Education Guide: ವಿದ್ಯಾರ್ಥಿಯಾಗಿದ್ದಾಗಲೇ ಗಳಿಸಿ: ಕಾಲೇಜು ಓದುತ್ತಲೇ ಹೀಗೂ ನೀವು ದುಡಿಯಬಹುದು! - Vistara News

ಉದ್ಯೋಗ

Education Guide: ವಿದ್ಯಾರ್ಥಿಯಾಗಿದ್ದಾಗಲೇ ಗಳಿಸಿ: ಕಾಲೇಜು ಓದುತ್ತಲೇ ಹೀಗೂ ನೀವು ದುಡಿಯಬಹುದು!

ಓದುತ್ತಲೇ ಕೆಲಸವನ್ನೂ ಮಾಡಿಕೊಂಡು (ಕಲಿಕೆ ವೇಳೆ ಗಳಿಕೆ – Education Guide) ನಿಮ್ಮ ಹಣವನ್ನು ನೀವೇ ಸಂಪಾದಿಸುವ ಹಾದಿಗಳೂ (earning while learning) ಈಗ ಬಹಳಷ್ಟಿವೆ. ಯಾವೆಲ್ಲ ಕ್ಷೇತ್ರಗಳಲ್ಲಿ ನೀವು ಓದುತ್ತಲೇ ಕೆಲಸವನ್ನೂ ಮಾಡಬಹುದು ಎಂಬುದನ್ನು ನೋಡೋಣ.

VISTARANEWS.COM


on

learn and earn
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಲವು ದಶಕಗಳ ಹಿಂದೆ ಕಾಲೇಜು ಮೆಟ್ಟಿಲು ಹತ್ತುವುದೇ ದೊಡ್ಡ ಸಾಹಸ. ಹತ್ತಿದರೂ, ಆಗಿನ ಕಾಲದಲ್ಲಿ ಬಡತನದಲ್ಲಿ ವಿದ್ಯಾರ್ಜನೆಯನ್ನೂ ಮಾಡಿಕೊಳ್ಳಲು ಹೆಚ್ಚು ಅವಕಾಶಗಳಿರಲಿಲ್ಲ. ಅವರಿವರ ಮನೆಯಲ್ಲಿ ಉಂಡು, ರಸ್ತೆಯಲ್ಲೆಲ್ಲೋ ಕೂತು ಓದಿ ಮಹಾನ್‌ ಮೇಧಾವಿಗಳಾದವರ ಕತೆಗಳು ನಮ್ಮ ಕಣ್ಣ ಮುಂದಿವೆ. ಇವೆಲ್ಲ ನಮಗೆ ಸ್ಪೂರ್ತಿ ಕತೆಗಳಾದರೂ, ಪರಿಸ್ಥಿತಿ ಇಂದು ಹಾಗಿಲ್ಲ. ಬಡತನವಿದ್ದರೂ, ಓದಲು ಸಾಕಷ್ಟು ಅವಕಾಶಗಳೂ ಇದ್ದರೂ, ಓದುವ ಕಾಲದಲ್ಲಿ ಹಾದಿತಪ್ಪಿಸುವ ಅವಕಾಶಗಳೂ ಹೆಚ್ಚಿವೆ. ಇಂತಹ ಮಾರ್ಗಗಳಿಂದ ತಪ್ಪಿಸಿಕೊಂಡು, ಓದುವ ಕಾಲದಲ್ಲಿ ಓದಿ ವಿದ್ಯಾವಂತರಾಗುವುದೂ ಕೂಡಾ ಇಂದಿನ ಮಟ್ಟಿಗೆ ಸವಾಲೇ. ಅದರಲ್ಲೂ ಹಲವು ಮಂದಿ ಓದಬೇಕೆಂಬ ಆಸೆಯಿದ್ದರೂ ನಾನಾ ಹಣಕಾಸಿನ ಕಾರಣಗಳಿಂದಾಗಿ (education news) ಅಂದುಕೊಂಡದ್ದನ್ನು ಓದಲು ಸಾಧ್ಯವಾಗುವುದಿಲ್ಲ. ಅಂದುಕೊಂಡದ್ದನ್ನು ಓದುತ್ತಲೇ, ಸಂಜೆಯ ಹೊತ್ತು, ಅಥವಾ ವಾರಾಂತ್ಯದ ವೇಳೆಯಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ತನ್ನ ಖರ್ಚನ್ನು ನೋಡಿಕೊಳ್ಳುವ ಕಷ್ಟಸಹಿಷ್ಣು ವಿದ್ಯಾರ್ಥಿಗಳೂ ಇದ್ದಾರೆ. ಇನ್ನೂ ಕೆಲವರಿಗೆ ಆಸಕ್ತಿ ಇದ್ದರೂ, ಯಾವ ಕೆಲಸಗಳನ್ನು ಹೇಗೆ ಓದಿನ ಜೊತೆಗೆ ಮಾಡಬಹುದೆಂಬ ಅರಿವು ಇರುವುದಿಲ್ಲ. ಹಾಗಾದರೆ ಬನ್ನಿ, ಓದುತ್ತಲೇ ಕೆಲಸವನ್ನೂ ಮಾಡಿಕೊಂಡು (ಕಲಿಕೆ ವೇಳೆ ಗಳಿಕೆ – Education Guide) ನಿಮ್ಮ ಹಣವನ್ನು ನೀವೇ ಸಂಪಾದಿಸುವ ಹಾದಿಗಳೂ (earning while learning) ಈಗ ಬಹಳಷ್ಟಿವೆ. ಯಾವೆಲ್ಲ ಕ್ಷೇತ್ರಗಳಲ್ಲಿ ನೀವು ಓದುತ್ತಲೇ ಕೆಲಸವನ್ನೂ ಮಾಡಬಹುದು ಎಂಬುದನ್ನು ನೋಡೋಣ.

1. ಡೆಲಿವರಿ ಬಾಯ್ (Delivery boy):‌ ಈಗ ಏನಿದ್ದರೂ, ಹೋಮ್‌ ಡೆಲಿವರಿಯ ಕಾಲ. ಎಲ್ಲರೂ ಈಗ ತಿನ್ನಬೇಕಿರುವ ಊಟದಿಂದ ಹಿಡಿದು ಮನೆಯ ನಿತ್ಯ ಬಳಕೆಯ ವಸ್ತುಗಳವರೆಗೆ, ಎಲೆಕ್ಟ್ರಾನಿಕ್‌ ಗಾಜೆಟ್ಟುಗಳವರೆಗೆ ಎಲ್ಲರೂ ಮನೆಯಲ್ಲೇ ಕೂತು ಆರ್ಡರ್‌ ಮಾಡುವವರೇ. ಹೀಗಾಗಿ ಸದ್ಯ ಸಾಕಷ್ಟು ಅವಕಾಶಗಳಿರುವ ಹಾಗೂ ಬಹಳಷ್ಟು ವಿದ್ಯಾರ್ಥಿಗಳು ಮಾಡುತ್ತಿರುವ ಕೆಲಸವಿದು. ನಿಮಗೆ ೧೮ ವರ್ಷ ದಾಟಿದ್ದರೆ, ನಿಮ್ಮ ಬಳಿ ಒಂದು ದ್ವಿಚಕ್ರ ವಾಹನವಿದ್ದರೆ ಹಾಗೂ ಅದನ್ನು ಸರಾಗವಾಗಿ ಓಡಿಸುವಷ್ಟು ಅನುಭವ ಹಾಗೂ ಲೈಸೆನ್ಸ್‌ ನಿಮ್ಮಲ್ಲಿದ್ದರೆ ಬಿಡುವಿನ ವೇಳೆಯಲ್ಲಿ ಮಾಡಬಹುದಾದ ಕೆಲಸವಿದು. ಸ್ವಿಗ್ಗಿ, ಝೊಮೇಟೋ, ಬ್ಲಿಂಕಿಟ್‌ ಸೇರಿದಂತೆ ನಾನಾ ಕಡೆಗಳಲ್ಲಿಂದು ವಿಪುಲ ಅವಕಾಶವಿದೆ. ಕಾಲೇಜು ಮುಗಿದ ಮೇಲೆ, ಅಥವಾ ವಾರಾಂತ್ಯದಲ್ಲಿ ಸ್ವಲ್ಪ ಹೊತ್ತು ಮಾಡಬಹುದಾದ ಕೆಲಸವಿದು. ಬಹಳಷ್ಟು ಮಂದಿ ಇಂದು ಹೀಗೆ ದುಡಿದು ಓದಿ ಉತ್ತಮ ಕೆಲಸಕ್ಕೆ ಸೇರಿದ ನಿದರ್ಶನಗಳೂ ಕಣ್ಣ ಮುಂದಿವೆ.

learn and earn

2. ಭಾಷಾಂತರ ಹಾಗೂ ಬರೆವಣಿಗೆ (Translation): ನೀವು ಚೆನ್ನಾಗಿ ಬರೆಯಬಲ್ಲವರಾಗಿದ್ದರೆ, ಭಾಷಾ ಪ್ರೌಢಿಮೆ ನಿಮ್ಮಲ್ಲಿದ್ದರೆ, ಒಂದು ಭಾಷೆಯಿಂದ ಇನನೊಂದು ಭಾಷೆಗೆ ಭಾಷಾಂತರ ಮಾಡಬಲ್ಲವರಾಗಿದ್ದರೆ ಅದು ನಿಮ್ಮಲ್ಲಿರುವ ಒಂದೊಳ್ಳೆ ಪ್ರತಿಭೆ. ಇದು ಕೇವಲ ಪ್ರತಿಭೆಯಾಗಿ ಉಳಿಯದೆ, ಹಣಕಾಸಿಗೂ ನಿಮಗೆ ಸಹಾಯವಾಗಬಲ್ಲದು. ಈಗ ಏನಿದ್ದರೂ ಆನ್‌ಲೈನ್‌ ಯುಗ. ಕೈಯಲ್ಲೊಂದು ಲ್ಯಾಪ್‌ಟಾಪ್‌ ಇದ್ದರೆ ಸಾಕು, ಮನೆಯಲ್ಲೇ ಕೂತು ವೆಬ್‌ಸೈಟ್‌ಗಳಿಗೆ, ಭಾಷಾಂತರ ಸಂಸ್ಥೆಗಳಿಗೆ ಕೆಲಸ ಮಾಡಬಹುದು. ವಿದೇಶೀ ಭಾಷೆಗಳ ಜ್ಞಾನವಿದ್ದರಂತೂ ಅವಕಾಶಗಳು ಹೆಚ್ಚು.

3. ಡೇಟಾ ಎಂಟ್ರಿ (Data entry): ಭಾಷಾಂತರ ಬರವಣಿಗೆ ಸಾಧ್ಯವಿಲ್ಲ, ಆದರೆ, ಟೈಪ್‌ ಮಾಡಿಕೊಡಬಹುದು ಎಂಬ ಯೋಚನೆ ಇದ್ದವರಿಗೆ ಹೆಚ್ಚು ಮಾನಸಿಕ ಶ್ರಮವಿಲ್ಲದೆ, ದಿನದಲ್ಲಿ ಒಂದೆರಡು ಗಂಟೆ ಮಾಡಬಹುದಾದ ಕೆಲಸವಿದು. ಆನ್‌ಲೈನ್‌ನಲ್ಲೇ ಹುಡುಕಾಡಿದರೆ ಸಿಗಬಹುದಾದ ಕೆಲಸವಿದು.

ಇದನ್ನೂ ಓದಿ: Education Guide : ಉದ್ಯೋಗ ಖಚಿತ ಪಡಿಸುವ ವಿಶಿಷ್ಟ ಎಂಜಿನಿಯರಿಂಗ್ ಪದವಿಗಳಿವು!

4. ಸೋಶಿಯಲ್‌ ಮೀಡಿಯಾ ಅಸಿಸ್ಟೆಂಟ್‌: ಮೀನಿಗೆ ಈಜು ಕಲಿಸಬೇಕೇ ಹೇಳಿ! ಹಾಗೆಯೇ ಇಂದಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಅಥವಾ ಸೋಶಿಯಲ್‌ ಮೀಡಿಯಾ ಬಗ್ಗೆ ತರಬೇತಿಯ ಅಗತ್ಯವಿಲ್ಲ. ಒಳ್ಳೆಯ ಬರವಣಿಗೆ, ಇಂಗ್ಲೀಷ್‌ ಜ್ಞಾನ ಜೊತೆಗೆ ಸ್ವಲ್ಪ ಕ್ರಿಯೇಟಿವಿಟಿ ನಿಮಗಿದ್ದರೆ, ಸೋಶಿಯಲ್‌ ಮೀಡಿಯಾದಲ್ಲಿರುವುದೂ ಕೂಡಾ ನಿಮಗೆ ವರವಾಗಬಲ್ಲುದು. ಹಲವು ಸಂಸ್ಥೆಗಳು, ಪ್ರಸಿದ್ಧ ವ್ಯಕ್ತಿಗಳು ತಮ್ಮ ಸೋಶಿಯಲ್‌ ಮೀಡಿಯಾದ ನಿರ್ವಹಣೆಗೆಂದೇ ತಂಡವನ್ನಿಟ್ಟುಕೊಳ್ಳುತ್ತಾರೆ. ಹಾಗಾಗಿ, ಅಲ್ಲೂ ಕೂಡಾ ಪಾರ್ಟ್‌ ಟೈಂ ಕೆಲಸ ಮಾಡಬಹುದು.

learn and earn

5. ಟ್ಯೂಷನ್‌ ಹೇಳುವುದು: ಓದುತ್ತಲೇ ಕಲಿಸುವುದು ಒಂದೊಳ್ಳೆ ಅಭ್ಯಾಸ. ಕಲಿಸುತ್ತಾ ನಾವೂ ಕಲಿತುಕೊಳ್ಳುವುದು ನಮ್ಮನ್ನು ಇನ್ನಷ್ಟು ದೃಢರನ್ನಾಗಿಸುತ್ತದೆ. ಬೇರೆ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದರೆ ಮನೆಯಲ್ಲೇ ಮಾಡಬಹುದಾದ ಅತ್ಯುತ್ತಮ ಆಯ್ಕೆ ಎಂದರೆ ಟ್ಯೂಷನ್‌. ನಿಮ್ಮ ಮನೆಯಲ್ಲೇ ಕುಳಿತು ಮಕ್ಕಳಿಗೆ, ನಿಮ್ಮ ಓದಿನ ಹಿನ್ನೆಲೆ ಅಥವಾ ಆಸಕ್ತಿಯ ವಿಷಯದ ತರಬೇತಿ ನೀಡುವುದು ಸಾಧ್ಯವಿದೆ. ಅಥವಾ ಆನ್ಲೈನ್ನಲ್ಲೂ ಸಾಧ್ಯವಿದೆ. ಉತ್ತಮ ಆದಾಯವಿರುವ ಕೆಲಸವಿದು.

6. ಪ್ರವಾಸೀ ಗೈಡ್‌: ಪ್ರವಾಸದಲ್ಲಿ ಆಸಕ್ತಿ ನಿಮಗಿದ್ದರೆ, ನೀವಿರುವ ಜಾಗ ಪ್ರವಾಸೀ ತಾಣವಾಗಿದ್ದರೆ ಈ ಕೆಲಸವನ್ನೂ ವಾರಾಂತ್ಯದಲ್ಲಿ ಮಾಡಬಹುದು. ನೀವಿರುವ ಜಾಗದ ವಿಶೇಷತೆಗಳನ್ನೂ, ಸ್ಥಳ ಇತಿಹಾಸ ಓದಿ ತಿಳಿದುಕೊಂಡು ಪ್ರವಾಸಿಗರಿಗೆ ಅದನ್ನು ವಿವರಿಸುವ ಈ ಕೆಲಸವೂ ಕೂಡಾ ವಾರಾಂತ್ಯದಲ್ಲಿ ಮಾಡಬಹುದಾದದ್ದೇ.

ಇದನ್ನೂ ಓದಿ: Countries With Best Education System: Countries With Best Education System In The World

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

PSI Exam: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

Exam date announced for recruitment of 4000 posts including PSI exam
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ – Karnataka Examination Authority) ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗಳ (PSI Exam) ದಿನಾಂಕಗಳನ್ನು ಪ್ರಕಟಿಸಿದೆ. ಇಲ್ಲಿ ಆಯಾ ಇಲಾಖೆಗಳ ಪರೀಕ್ಷೆಯನ್ನು ಯಾವ ದಿನಾಂಕದಲ್ಲಿ ಮಾಡಲಾಗುವುದು ಎಂಬ ಮಾಹಿತಿಯನ್ನು ನೀಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

ಪಿಎಸ್ಐ) ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ‌ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Exam date announced for recruitment of 4000 posts including PSI exam

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.
Continue Reading

ಕರ್ನಾಟಕ

KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

KPTCL Recruitment: ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ, ಕೆಪಿಟಿಸಿಎಲ್‌ ನೇಮಕಾತಿ ಆದೇಶ ನೀಡಲಾಗಿದೆ.

VISTARANEWS.COM


on

KPTCL Recruitment
Koo

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ (KPTCL Recruitment) ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್(ಸಿವಿಲ್), 15-ಕಿರಿಯ ಎಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಎಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. 902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Continue Reading

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ನಾಳೆ (ಮೇ 24). ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ನಾಳೆಯೇ (ಮೇ 24) ಕೊನೆಯ ದಿನ (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

Continue Reading
Advertisement
Karnataka Rain
ಮಳೆ5 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ9 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ23 mins ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ31 mins ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest43 mins ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್44 mins ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್46 mins ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್47 mins ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Basavanagudi News
ಬೆಂಗಳೂರು1 hour ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Road Accident
ಕರ್ನಾಟಕ1 hour ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 hour ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌