ಮೈಸೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಪದವೀಧರರಿಂದ ಮತ್ತು ಡಿಪ್ಲೊಮಾ ಮಾಡಿದವರಿಂದ ಅಪ್ರೆಂಟಿಸ್‌ಷಿಪ್‌ಗೆ ಅರ್ಜಿ (BESCOM recruitment 2022) ಆಹ್ವಾನಿಸಿದೆ. ಒಟ್ಟು 400 ಅಭ್ಯರ್ಥಿಗಳಿಗೆ ಅವಕಾಶ ದೊರೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದು ಒಂದು ವರ್ಷಗಳ ಅವಧಿಯ ಅಪ್ರೆಂಟಿಸ್‌ಷಿಪ್ ಆಗಿದ್ದು, ಆಯ್ಕೆಯಾದ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಗೆ ಮಾಸಿಕ 9 ಸಾವಿರ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ 8 ಸಾವಿರ ಸ್ಟೈಫಂಡ್ ನೀಡಲಾಗುತ್ತದೆ.
ಎಷ್ಟು ಮಂದಿಗೆ ಅವಕಾಶ?
ಒಟ್ಟು 325 ಮಂದಿ ಪದವೀಧರರು ಅಪ್ರೆಂಟಿಸ್‌ಷಿಪ್ ಮಾಡಬಹುದಾಗಿದೆ. ಇದರಲ್ಲಿ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ -143, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್-116, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್-36, ಇನ್ಫಾರ್ಮೆಷನ್ ಸೈನ್ಸ್ ಆ್ಯಂಡ್ ಎಂಜಿನಿಯರ್-20, ಸಿವಿಲ್ ಎಂಜಿನಿಯರ್-05 ಇನ್‌ಸ್ಟ್ರುಮೆಂಟೇಷನ್ ಟೆಕ್ನಾಲಜಿ ಎಂಜಿನಿಯರಿಂಗ್-05 ಮಾಡಿದ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ.
ಡಿಪ್ಲೊಮಾ ಮಾಡಿದ 75 ಅಭ್ಯರ್ಥಿಗಳು ಅಪ್ರೆಂಟಿಸ್‌ಷಿಪ್ ಮಾಡುಬಹುದಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ -55, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್-10, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್-10 ಡಿಪ್ಲೊಮಾ ಮಾಡಿದವರಿಗೆ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು 2019ರ ಅಕ್ಟೋಬರ್ ನಂತರ ಅಂದರೆ 2020, 2021 ಮತ್ತು 2022ರ ನಂತರ ಎಂಜಿನಿಯರಿಂಗ್ ಪದವಿ ಮತ್ತು ಡಿಪ್ಲೊಮಾ ಮಾಡಿದವರು ಮಾತ್ರ ಈ ಅಪ್ರೆಂಟಿಸ್‌ಷಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅಧಿಸೂಚನೆಯಲ್ಲಿರುವುದೇನು?
ಆಯ್ಕೆ ಹೇಗೆ?
ಅಭ್ಯರ್ಥಿಗಳು ಪದವಿ ಮತ್ತು ಡಿಪ್ಲೊಮಾದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ. ಬಂದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ನಂತರ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆ ನಡೆಸಿ, ಅಪ್ರೆಂಟಿಸ್‌ಷಿಪ್‌ಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿಯೇ ದಾಖಲೆ ಪರಿಶೀಲನೆ ನಡೆಯಲಿದೆ. ದಾಖಲೆ ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಟಿಎ/ಡಿಎ ನೀಡಲಾಗುತ್ತದೆ.
ಇತ್ತ ಗಮನಿಸಿ
- ಪದವೀಧರ ಅಪ್ರೆಂಟಿಸ್‌ಷಿಪ್‌ಗೆ ಬಿಟೆಕ್ ಮಾಡಿದವರೂ ಅರ್ಜಿ ಸಲ್ಲಿಸಬಹುದು.
- ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ ಮತ್ತು ಸಂಪರ್ಕ ವಿಳಾಸ ನೀಡುವುದು ಅವಶ್ಯಕ.
- ಮೀಸಲಾತಿಯನ್ವಯ ಅವಕಾಶವನ್ನು ಹಂಚಿಕೆ ಮಾಡಲಾಗಿರುತ್ತದೆ.
- ಅಭ್ಯರ್ಥಿಗಳು ಕನ್ನಡದಲ್ಲಿ ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
- ಹೆಚ್ಚಿನ ಮಾಹಿತಿಗೆ ವೆಬ್: https://bescom.karnataka.gov.in/
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ನ್ಯಾಷನಲ್ ವೆಬ್ ಪೋರ್ಟಲ್ (www.mhrdnats.gov.in) ಮೂಲಕ ಅರ್ಜಿ ಸಲ್ಲಿಸಬೇಕಿರುತ್ತದೆ. ಈಗಾಗಲೇ ಅಪ್ರೆಂಟಿಸ್‌ಷಿಪ್‌ಗಾಗಿನ ಈ ಪೋರ್ಟಲ್‌ನಲ್ಲಿ ಹೆಸರು ನೊಂದಾಯಿಸಿಕೊಂಡಿರುವವರು ಬೆಸ್ಕಾಂ ಅನ್ನು ಆಯ್ಕೆಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಎನ್‌ಎಟಿಎಸ್‌ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾದರೆ, ಬೆಸ್ಕಾಂಗೆ ಅರ್ಜಿ ಸಲ್ಲಿಸಲು ನವೆಂಬರ್ 07 ಕೊನೆಯ ದಿನವಾಗಿರುತ್ತದೆ. ನವೆಂಬರ್ 14 ರಂದು ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ. ನವೆಂಬರ್ 21 ರಿಂದ 23ರವರೆಗೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ.
ಇದನ್ನೂ ಓದಿ | KPSC Recruitment 2022 | ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ