ನವ ದೆಹಲಿ: ದೇಶದ ಮೊದಲ ವಾಣಿಜ್ಯ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಐದು ಸಾವಿರ ಅಪ್ರೆಂಟಿಸ್‌ಗಳ ನೇಮಕಕ್ಕೆ (Central Bank Recruitment 2023) ಸಂಬಂಧಿಸಿದಂತೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಮಾರ್ಚ್ 20 ರಂದು ಅಪ್ರೆಂಟಿಸ್‌ಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಏ.03 ಕೊನೆಯ ದಿನವೆಂದು ಪ್ರಕಟಿಸಲಾಗಿತ್ತು. ಆದರೆ ಈಗ ಮತ್ತೆ ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಏ.ಪ್ರಿಲ್ 11 ರಿಂದ ಏಪ್ರಿಲ್ 21ರ ವರೆಗೆ ಅವಕಾಶ ನೀಡಲಾಗಿದೆ. ವಯೋಮಿತಿಯನ್ನು ದಿನಾಂಕ 31-07-2023ಕಕ್ಕೆ ಪರಿಗಣಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ ಬೆಂಗಳೂರು ರೀಜನ್‌ನಲ್ಲಿ 70 ಮತ್ತು ಹುಬ್ಬಳ್ಳಿ ರೀಜನ್‌ನಲ್ಲಿ 45 ಒಟ್ಟು ಸೇರಿ 115 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳನ್ನು ಮೀಸಲಾತಿಯನ್ವಯ ಹಂಚಿಕೆ ಮಾಡಲಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಬ್ಯಾಂಕ್‌ನ ವೆಬ್‌ಸೈಟ್‌ನಲ್ಲಿ ಇದಕ್ಕೆ ಲಿಂಕ್ ಒದಗಿಸಲಾಗಿದೆ. ಆನ್‌ಲೈನ್ ಹೊರತು ಪಡಿಸಿ, ಬೇರೆ ರೀತಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2023.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://www.centralbankofindia.co.in/en/recruitments
ವಿದ್ಯಾರ್ಹತೆ ಏನು?
ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಥಳೀಯ ಭಾಷೆಯಲ್ಲಿ ಮಾತನಾಡಲು, ಬರೆಯಲು ಬರುತ್ತಿರಬೇಕಾದದು ಕಡ್ಡಾಯ. ಇದನ್ನು ಪರೀಕ್ಷಿಸಲು ಪರೀಕ್ಷೆ ಕೂಡ ನಡೆಸುವ ಸಾಧ್ಯತೆ ಇದೆ.
ವಯೋಮಿತಿ ಎಷ್ಟು?
ಅಭ್ಯರ್ಥಿಗಳು 20 ರಿಂದ 28 ವರ್ಷದೊಳಗಿನವರಾಗಿರಬೇಕು. ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು, ಒಬಿಸಿ ಅಭ್ಯರ್ಥಿಗಳಿಗೆ ಮೂರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ನೀಡಲಾಗಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದರೂ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಈ ಶುಲ್ಕ ಪಾವತಿಸಲು ಸೂಚಿಸಲಾಗುತ್ತದೆ. ಸಾಮಾನ್ಯ ಅಭ್ಯರ್ಥಿಗಳು 800 ರೂ. ಎಸ್‌ಸಿ/ಎಸ್‌ಟಿ ಹಾಗೂ ಎಲ್ಲ ಮಹಿಳಾ ಅಭ್ಯರ್ಥಿಗಳು 600 ರೂ. ಹಾಗೂ ಅಂಗವಿಕಲ ಅಭ್ಯರ್ಥಿಗಳು 400 ರೂ. ಪರೀಕ್ಷಾ ಶುಲ್ಕವನ್ನು ಜಿಎಸ್‌ಟಿಯೊಂದಿಗೆ ಪಾವತಿಸಬೇಕಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here)ಕ್ಲಿಕ್ ಮಾಡಿ.
ಸ್ಟೈಫಂಡ್ ಎಷ್ಟು?
ಗ್ರಾಮೀಣ ಭಾಗದ ಬ್ಯಾಂಕ್‌ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 10,000, ನಗರ ಪ್ರದೇಶದ ಶಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ 12,000 ಹಾಗೂ ಮೆಟ್ರೋ ನಗರಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ 15,000 ರೂ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಜತೆಗೆ ದೈನಂದಿನ ಭತ್ಯೆಯೂ ಇರುತ್ತದೆ.
ನೇಮಕ ಹೇಗೆ?
ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು1:4 ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಇದರಲ್ಲಿಯೂ ಆರ್ಹತೆ ಪಡೆದವರನ್ನು ಮೀಸಲಾತಿಯನ್ವಯ ನೇಮಕ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : KPSC Recruitment 2023 : ಸಹಕಾರ ಸಂಘಗಳ ನಿರೀಕ್ಷಕರ 100 ಹುದ್ದೆ; ಅರ್ಜಿ ಸಲ್ಲಿಸಲು ಲಿಂಕ್ ಒದಗಿಸಿದ ಕೆಪಿಎಸ್‌ಸಿ