CRPF Recruitment 2023 : ಸಿಆರ್‌ಪಿಎಫ್‌ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆ; ರಾಜ್ಯದಲ್ಲಿಯೂ 466 ಹುದ್ದೆಗಳಿಗೆ ನೇಮಕ Vistara News
Connect with us

ಉದ್ಯೋಗ

CRPF Recruitment 2023 : ಸಿಆರ್‌ಪಿಎಫ್‌ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆ; ರಾಜ್ಯದಲ್ಲಿಯೂ 466 ಹುದ್ದೆಗಳಿಗೆ ನೇಮಕ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ರಾಜ್ಯದಲ್ಲಿನ 466 ಹುದ್ದೆಗಳು ಸೇರಿದಂತೆ ಒಟ್ಟು 9,212 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ (CRPF Recruitment 2023) ಮಾಡಿಕೊಳ್ಳುತ್ತಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

CRPF Recruitment 2023 notification for 9212 constable posts details in kannada
Koo

ನವ ದೆಹಲಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯು (ಸಿಆರ್‌ಪಿಎಫ್‌) 9,212 ಕಾನ್ಸ್‌ಟೇಬಲ್‌ (ಟೆಕ್ನಿಕಲ್‌ ಮತ್ತು ಟ್ರೇಡ್ಸ್‌ಮನ್‌) ನೇಮಕಕ್ಕೆ ಅಧಿಸೂಚನೆ (CRPF Recruitment 2023) ಹೊರಡಿಸಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್‌ 27 ರಿಂದ ಏಪ್ರಿಲ್‌ 24 ರವರೆಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಒಟ್ಟು 9,212 ಹುದ್ದೆಗಳ ಪೈಕಿ 9,105 ಹುದ್ದೆಗಳು ಪುರುಷರಿಗೆ ಮೀಸಲಾಗಿದ್ದರೆ, 107 ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ: ರೂ. 21,700 – 69,100. ನಂತೆ ವೇತನ ನೀಡಲಾಗುತ್ತದೆ.

ಈ ಹುದ್ದೆಗಳು ರಾಜ್ಯವಾರು ಹಂಚಿಕೆಯಾಗಿದ್ದು, ರಾಜ್ಯದಲ್ಲಿ ಪುರುಷ ಅಭ್ಯರ್ಥಿಗಳಿಗೆ 460 ಹುದ್ದೆಗಳು ಹಾಗೂ ಮಹಿಳೆಯರಿಗೆ 6 ಹುದ್ದೆಗಳಿವೆ. ಹುದ್ದೆಗಳ ಹಂಚಿಕೆಯ ಮಾಹಿತಿ ಇಲ್ಲಿದೆ;

crpf recruitment 2023

ಅರ್ಹತೆಗಳೇನು?

ಬಹುತೇಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಕೆಲವು ಹುದ್ದೆಗಳಿಗೆ ಮಾತ್ರ ದ್ವಿತೀಯ ಪಿಯುಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

21 ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಈ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ವಯೋಮಿತಿಯನ್ನು ದಿನಾಂಕ 01/08/2023 ಕ್ಕೆ ಲೆಕ್ಕ ಹಾಕಲಾಗುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಪುರುಷ ಅಭ್ಯರ್ಥಿಗಳು 170 ಸೆಂ.ಮೀ. ಎತ್ತರವಿರಬೇಕು. ಎದೆಯ ಸುತ್ತಳತೆ 80 ಸೆಂ.ಮೀ. ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು 157 ಸೆಂ.ಮೀ. ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕ ಹೊಂದಿರಬೇಕಾದದು ಅವಶ್ಯಕ.

ನೇಮಕಾತಿಯ ವೇಳಾಪಟ್ಟಿ ಇಂತಿದೆ;

crpf recruitment 2023

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://crpf.gov.in/

ನೇಮಕ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯು ಮುಂದಿನ ಜುಲೈ ಒಂದರಿಂದ 13ರ ವರೆಗೆ ನಡೆಯಲಿದೆ. ಜೂನ್‌20 ರಿಂದ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಒದಗಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತಾ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ವೃತ್ತಿ ಪರೀಕ್ಷೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಕಂಪ್ಯೂಟರ್‌ ಆಧಾರಿತ ಪರೀಕ್ಷೆಯು ನೂರು ಅಂಕಗಳಿಗೆ ನಡೆಯಲಿದ್ದು, ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಹಿಂದಿ/ ಇಂಗ್ಲಿಷ್‌ ತಿಳಿದಿರುವ ಕುರಿತು ಪರೀಕ್ಷೆ ಕೂಡ ನಡೆಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಕಂಪ್ಯೂಟರ್‌ ಆಧಾರಿತ ಪರೀಕ್ಷೆಯನ್ನು ರಾಜ್ಯದ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್‌, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಪುತ್ತೂರು, ಶಿವಮೊಗ್ಗ, ತುಮಕೂರು ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇದನ್ನೂ ಓದಿ : KPSC Recruitment 2023 : 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕ; ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News : ಸರ್ಕಾರಿ ನೌಕರಿಯ ಹೊಸ ಅಧಿಸೂಚನೆಗಳಿಲ್ಲ; ನೇಮಕ ಪ್ರಕ್ರಿಯೆ ನಡೆಸಲು ಅಡ್ಡಿಯಿಲ್ಲ!

ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಸರ್ಕಾರಿ ಹುದ್ದೆಗಳಿಗೆ (Job News) ನೇಮಕಾತಿ ನಡೆಯುತ್ತದೆಯೇ? ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸಲಾಗುತ್ತದೆಯೇ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Edited by

No new notifications of government jobs There is no hindrance in the recruitment process
Koo

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿ, ನೀತಿ ಸಂಹಿತೆ ಜಾರಿಗೆ ಬಂದಿದೆ. ಇದು ಸರ್ಕಾರಿ ನೇಮಕ ಪ್ರಕ್ರಿಯೆಯ ಮೇಲೂ ಪರಿಣಾಮ ಬೀರಲಿದೆ. ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಹೊಸ ನೇಮಕಾತಿ (Job News) ಅಧಿಸೂಚನೆಗಳು ಪ್ರಕಟವಾಗುವುದಿಲ್ಲ.

ಆದರೆ ಈಗಾಗಲೇ ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಲು, ನೇಮಕ ಪ್ರಕ್ರಿಯೆ ಮುಂದುವರಿಸಲು ಯಾವುದೇ ತೊಂದರೆ ಇಲ್ಲ. ಹೀಗಾಗಿ ಕೆಪಿಎಸ್‌ಸಿಯು ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಈಗಾಗಲೇ ನಿಗದಿಪಡಿಸಿದ ದಿನಾಂಕದಂದು ನಡೆಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನೇಮಕಾತಿ ಪರೀಕ್ಷೆ ನಡೆಸಲು ಅಡ್ಡಿಯಿಲ್ಲ!

kpsc recruitment 2023
kea recruitment 2023

ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಹೊಸ ನೇಮಕಾತಿ ಪ್ರಕಟಣೆಗೆ ಅವಕಾಶವಿರುವುದಿಲ್ಲ. ಕೇವಲ ತುರ್ತು ಪ್ರಸ್ತಾವನೆಗಳಿಗೆ ಮಾತ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿಯು ಪರಿಶೀಲನೆ ನಡೆಸಿ ಅನುಮತಿ ನೀಡಲಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.

ಹೀಗಾಗಿ ಕೆಪಿಎಸ್‌ಸಿಯು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್‌ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್‌ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್‌ -ಬಿ) 368 ಹುದ್ದೆಗಳ ನೇಮಕಕ್ಕೆ ಹೊರಡಿಸಬೇಕಾಗಿದ್ದ ಅಧಿಸೂಚನೆಗಳು ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಹೊರಡಿಸಬಹುದಾಗಿದೆ. ಆದರೆ ಈಗಾಗಲೇ ಅಧಿಸೂಚನೆ ಪ್ರಕಟವಾಗಿರುವ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಕೆಇಎಯಿಂದ ನೇಮಕಾತಿ

ಈ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಸ್ಟೇಟ್ಸ್‌ ಮಿನರಲ್ಸ್‌ ಕಾರ್ಪೋರೇಷನ್‌ ಲಿಮಿಟೆಡ್‌, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಈ ನೇಮಕ ಪ್ರಕ್ರಿಯೆ ಚುನಾವಣೆಯ ಸಂದರ್ಭದಲ್ಲಿಯೇ ನಡೆಯುವ ಸಾಧ್ಯತೆಗಳಿವೆ.

ಪ್ರಾಧಿಕಾರವು ಮಾರ್ಚ್‌ 15 ರಂದೇ ಈ ನೇಮಕಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿತ್ತು. ಮಾರ್ಚ್‌ 24 ರಂದು ಅಧಿಸೂಚನೆ ಪ್ರಕಟಿಸಿದೆ. ಇದರ ಪ್ರಕಾರ ಏಪ್ರಿಲ್‌ 17 ರಿಂದ ಅರ್ಜಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮೇ.17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇ-ಅಂಚೆ ಕಚೇರಿಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಮೇ.20 ಕೊನೆಯ ದಿನವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಪ್ರಕಟಣೆ ನೋಡಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಸದ್ಯ ಈ ನೇಮಕಾತಿ ಆರಂಭವಾಗುತ್ತದೆಯೇ ಇಲ್ಲವೇ ಎಂಬುದರ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಈಗಾಗಲೇ ಅಧಿಸೂಚನೆ ಪ್ರಕಟವಾಗಿರುವುದರಿಂದ ಈ ನೇಮಕ ಪ್ರಕ್ರಿಯೆ ನಡೆಸಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಕೆಲ ನೇಮಕಾತಿ ತಜ್ಞರು ಈ ನೇಮಕ ಪ್ರಕ್ರಿಯೆ ಆರಂಭವಾಗುವ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಕೆಇಎ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?

Continue Reading

ಉದ್ಯೋಗ

KPSC Recruitment 2023 : ಕೆಪಿಎಸ್‌ಸಿಯಿಂದ ಏ.1 ಮತ್ತು 2 ರಂದು ಪರೀಕ್ಷೆ; ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಹುದ್ದೆಗಳ ನೇಮಕಕ್ಕೆ ( KPSC Recruitment 2023 ) ನಡೆಸಲಿರುವ ಪರೀಕ್ಷೆಗೆ ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Edited by

down load of Hall Tickets for the examination for various Group C posts is published
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಏಪ್ರಿಲ್‌ 1 ಮತ್ತು 2 ರಂದು (KPSC Recruitment 2023) ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ-58, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು-20, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 105 ಹುದ್ದೆಗಳಿಗೆ ಈ ಪರೀಕ್ಷೆ ನಡೆಯುತ್ತಿದೆ.

ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಈ ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಅರ್ಜಿಯ ಸಂಖ್ಯೆ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್‌ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ.

ಏಪ್ರಿಲ್‌ 1ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಏಪ್ರಿಲ್‌2 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವಾಗ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ : 18005728707 ಸಂಪರ್ಕಿಸಬೇಕೆಂದು ಕೆಪಿಎಸ್‌ಸಿಯು ಸೂಚಿಸಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ದಾವಣಗೆರೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲಾಗಿದ್ದು, ಈ ಕುರಿತ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಈ ಎರಡು ನಗರಗಳಲ್ಲಿ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು ಈಗಾಗಲೇ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದರೂ, ಇನ್ನೊಮ್ಮೆ ಡೌನ್‌ಲೋಡ್‌ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕೆಪಿಎಸ್‌ಸಿಯು ಕೋರಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಇದನ್ನೂ ಓದಿ: KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?

Continue Reading

ಉದ್ಯೋಗ

KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?

ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) 831 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ, ಅರ್ಹತೆಗಳೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Edited by

KPSC Recruitment 2023 shortly notification from KPSC qualification and age limit details here
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ. ಯಾವೆಲ್ಲಾ ಹುದ್ದೆಗಳಿಗೆ ನೇಮಕ ನಡೆಯಲಿದೆ. ವಿದ್ಯಾರ್ಹತೆ ಏನು? ಎಂಬ ಮಾಹಿತಿ ಇಲ್ಲಿದೆ.

ಸಹಾಯಕ ನಿರ್ದೇಶಕರ ಹುದ್ದೆ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್‌ ಎ) 23 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಮೂರು ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.

ವಿದ್ಯಾರ್ಹತೆ : ಯಾವುದೇ ಎಂಜಿನಿಯರಿಂಗ್‌ ಪದವಿ ಪಡೆದವರು ಅಥವಾ ಬಿ.ಟೆಕ್‌ ಪದವೀಧರರು ಅಥವಾ ಬಿಸ್ನೆಸ್‌ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-88,300

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 19 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.

ವಿದ್ಯಾರ್ಹತೆ: ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-83,900

ಪಶುವೈದ್ಯಾಧಿಕಾರಿ ಹುದ್ದೆ

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್‌ ಎ)- 400 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 58 ಹುದ್ದೆಗಳು ಬ್ಯಾಕ್‌ಲಾಗ್‌ ಹುದ್ದೆಗಳಾಗಿವೆ.

ವಿದ್ಯಾರ್ಹತೆ: ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಫಿಸಲಾದ ಪಶು ವಿಶ್ವವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್‌.ಸಿ ಅಥವಾ ಬಿ.ವಿ.ಎಸ್‌.ಸಿ ಮತ್ತು ಎ.ಹೆಚ್ ಪದವಿ ಹೊಂದಿರಬೇಕು.
ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ರ ಅಡಿಯಲ್ಲಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು
ವೇತನ ಎಷ್ಟು? : ರೂ. 52,650-97,100

ಸಹಾಯಕ ಕೃಷಿ ಅಧಿಕಾರಿ ಹುದ್ದೆ

ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್‌ -ಬಿ) 368 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 60 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ. 8 ಬ್ಯಾಕ್‌ಲಾಗ್‌ ಹುದ್ದೆಗಳಾಗಿವೆ.

ವಿದ್ಯಾರ್ಹತೆ: ಶೇ.85 ರಷ್ಟು ಹುದ್ದೆಗಳಿಗೆ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್‌) ಕೃಷಿ ಹಾಗೂ ಶೇ.15 ರಷ್ಟು ಹುದ್ದೆಗಳಿಗೆ ಬಿ.ಟೆಕ್‌ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)/ ಬಿಟೆಕ್‌ (ಆಹಾರ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ)/ ಬಿ.ಎಸ್ಸಿ(ಆನರ್ಸ್‌) ಕೃಷಿ, ಮಾರಾಟ ಮತ್ತು ಸಹಕಾರ/ ಬಿ.ಎಸ್ಸಿ (ಆನರ್ಸ್‌) ಆಗ್ರಿ ಬಿಸಿನೆಸ್‌ ಮ್ಯಾನೇಜ್‌ ಮೆಂಟ್‌ ಅಥವಾ ಬಿ.ಎಸ್ಸಿ. (ಕೃಷಿ ಜೈವಿಕ ತಂತ್ರಜ್ಞಾನ)/ ಬಿ.ಟೆಕ್‌ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸ್ಸಿ. (ಅಗ್ರಿಕಲ್ಚರಲ್‌ ಎಂಜಿನಿಯರಿಂಗ್)‌ / ಬಿ.ಟೆಕ್‌ (ಅಗ್ರಿಕಲ್ಚರಲ್‌ ಎಂಜಿನಿಯರಿಂಗ್‌) ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಎಷ್ಟು? : ರೂ.40,900-78,200

ವಯೋಮಿತಿ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?

ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees)35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ನೇಮಕ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ವಿಷಯಗಳು, ಸಿಲಬಸ್‌ ಕುರಿತು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗುತ್ತದೆ.

ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮಂಗಳವಾರ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!

Continue Reading

ಉದ್ಯೋಗ

KPSC Recruitment 2023 : ಗುಡ್‌ ನ್ಯೂಸ್‌! ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; 831 ಹುದ್ದೆಗಳಿಗೆ ನೇಮಕ

ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) 831 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Edited by

KPSC Recruitment 2023 shortly Four notification from KPSC Recruitment for 831 posts details here
Koo

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಸದ್ಯವೇ ಅಧಿಸೂಚನೆ ಹೊರಡಿಸಲಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್‌ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್‌ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್‌ -ಬಿ) 368 ಹುದ್ದೆಗಳಿಗೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ.

ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ವಿಷಯವನ್ನು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಕೆಪಿಎಸ್‌ಸಿಯಲ್ಲಿ ನೇಮಕದ ಮಾಹಿತಿ

ಇದಲ್ಲದೆ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್‌, ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ ಹಾಗೂ ಜೂನಿಯರ್‌ ಎಂಜಿನಿಯರ್ ಮತ್ತು ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೂ ಕೆಪಿಎಸ್‌ಸಿಯ ಸದ್ಯವೇ ಅಧಿಸೂಚನೆ ಹೊರಡಿಸಲಿದ್ದು, ಸದ್ಯ ಹುದ್ದೆಗಳ ಮೀಸಲಾತಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಆಯೋಗದ ಅನುಮತಿಗಾಗಿ ಕಳಿಸಲಾಗುತ್ತದೆ ಎಂದು ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದ್ದಾರೆ.

ಮುಂದೆ ನಡೆಯಲಿರುವ ನೇಮಕದ ಮಾಹಿತಿ

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಲ್ಲದೆ ಮಾ. 30 ರಿಂದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿಯೂ ಕೆಪಿಎಸ್‌ಸಿಯು ನೇಮಕ ಪ್ರಕ್ರಿಯೆಯನ್ನು ನಡೆಸುವ ಸಾಧ್ಯತೆಗಳಿವೆ.

ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!

Continue Reading
Advertisement
6 die of suffocation in Delhi After Due to mosquito coil
ದೇಶ9 mins ago

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

Gas tragedy
ಕರ್ನಾಟಕ9 mins ago

Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

Dakshina Kannada District 1st PUC result 2023 declared; here how to check
ಶಿಕ್ಷಣ28 mins ago

1st PUC Result 2023 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Producer K Manju from Padmanabha Nagar assembly constituency Entry into the political arena
ರಾಜಕೀಯ30 mins ago

K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?

is State is Impotent? why did stop hate speech, asks supreme Court
ಕೋರ್ಟ್33 mins ago

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

karnataka election AT Ramaswamy and NY Gopalakrishna resigns
ಕರ್ನಾಟಕ42 mins ago

Karnataka Election: ಜೆಡಿಎಸ್‌, ಬಿಜೆಪಿಯ ತಲಾ ಒಂದು ವಿಕೆಟ್‌ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ

T Chandrasekhar Former city council president Hiriyur
ಕರ್ನಾಟಕ53 mins ago

Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ

MLA scrapes off the asphalt Of Road In Uttar Pradesh Video Viral
ದೇಶ55 mins ago

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

IPL 2023: Dhoni injured; Doubt for the first game
ಕ್ರಿಕೆಟ್56 mins ago

IPL 2023: ಧೋನಿಗೆ ಗಾಯ; ಮೊದಲ ಪಂದ್ಯಕ್ಕೆ ಅನುಮಾನ; ಸ್ಟೋಕ್ಸ್​ ನಾಯಕತ್ವ ಸಾಧ್ಯತೆ

WinLife Trust shivamogga
ಆರೋಗ್ಯ59 mins ago

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ10 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ20 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!