Google Layoff: 8 ತಿಂಗಳ ಗರ್ಭಿಣಿಯನ್ನು ವಜಾಗೊಳಿಸಿದ ಗೂಗಲ್‌, ಹೃದಯ ಚೂರಾದ ಅನುಭವ ಎಂದ ಉದ್ಯೋಗಿ - Vistara News

ಉದ್ಯೋಗ

Google Layoff: 8 ತಿಂಗಳ ಗರ್ಭಿಣಿಯನ್ನು ವಜಾಗೊಳಿಸಿದ ಗೂಗಲ್‌, ಹೃದಯ ಚೂರಾದ ಅನುಭವ ಎಂದ ಉದ್ಯೋಗಿ

Google Layoff: ಜಾಗತಿಕ ಟೆಕ್‌ ದೈತ್ಯ ಗೂಗಲ್‌ ಕಂಪನಿಯು 12 ಸಾವಿರ ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ. ಇದರಲ್ಲಿ 8 ತಿಂಗಳ ಗರ್ಭಿಣಿಯೂ ಇದ್ದು, ವಜಾಗೊಂಡಿರುವ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ದುಃಖ ತೋಡಿಕೊಂಡಿದ್ದಾರೆ.

VISTARANEWS.COM


on

Google
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಒಬ್ಬ ಉದ್ಯೋಗಿಯ ಜೀವನದ ಕೆಟ್ಟ ಅನುಭವ ಎಂದರೆ ಆತ ಅಥವಾ ಆಕೆ ಕೆಲಸದಿಂದ ವಜಾಗೊಳ್ಳುವುದು. ಕೊರೊನಾ ಬಿಕ್ಕಟ್ಟಿನ ನಂತರ ಅಮೆಜಾನ್‌, ಮೈಕ್ರೋಸಾಫ್ಟ್‌, ಗೂಗಲ್‌, ಟ್ವಿಟರ್‌ನಂತಹ ಜಾಗತಿಕ ದೈತ್ಯ ಕಂಪನಿಗಳೇ ಸಾವಿರಾರು ನೌಕರರನ್ನು ವಜಾಗೊಳಿಸಿದ್ದು, ನೂರಾರು ನೌಕರರು ಇಂತಹ ಕೆಟ್ಟ ಅನುಭವವನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಗೂಗಲ್‌ ಕಂಪನಿಯು (Google Layoff) ಎಂಟು ತಿಂಗಳ ಗರ್ಭಿಣಿಯನ್ನು ವಜಾಗೊಳಿಸಿದ್ದು, ಮಹಿಳೆಯು ಲಿಂಕ್ಡ್‌ಇನ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

ಹೌದು, ಗೂಗಲ್‌ ಕೆಲ ದಿನಗಳ ಹಿಂದಷ್ಟೇ ರಾತ್ರೋರಾತ್ರಿ ವಜಾಗೊಳಿಸಿದ 12 ಸಾವಿರ ಉದ್ಯೋಗಿಗಳಲ್ಲಿ ಗರ್ಭಿಣಿಯೂ ಒಬ್ಬರಾಗಿದ್ದಾರೆ. ಅವರು ಲಿಂಕ್ಡ್‌ಇನ್‌ನಲ್ಲಿ ವಜಾಗೊಂಡ ಕುರಿತು ಅಳಲು ತೋಡಿಕೊಂಡಿದ್ದಾರೆ. “ಬೆಳಗಿನ ಜಾವ 3 ಗಂಟೆಗೆ ನಾನು ವಜಾಗೊಂಡಿರುವುದು ಗೊತ್ತಾಯಿತು. ಇದರಿಂದ ನನ್ನ ಹೃದಯವೇ ಒಡೆದಂತಾಯಿತು. ನನ್ನ ಕೈಗಳು ನಡುಗಲು ಆರಂಭಿಸಿದವು. ಇಂತಹ ಸಂದರ್ಭದಲ್ಲಿ ವಜಾ ಏಕೆ ಎಂಬ ಪ್ರಶ್ನೆಯನ್ನು ನನಗೆ ನಾನೇ ಕೇಳಿಕೊಂಡೆ” ಎಂದು ಕ್ಯಾಲಿಫೋರ್ನಿಯಾ ಮೂಲದ ಪ್ರೋಗ್ರಾಂ ಮ್ಯಾನೇಜರ್‌ ಆಗಿರುವ ಕ್ಯಾಥೆರಿನ್‌ ವೋಂಗ್‌ ಅವರು ನೋವು ಹಂಚಿಕೊಂಡಿದ್ದಾರೆ.

“ನಾನು ಎಂಟು ತಿಂಗಳ ಗರ್ಭಿಣಿಯಾದ ಕಾರಣ ಕೆಲವೇ ದಿನದಲ್ಲಿ ನನಗೆ ಹೆರಿಗೆ ರಜೆ ಸಿಗುವುದಿತ್ತು. ನಕಾರಾತ್ಮಕ ಚಿಂತನೆಗಳನ್ನು ನನ್ನ ತಲೆಯಲ್ಲಿ ಬಿಟ್ಟುಕೊಳ್ಳಬಾರದು ಎಂದಿದ್ದೆ. ಆದರೆ, ಕೆಲಸದಿಂದ ವಜಾಗೊಂಡಿರುವುದು ನೋಡಿ ತಡೆದುಕೊಳ್ಳಲು ಆಗಲಿಲ್ಲ. ನಾನು ನನ್ನ ಕಂಪನಿಯನ್ನು ತುಂಬ ಪ್ರೀತಿಸುತ್ತಿದ್ದೆ, ತಂಡವನ್ನು ಇಷ್ಟಪಡುತ್ತಿದ್ದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Google lay off : ಗೂಗಲ್‌ ಮಾತೃಸಂಸ್ಥೆ ಆಲ್ಫಬೆಟ್‌ನಲ್ಲಿ 12,000 ಉದ್ಯೋಗಿಗಳ ವಜಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಇಎ ವಿಸ್ತರಿಸಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: ಮೇ 15
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ವೇಳೆ ವರೆಗೆ): ಮೇ 18

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.20ರಂದು ಅಧಿಸೂಚನೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.
Continue Reading

ಉದ್ಯೋಗ

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ಅಭ್ಯರ್ಥಿ – 18, ಪರಿಶಿಷ್ಟ ಜಾತಿ – 7, ಪರಿಶಿಷ್ಟ ಪಂಗಡ – 4, ಪ್ರವರ್ಗ – 1- 2, ಪ್ರವರ್ಗ-2 (ಎ) -6, ಪ್ರವರ್ಗ-2 (ಬಿ)-2, ಪ್ರವರ್ಗ-3 (ಎ)-1, ಪ್ರವರ್ಗ-3 (ಬಿ)-1 ಹುದ್ದೆಗಳಿವೆ. ಅರ್ಜಿ ಸಲ್ಲಿಸುವವರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತತ್ಸಮಾನ ವಿದ್ಯಾರ್ಹತೆ: ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ ಮತ್ತು ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್‌ (ಎನ್‌.ಐ.ಒ.ಎಸ್‌.) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್‌. ಕರ್ನಾಟಕ ಪ್ರೌಢ ಶಿಕ್ಷಣ ಪ್ರೀಕ್ಷಾ ಮಂಡಳಿ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್‌ (ಕೆ.ಒ.ಎಸ್‌.).

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2 ಎ, 2 ಬಿ, 3 ಎ, 3 ಬಿ ವಿಭಾಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ ವರ್ಗದವರು ಅರ್ಜಿ ಶುಲ್ಕವಾಗಿ 300 ರೂ., ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಇದಕ್ಕಾಗಿ ಕ್ರೆಡಿಟ್‌ / ಡೆಬಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಸೌಲಭ್ಯ ಬಳಸಬಹುದು.

ಆಯ್ಕೆ ವಿಧಾನ

ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ. ಅದರಂತೆ 10ನೇ ತರಗತಿಯ ಗರಿಷ್ಠ ಅಂಕಗಳನ್ನು ಆಧರಿಸಿ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಪೈಕಿ ಅರ್ಹರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ 313 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 28. ಡಿಪ್ಲೋಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಎಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನಾಂಕ ಮೇ 28 (Job Alert).

ಹುದ್ದೆಗಳ ವಿವರ

ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ

ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಗಮನಿಸಿ, ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading
Advertisement
Prawal Revanna Case
ಕರ್ನಾಟಕ59 seconds ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Summer Health Tips
ಆರೋಗ್ಯ22 mins ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

karnataka Weather Forecast
ಮಳೆ52 mins ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Vistara Editorial
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ, ನಿಷ್ಪಕ್ಷಪಾತ ತನಿಖೆಯಾಗಲಿ

Drinking Water Before Meals
ಆರೋಗ್ಯ1 hour ago

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

World Laughter Day
ಆರೋಗ್ಯ2 hours ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ7 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ8 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ8 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌