Site icon Vistara News

Central Bank Recruitment 2023 : 1000 ಮ್ಯಾನೇಜರ್‌ ನೇಮಕಕ್ಕೆ ಅರ್ಜಿ ಆಹ್ವಾನ; ಪದವೀಧರರಿಗೆ ಭರ್ಜರಿ ಅವಕಾಶ

central bank of india recruitment

ನವ ದೆಹಲಿ: ದೇಶದ ಮೊದಲ ವಾಣಿಜ್ಯ ಬ್ಯಾಂಕ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಒಂದು ಸಾವಿರ ಮ್ಯಾನೇಜರ್‌ಗಳ ನೇಮಕಕ್ಕೆ (Central Bank Recruitment 2023) ಅರ್ಜಿ ಆಹ್ವಾನಿಸಿದೆ.

ದೇಶಾದ್ಯಂತ 4,500 ಶಾಖೆಗಳನ್ನು ಹೊಂದಿರುವ ಈ ಬ್ಯಾಂಕ್‌ 5,77,000 ಕೋಟಿ ರೂ.ಗಳ ವ್ಯವಹಾರ ನಡೆಸುತ್ತಿದೆ. ಈಗಾಗಲೇ 31,000 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿದೆ. ಈಗ ಮಿಡ್ಡಲ್‌ ಮ್ಯಾನೇಜ್‌ಮೆಂಟ್‌ ಲೆವೆಲ್‌ನ (SCALE-II) ಒಂದು ಸಾವಿರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿರುತ್ತದೆ.

ಒಂದು ಸಾವಿರ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 150, ಎಸ್‌ಟಿ ಅಭ್ಯರ್ಥಿಗಳಿಗೆ 75, ಓಬಿಸಿ ಅಭ್ಯರ್ಥಿಗಳಿಗೆ 270, ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 100 ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 405 ಹುದ್ದೆಗಳನ್ನು ಮೀಸಲಿಡಲಾಗಿದೆ. ನೇಮಕ ಪ್ರಕ್ರಿಯೆ ನಡೆಯುವಾಗ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಗೊಂಡವರು ದೇಶದ ಯಾವುದೇ ಭಾಗದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕಿರುತ್ತದೆ.

ವಿದ್ಯಾರ್ಹತೆ ಮತ್ತು ಅನುಭವ

ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. CAIIB ಯಲ್ಲಿ ಅರ್ಹತೆ ಪಡೆದವರೂ ಅರ್ಜಿ ಸಲ್ಲಿಸಬಹುದು. ಅಗತ್ಯ ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಆಧ್ಯತೆ ನೀಡಲಾಗುತ್ತದೆ.

ವಿದ್ಯಾರ್ಹತೆಯ ಜತೆಗೆ ಅಭ್ಯರ್ಥಿಗಳು ಸಾರ್ವಜನಿಕ ಬ್ಯಾಂಕುಗಳಲ್ಲಿ, ಖಾಸಗಿ ಬ್ಯಾಂಕುಗಳಲ್ಲಿ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸರ್‌ ಹುದ್ದೆಯಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಅಥವಾ ಸಾರ್ವಜನಿಕ ಬ್ಯಾಂಕುಗಳಲ್ಲಿ, ಖಾಸಗಿ ಬ್ಯಾಂಕುಗಳಲ್ಲಿ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಕ್ಲರ್ಕ್‌ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಆರು ವರ್ಷಗಳ ಅನುಭವ ಇರಬೇಕು.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2023
ವೇತನ ಎಷ್ಟು? : ವೇತನ ಶ್ರೇಣಿ ರೂ. 48,170-1,740(1)-49,910-1,990(10)-69,810
ಹೆಚ್ಚಿನ ಮಾಹಿತಿಗೆ ವೆಬ್‌ ಸೈಟ್‌: https://www.centralbankofindia.co.in
ಸಂಪೂರ್ಣ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ವಯೋಮಿತಿ ಎಷ್ಟು?

ಅಭ್ಯರ್ಥಿಗಳ ವಯಸ್ಸು 32 ವರ್ಷ ಮೀರಿರಬಾರದು. ವಯೋಮಿತಿಯನ್ನು ದಿನಾಂಕ 31-05-2023 ಕಕ್ಕೆ ಲೆಕ್ಕ ಹಾಕಲಾಗುತ್ತದೆ. ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕು!

ಎಸ್‌ಸಿ/ ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳು 175 (+GST) ರೂ. ಮತ್ತು ಉಳಿದ ಎಲ್ಲ ಅಭ್ಯರ್ಥಿಗಳು 850 (+GST) ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here)ಕ್ಲಿಕ್‌ ಮಾಡಿ.

ನೇಮಕ ಹೇಗೆ?

ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ ಪರೀಕ್ಷೆ ನಡೆಸಲಾಗುತ್ತದೆ. ನೂರು ಅಂಕಗಳಿಗೆ ನಡೆಯಲಿರುವ ಈ ಪರೀಕ್ಷೆಯಲ್ಲಿ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಉತ್ತರ ಬರೆಯಲು ಒಂದು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಬ್ಯಾಂಕಿಂಗ್‌, ಕಂಪ್ಯೂಟರ್‌ ನಾಲೆಡ್ಜ್‌, ಪ್ರಸ್ತುತ ಆರ್ಥಿಕತೆಯ ಸ್ಥಿತಿ ಮತ್ತು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಇದು ಒಳಗೊಂಡಿರುತ್ತದೆ. ಇದರಲ್ಲಿ ಅರ್ಹತೆ ಪಡೆದವರನ್ನು ವೈಯುಕ್ತಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿರುತ್ತದೆ. ಆಗಸ್ಟ್‌ ಎರಡನೇ ಅಥವಾ ಮೂರನೇ ವಾರ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ.

ಇದನ್ನೂ ಓದಿ: IBPS Clerk Recruitment 2023 : ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ4,045 ಕ್ಲರ್ಕ್‌ ಹುದ್ದೆ; ಪದವೀದರರಿಂದ ಅರ್ಜಿ ಆಹ್ವಾನ

ಸಂದರ್ಶನಕ್ಕೂ ನೂರು ಅಂಕ ನಿಗದಿಯಾಗಿರುತ್ತದೆ. ಸಾಮಾನ್ಯ ಮತ್ತು ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಶೇ.50 ಮತ್ತು ಎಸ್‌ಸಿ/ಎಸ್‌ಟಿ/ ಓಬಿಸಿ ಅಭ್ಯರ್ಥಿಗಳು ಶೇ.45 ಅಂಕ ಪಡೆಯುವುದು ಕಡ್ಡಾಯವಾಗಿರುತ್ತದೆ.

Exit mobile version