Site icon Vistara News

CISF Recruitment 2023: 215 ಹೆಡ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

police job

police job

ಬೆಂಗಳೂರು: ಸೆಂಟ್ರಲ್‌ ಇಂಡಸ್ಟ್ರಿಯಲ್‌ ಸೆಕ್ಯುರಿಟಿ ಫೋರ್ಸ್‌ (Central Industrial Security Force-CISF Recruitment 2023) ಖಾಲಿ ಇರುವ ಹೆಡ್ ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಭಾರತಾದ್ಯಂತ ಒಟ್ಟು 215 ಹುದ್ದೆಗಳು ಖಾಲಿ ಇದ್ದು, ನವೆಂಬರ್‌ 28ರೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು. ಅಕ್ಟೋಬರ್‌ 30ರಿಂದ ಅರ್ಜಿ ಸಲ್ಲಿಸಬಹುದು. ಅಂಗೀಕೃತ ಶಿಕ್ಷಣ ಮಂಡಳಿ/ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ/ ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳು ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ / ರಾಷ್ಟ್ರೀಯ / ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರ್ಧಿಸಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಜನರಲ್‌ ಮತ್ತು ಯುಆರ್‌ ವರ್ಗದ ಅಭ್ಯರ್ಥಿಗಳು 18ರಿಂದ 23 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಜನರಲ್‌ ಮತ್ತು ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಎಸ್‌ಸಿ/ ಎಸ್‌ಟಿ/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು.

ಎತ್ತರ

ಎಲ್ಲ ಪುರುಷ ಅಭ್ಯರ್ಥಿಗಳು 167 ಸೆಂಟಿ ಮೀಟರ್‌ ಎತ್ತರ ಹೊಂದಿರಬೇಕು. ಎದೆ ಅಳತೆ 81-86 ಸೆಂಟಿ ಮೀಟರ್‌ ಇರಬೇಕು. ಎಲ್ಲ ಮಹಿಳಾ ಅಭ್ಯರ್ಥಿಗಳ ಎತ್ತರ 153 ಸೆಂಟಿ ಮೀಟರ್‌ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ವಿಧಾನ ಮತ್ತು ವೇತನ

ಎರಡು ಹಂತಗಳ ಮೂಲಕ ಆಯ್ಕೆ ನಡೆಯಲಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕ ಪರೀಕ್ಷೆ, ಪ್ರಾವೀಣ್ಯತೆ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ನಡೆಯಲಿದೆ. ಎರಡನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 25,500 ರೂ.-81,100 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ವಿಳಾಸ https://www.cisf.gov.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ನ.6ರಿಂದ ಅರ್ಜಿ ಸಲ್ಲಿಸಿ

Exit mobile version