Site icon Vistara News

Cabinet Secretariat DFO Recruitment 2023: ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಕೂಡಲೇ ಅರ್ಜಿ ಸಲ್ಲಿಸಿ

dfo

dfo

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌. ಕ್ಯಾಬಿನೆಟ್ ಸೆಕ್ರೆಟರಿಯೇಟ್ ಡಿಎಫ್ಒ ನೇಮಕಾತಿ 2023ಕ್ಕಾಗಿ(Cabinet Secretariat DFO Recruitment 2023) ಅಧಿಸೂಚನೆ ಹೊರಡಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (ಟೆಕ್ನಿಕಲ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್‌ ಪೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ನವೆಂಬರ್‌ 6.

ವಿದ್ಯಾರ್ಹತೆ

ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ 2023 ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.

ವಯೋಮಿತಿ ಮತ್ತು ಆಯ್ಕೆ ವಿಧಾನ

ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ 2023 ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ. ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲಿಗೆ ಅಭ್ಯರ್ಥಿಗಳ ಗೇಟ್‌ (Graduate Aptitude Test in Engineering-GATE) ಅಂಕಗಳ ಆಧಾರದಲ್ಲಿ ಶಾರ್ಟ್‌ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಸಂದರ್ಶನ ಇರುತ್ತದೆ. ಡಾಕ್ಯುಮೆಂಟ್‌ ಪರಿಶೀಲನೆ ನಂತರ ವೈದ್ಯಕೀಯ ಪರೀಕ್ಷೆ ನಡೆದು ಅಭ್ಯರ್ಥಿಯ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ ಮತ್ತು ವಿಳಾಸ

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಮಾಸಿಕ 90,000 ದೊರೆಯಲಿದೆ. ಭಾರತದ ಎಲ್ಲಿ ಬೇಕಾದರೂ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ cabsec.gov.in ಗಮನಿಸಿ.

ಇದನ್ನೂ ಓದಿ: Indian Navy SSC Recruitment: ನೌಕಾದಳದಲ್ಲಿ ಖಾಲಿ ಇರುವ 224 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Exit mobile version