ಬೆಂಗಳೂರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಉಪ ಮುಖ್ಯ ಎಂಜಿನಿಯರ್, ಹೆಚ್ಚುವರಿ ಮುಖ್ಯ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 8 ಹುದ್ದೆಗಳು (8 vaccancy) ಖಾಲಿ ಇವೆ. ಆಸಕ್ತರು ಅಕ್ಟೋಬರ್ 25ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ ಬೆಂಗಳೂರು ಆಗಿದ್ದು, ತಿಂಗಳ ವೇತನ 85,000 ರೂ.-1,65,000 ರೂ.
ಹುದ್ದೆಗಳ ವಿವರ
ಮುಖ್ಯ ಎಂಜಿನಿಯರ್ (ಎಲೆಕ್ಟ್ರಿಕಲ್)- 1, ಹೆಚ್ಚುವರಿ ಮುಖ್ಯ ಎಂಜಿನಿಯರ್ (ಟ್ರಾಕ್ಷನ್ ಮತ್ತು RSS)- 2, ಉಪ ಮುಖ್ಯ ಎಂಜಿನಿಯರ್ (ಸಿಸ್ಟಮ್ ಒಪ್ಪಂದಗಳು)- 1, ಉಪ ಮುಖ್ಯ ಎಂಜಿನಿಯರ್ (ಕಾರ್ಯಾಚರಣೆ ಸುರಕ್ಷತೆ)- 1, ಉಪ ಮುಖ್ಯ ಎಂಜಿನಿಯರ್ (ECS/TVS)- 1, ಉಪ ಮುಖ್ಯ ಎಂಜಿನಿಯರ್ (ಸಿಗ್ನಲಿಂಗ್)- 1, ಕಾರ್ಯನಿರ್ವಾಹಕ ಎಂಜಿನಿಯರ್ (ಸಿಗ್ನಲಿಂಗ್)- 1. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಇದನ್ನೂ ಓದಿ: KFD: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಅವಕಾಶ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ
- ಮುಖ್ಯ ಎಂಜಿನಿಯರ್ (ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ
- ಹೆಚ್ಚುವರಿ ಮುಖ್ಯ ಎಂಜಿನಿಯರ್ (ಟ್ರಾಕ್ಷನ್ ಮತ್ತು RSS): ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ
- ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಮ್ ಕಾಂಟ್ರಾಕ್ಟ್ಸ್): ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಮೆಕ್ಯಾನಿಕಲ್/ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್
- ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಷನ್ ಸೇಫ್ಟಿ): ಎಂಜಿನಿಯರಿಂಗ್ ಪದವಿ, ಎಂ.ಎಸ್ಸಿ
- ಉಪ ಮುಖ್ಯ ಇಂಜಿನಿಯರ್ (ECS/TVS): ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಇ. ಅಥವಾ ಬಿ.ಟೆಕ್
- ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್): ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್
- ಕಾರ್ಯನಿರ್ವಾಹಕ ಇಂಜಿನಿಯರ್ (ಸಿಗ್ನಲಿಂಗ್): ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂನಿಯರಿಂಗ್ನಲ್ಲಿ ಡಿಪ್ಲೊಮಾ, ಬಿ.ಇ. ಅಥವಾ ಬಿ.ಟೆಕ್
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ನಕಲನ್ನು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, K.H.ರಸ್ತೆ, ಶಾಂತಿನಗರ, ಬೆಂಗಳೂರು-560027 ವಿಳಾಸಕ್ಕೆ ಕಳುಹಿಸಬೇಕು.