ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತವು ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ 36 ಹುದ್ದೆಗಳ ನೇಮಕಕ್ಕೆ (DCC Bank Recruitment 2023) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 16 ಕೊನೆಯ ದಿನವಾಗಿರುತ್ತದೆ.
ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ/ಅಂಚೆ/ಕೊರಿಯಾರ್ ಇತ್ಯಾದಿಗಳ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬ್ಯಾಂಕ್ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ. ಅರ್ಜಿ ಶುಲ್ಕವನ್ನು ಕೂಡ ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿದೆ.
ಲೆಕ್ಕಿಗರು-9, ಹಿರಿಯ ಸಹಾಯಕರು-13, ವಾಹನ ಚಾಲಕರು-03, ಜವಾನರು-10, ಹಿರಿಯ ಸಹಾಯಕರು-1 (ಬ್ಯಾಕ್‌ಲಾಗ್ ಹುದ್ದೆ) ಸೇರಿ ಒಟ್ಟು 36 ಹುದ್ದೆಗಳಿಗೆ ನೇಮಕ ನಡೆಯಲಿದೆ. ಈ ಹುದ್ದೆಗಳನ್ನು ಮೀಸಲಾತಿಯನ್ವಯ ಹಂಚಿಕೆ ಮಾಡಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ವಿದ್ಯಾರ್ಹತೆ ಏನು?
ಲೆಕ್ಕಿಗರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯದ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನದ ಜತೆಗೆ ಟ್ಯಾಲಿ ಕೋರ್ಸ್‌ನ ತೇರ್ಗಡೆ ಪತ್ರವನ್ನು ಹೊಂದಿರಬೇಕು.
ಹಿರಿಯ ಸಹಾಯಕರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಜೇಕು. ಕಂಷ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನದ ಜೊತೆಗೆ ಟ್ಯಾಲಿ ಕೋರ್ಸ್‌ನಲ್ಲಿ ತೇರ್ಗಡೆಯಾಗಿರುವ ಪತ್ರವನ್ನು ಹೊಂದಿರಬೇಕು. ಕನ್ನಡ ಬರೆಯಲು ಮತ್ತು ಮಾತನಾಡಲು ಬರುತ್ತಿರಬೇಕು.
ವಾಹನ ಚಾಲಕರು: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿದ್ದು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನಿನ್ವಯ ಲಘು ವಾಹನ ಚಾಲನೆಯ ಪರವಾನಗಿ ಹೊಂದಿರಬೇಕು.
ಜವಾನರು: ಎಸ್‌ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿದ್ದು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದು ಇದರ ಆಧಾರದ ಮೇಲೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಪಪಡಿಸಲಾಗಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-03-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-03-2023 (ರಾತ್ರಿ 11.59)
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 9036072155
ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಗರಿಷ್ಠ ವಯೋಮಿತಿಯಲ್ಲಿ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಮೂರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1,000 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಅವಕಾಶ ನೀಡಲಾಗಿರುತ್ತದೆ. ಅರ್ಜಿ ಶುಲ್ಕವನ್ನು ನಿಗದಿಪಡಿಸಿದ ದಿನಾ೦ಕ, ಸಮಯದೊಳಗಾಗಿ ಸಲ್ಲಿಸದೇ ಇರುವಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ (Click Here) ಮಾಡಿ.
ನೇಮಕ ಹೇಗೆ?
ಲೆಕ್ಕಿಗರ ಮತ್ತು ಹಿರಿಯ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯು 200 ಅಂಕಗಳಿಗೆ ನಡೆಯಲಿದ್ದು, ಇದರಲ್ಲಿ ಕನ್ನಡ ಭಾಷೆ- 50 ಅಂಕ, ಸಾಮಾನ್ಯ ಇಂಗ್ಲಿಷ್-25 ಅಂಕ, ಸಾಮಾನ್ಯ ಜ್ಞಾನ -25 ಅಂಕ ಹಾಗೂ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳು- 50 ಅಂಕಗಳ ಪ್ರಶ್ನೆಗಳಿರಲಿವೆ.
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ನಿಗದಿಪಡಿಸಿ ಪ್ರಾಪ್ತವಾಗುವ ಅಂಕಗಳ ಆಧಾರದ ಮೇಲೆ ಜೇಷ್ಠತಾ ಪಟ್ಟಿಯನ್ನು ತಯಾರಿಸಿ, ಅರ್ಹ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ 15 ಅಂಕ ನಿಗದಿಯಾಗಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.
ವಾಹನ ಚಾಲಕರ ಮತ್ತು ಜವಾನರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಜೇಷ್ಠತಾ ಅಂಕಗಳ ಆಧಾರದ ಮೇಲೆ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆಗೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾದಲ್ಲಿ ಚಾಲಕರ ಹುದ್ದೆಗೆ ಚಾಲನಾ ಪರೀಕ್ಷೆ ಮತ್ತು ಸಂದರ್ಶನ್ಕಕೆ ಹಾಗೂ ಜವಾನರ ಹುದ್ದೆಗೆ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನಕ್ಕೆ 15 ಅಂಕ ಹಾಗೂ ಚಾಲನೆಯ ಪ್ರವೀಣತೆಯ ಪರೀಕ್ಷೆಗೆ 30 ಅಂಕ ನಿಗದಿಯಾಗಿರುತ್ತದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ವೇತನ ಎಷ್ಟು?
ಲೆಕ್ಕಿಗರ ಹುದ್ದೆ: 36,000-67,550 ರೂ. ಹಾಗೂ ಇತರೆ ಭತ್ಯೆಗಳು.
ಹಿರಿಯ ಸಹಾಯಕರ ಹುದ್ದೆ: 33,450-62,600 ರೂ. ಹಾಗೂ ಇತರೆ ಭತ್ಯೆಗಳು.
ವಾಹನ ಚಾಲಕರು: 27,650-52,650 ರೂ. ಹಾಗೂ ಇತರೆ ಭತ್ಯೆಗಳು.
ಜವಾನರು: 23,500-47,650 ರೂ. ಹಾಗೂ ಇತರೆ ಭತ್ಯೆಗಳು.
ಇದನ್ನೂ ಓದಿ: BEL Recruitment 2023 : ಬಿಇಎಲ್‌ನಲ್ಲಿ 110 ಎಂಜಿನಿಯರಿಂಗ್ ಹುದ್ದೆಗಳಿಗೆ ನೇಮಕ; ಬೆಂಗಳೂರಿನಲ್ಲಿಯೂ ಇದೆ ಉದ್ಯೋಗ