ್ಯರ್ಥಿಗಳ ಹಂತ-3 ರಲ್ಲಿ ಪಡೆದ ಅಂಕಗಳನ್ನು (100 ಅಂಕಗಳಲ್ಲಿ) ಅದರ 20% ಅಂಕಗಳನ್ನು ಸೇರಿಸಿ (100ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ. ಹಂತ- 2 ಮತ್ತು ಹಂತ-3ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ವೆಬ್ ಲಿಂಕ್: https://ibpsonline.ibps.in/crpsp13jun23/ ಹಾಗೂ ಅಧಿಸೂಚನೆಗೆ: https://www.ibps.in/
ಹೆಚ್ಚಿನ ಉದ್ಯೋಗ ಮಾಹಿತಿಗೆ ಕ್ಲಿಕ್ ಮಾಡಿ: ಉದ್ಯೋಗ