Site icon Vistara News

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

DCC Bank Recruitment 2023

DCC Bank Recruitment 2023

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತವು ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ 96 ಹುದ್ದೆಗಳ ನೇಮಕಕ್ಕೆ (DCC Bank Recruitment 2023) ಅಧಿಸೂಚನೆ ಹೊರಡಿಸಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿರುತ್ತದೆ. ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ/ಅಂಚೆ/ಕೊರಿಯಾರ್‌ ಇತ್ಯಾದಿಗಳ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬ್ಯಾಂಕ್‌ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.

ಶಾಖಾ ವ್ಯವಸ್ಥಾಪಕರರು (Branch Managers) ನಾಲ್ಕು ಹುದ್ದೆ, ಹಿರಿಯ ಸಹಾಯಕರು (senior assistants) 19 ಹುದ್ದೆ, ಶೀಘ್ರಲಿಪಿಗಾರರು (stenographer) ಒಂದು ಹುದ್ದೆ, ಕಿರಿಯ ಸಹಾಯಕರು (junior assistants) 43 ಹುದ್ದೆ, ಕಂಪ್ಯೂಟರ್‌ ಆಪರೇಟರ್‌ ಎರಡು ಹುದ್ದೆ ಹಾಗೂ ವಾಹನ ಚಾಲಕರು ನಾಲ್ಕು ಹುದ್ದೆ ಮತ್ತು ನಾಲ್ಕನೇ ದರ್ಜೆ ನೌಕರರು 23 ಹುದ್ದೆಗಳಿಗೆ ಈ ನೇಮಕ ನಡೆಯಲಿದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-02-2023
ಸಹಾಯವಾಣಿ ಸಂಖ್ಯೆ: 9036377735
ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ವೆಬ್‌ ವಿಳಾಸ:
http://recruitapp.in/bangalore_dccb2023

ವಿದ್ಯಾರ್ಹತೆ ಏನು?

ಶಾಖಾ ವ್ಯವಸ್ಥಾಪಕರ ಹುದ್ದೆ : ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಹಿರಿಯ ಸಹಾಯಕರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆ ಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು ಮತ್ತು ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಶೀಘ್ರಲಿಪಿಗಾರರು: ದ್ವಿತೀಯ ಪಿ.ಯು.ಸಿ.ಯಲ್ಲಿ ಅಥವಾ 3 ವರ್ಷಗಳ ಡಿಪ್ಲೋಮೊ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು, ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಟೈಪಿಂಗ್, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನವಿರಬೇಕು ಮತ್ತು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ಕಂಪ್ಯೂಟರ್ ಆಪರೇಟರ್: ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅಥವಾ 3 ವರ್ಷಗಳ ಡಿಪ್ಲಮೊ ಇನ್ ಕಮರ್ಷಿಯಲ್ ಪ್ರಾಕ್ಟಿಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪ್‌ರೈಟಿಂಗ್‌ನಲ್ಲಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ಸ್‌ನಲ್ಲಿ ಜ್ಞಾನವಿರಬೇಕು ಮತ್ತು ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು.

ವಾಹನ ಚಾಲಕರು: ಎಸ್.ಎಸ್.ಎಲ್.ಸಿ. ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನಿನನ್ವಯ ಲಘು ಮತ್ತು ಭಾರೀ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

ನಾಲ್ಕನೇ ದರ್ಜೆ ನೌಕರರು (CLASS-IV): ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು. ನಿಗದಿ ಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬ್ಯಾಂಕ್‌ ಹೇಳಿದೆ.

ವಯೋಮಿತಿ ಎಷ್ಟು?

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಗರಿಷ್ಠ ವಯೋಮಿತಿಯಲ್ಲಿ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಮೂರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1,500 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದನ್ನೂ ಓದಿ: India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳಿಗೆ ನೇಮಕ; ರಾಜ್ಯದಲ್ಲಿದೆ 3,036 ಹುದ್ದೆ

Exit mobile version