Government Job : 'ಖಾಲಿ' ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ! - Vistara News

ಉದ್ಯೋಗ

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

Government Job : ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

VISTARANEWS.COM


on

Government Job Vistara Exclusive
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
VISTARA-EXCLUSIVE

ಬೆಂಗಳೂರು: ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

 • ಮಂಜೂರಾದ ಹುದ್ದೆಗಳು – 2,82,862
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
 • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

 • ಮಂಜೂರಾದ ಹುದ್ದೆಗಳು – 1,26,913
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
 • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

 • ಮಂಜೂರಾದ ಹುದ್ದೆಗಳು – 24,785
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
 • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

 • ಮಂಜೂರಾದ ಹುದ್ದೆಗಳು – 74,857
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
 • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

 • ಮಂಜೂರಾದ ಹುದ್ದೆಗಳು – 32,309
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
 • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

 • ಮಂಜೂರಾದ ಹುದ್ದೆಗಳು – 6,940
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
 • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

 • ಮಂಜೂರಾದ ಹುದ್ದೆಗಳು – 18,892
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
 • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

 • ಮಂಜೂರಾದ ಹುದ್ದೆಗಳು – 10,324
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
 • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

 • ಮಂಜೂರಾದ ಹುದ್ದೆಗಳು – 19,610
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
 • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

 • ಮಂಜೂರಾದ ಹುದ್ದೆಗಳು – 10,986
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
 • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

 • ಮಂಜೂರಾದ ಹುದ್ದೆಗಳು – 28,223
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
 • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

 • ಮಂಜೂರಾದ ಹುದ್ದೆಗಳು – 15,177
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
 • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

 • ಮಂಜೂರಾದ ಹುದ್ದೆಗಳು – 16,635
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
 • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

 • ಮಂಜೂರಾದ ಹುದ್ದೆಗಳು – 10,623
 • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
 • ಖಾಲಿ ಹುದ್ದೆಗಳು – 4,222

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

Job Alert: ಎಂಜಿನಿಯರಿಂಗ್‌ ಶಿಕ್ಷಣ ಮುಗಿಸಿದವರಿಗೆ ಗುಡ್‌ನ್ಯೂಸ್‌. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್‌ 13.

VISTARANEWS.COM


on

BEL
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ (Bharat Electronics Limited) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಕಂಪೆನಿ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಿಕೊಳ್ಳುತ್ತಿದೆ (BEL Trainee Engineer Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನ ಮಾರ್ಚ್‌ 13 (Job Alert).

ಹುದ್ದೆಗಳ ವಿವರ

ಬಿಇಎಲ್‌ ತನ್ನ ಕೇಂದ್ರ ವಲಯದಲ್ಲಿ – 68, ಪೂರ್ವ ವಲಯ – 86, ಪಶ್ಚಿಮ ವಲಯ – 139, ಉತ್ತರ ವಲಯ – 78, ಈಶಾನ್ಯ ವಲಯ – 15, ದಕ್ಷಿಣ ವಲಯ – 131 ಹುದ್ದೆಗಳು ಭರ್ತಿ ಮಾಡಲಿದೆ. ಈ ಪೈಕಿ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ, ಆಂಧ್ರ ಪ್ರದೇಶಗಳನ್ನು ಒಳಗೊಂಡ ದಕ್ಷಿಣ ವಲಯದಲ್ಲಿ 131 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಇ / ಬಿ.ಟೆಕ್, ಎಂಇ / ಎಂ.ಟೆಕ್. ಓದಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ ಬಿ.ಇ / ಬಿ.ಟೆಕ್‌ ಅಭ್ಯರ್ಥಿಗಳಿಗೆ 28 ವರ್ಷ ಮತ್ತು ಎಂ.ಇ / ಎಂ.ಟೆಕ್‌ ಅಭ್ಯರ್ಥಿಗಳಿಗೆ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದವರ ಶಾರ್ಟ್‌ ಲಿಸ್ಟ್‌ ಮಾಡಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ತೇರ್ಗಡೆಯಾವರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ 2 ವರ್ಷಕ್ಕೆ ನಿಯೋಜನೆಗೊಳಿಸಲಾಗುತ್ತದೆ. ಕಾರ್ಯಕ್ಷಮತೆ ಆಧರಿಸಿ ಮತ್ತೊಂದು ವರ್ಷ ಹುದ್ದೆ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ

ಪಿಡಬ್ಲ್ಯುಬಿಡಿ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 + 18% ಜಿಎಸ್‌ಟಿ ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬಹುದು. ಆಯ್ಕೆಯಾದವರಿಗೆ 40,000 ರೂ. ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಈ ಅರ್ಜಿ ಗೂಗಲ್ ಫಾರ್ಮ್ ಆಗಿದ್ದು, ಬೇರೆ ಯಾವುದೇ ಮಾದರಿಯ, ಅಪೂರ್ಣ ಅರ್ಜಿಯನ್ನು ಸ್ವೀಕರಿಸುವುದಿಲ್ಲ. ಅಭ್ಯರ್ಥಿಗಳು ಗೂಗಲ್ ಫಾರ್ಮ್ ಅನ್ನು ಯಶಸ್ವಿಯಾಗಿ ಭರ್ತಿ ಮಾಡಲು ಗೂಗಲ್ ಕ್ರೋಮ್ ಅನ್ನು ಬಳಸಬೇಕು. ಸರಿಯಾಗಿ ಭರ್ತಿ ಮಾಡಿದ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆಯಬೇಕು. ನೇಮಕಾತಿಯ ಸಂದರ್ಭದಲ್ಲಿ ಇದನ್ನು ಹಾಜರು ಪಡಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಮೇಲ್‌ ಐಡಿ: E-mail: rechr4042@bel.co.in ಅಥವಾ ದೂರವಾಣಿ ಸಂಖ್ಯೆ: 080-22195629 ಸಂಪರ್ಕಿಸಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿದೆ 277 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಸುಮಾರು 277 ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 2.

VISTARANEWS.COM


on

NALCO
Koo

ಬೆಂಗಳೂರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (National Aluminium Company Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (NALCO Recruitment 2024). ಆಸಕ್ತರು ಮಾರ್ಚ್‌ 4ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಏಪ್ರಿಲ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮೆಕ್ಯಾನಿಕಲ್‌- 127, ಎಲೆಕ್ಟ್ರಿಕಲ್‌- 100, ಇನ್‌ಸ್ಟ್ರುಮೆಂಟೇಷನ್‌- 20, ಲೋಹಶಾಸ್ತ್ರ (Metallurgy)- 10, ಕೆಮಿಕಲ್‌- 13, ಕೆಮಿಸ್ಟ್ರಿ- 7 ಹುದ್ದೆಗಳಿವೆ. ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆಗೆ ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ, ಕೆಮಿಕಲ್‌, ಲೋಹಶಾಸ್ತ್ರ, ಎಲೆಕ್ಟ್ರಿಕಲ್‌, ಇನ್‌ಸ್ಟ್ರುಮೆಂಟೇಷನ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿ.ಇ / ಬಿ.ಟೆಕ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಿದರೆ ಸಾಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಇದಕ್ಕಾಗಿ ಇಂಟರ್‌ನೆಟ್‌ ಬ್ಯಾಂಕಿಂಗ್‌ / ಡೆಬಿಟ್‌ / ಕ್ರೆಡಿಟ್‌ ಕಾರ್ಟ್‌ / ಯುಪಿಐ ಪಾವತಿ ವಿಧಾನವನ್ನು ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATEರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ವೈಯಕ್ತಿಕ ಸಂದರ್ಶನ, ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. ನೇಮಕ ಹೊಂದುವವರಿಗೆ 40,000 ರೂ. – 1,80,000 ರೂ. ಮಾಸಿಕ ವೇತನವಿದೆ. ಆಯ್ಕೆಯಾಗುವವರಿಗೆ ಕಂಪೆನಿಯ ವಿವಿಧ ಬ್ರ್ಯಾಂಚ್‌ಗಳಲ್ಲಿ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿನ ಅವರ ಸಾಮರ್ಥ್ಯವನ್ನು ಗಮನಿಸಿ ಬಳಿಕ ಅವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳಲಾಗುತ್ತದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ ಅಥವಾ ವಿದೇಶ. ಸ್ಥಳವನ್ನು ಬಳಿಕ ನಿರ್ಧರಿಸಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
 • Apply Now ಆಯ್ಕೆ ಮೇಲೆ ಕ್ಲಿಕ್‌ ಮಾಡಿ ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
 • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
 • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
 • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
 • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಮಾರ್ಚ್‌ 29.

VISTARANEWS.COM


on

thdc
Koo

ಬೆಂಗಳೂರು: ಎಂಜಿನಿಯರಿಂಗ್‌ ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ (Tehri Hydro Development Corporation India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (THDC Recruitment 2024). ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳಿಗೆ ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್‌ 29(Job Alert).

ಹುದ್ದೆಗಳ ವಿವರ

ಎಂಜಿನಿಯರಿಂಗ್‌ ಟ್ರೈನಿ-ಸಿವಿಲ್‌: 40, ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಿಕಲ್‌: 25, ಎಂಜಿನಿಯರಿಂಗ್‌ ಟ್ರೈನಿ-ಮೆಕ್ಯಾನಿಕಲ್‌: 30 ಮತ್ತು ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಾನಿಕ್ಸ್‌: 5 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಆಸಕ್ತ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಬಿ.ಇ. / ಬಿ.ಟೆಕ್‌. ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಾಜಿ ಸೈನಿಕ / ಡಿಪಾರ್ಟ್‌ಮೆಂಟಲ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATE 2023ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಗ್ರೂಪ್‌ ಡಿಸ್ಕಷನ್‌, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವವರಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ಲಭ್ಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ಅದಾದ ಬಳಿಕ ಉದ್ಯೋಗದ ಸ್ಥಳ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

THDC Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ವಿಳಾಸ https://www.thdc.co.in/ಕ್ಕೆ ಭೇಟಿ ನೀಡಿ.
 • Careers ಆಯ್ಕೆ ಕ್ಲಿಕ್‌ ಮಾಡಿ New Openings ಸೆಲೆಕ್ಟ್‌ ಮಾಡಿ ಬಳಿಕ Apply Online ಅನ್ನು ಆಯ್ಕೆ ಮಾಡಿ.
 • ನಿಮ್ಮ ಅಧಿಕೃತ ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
 • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
 • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
 • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
 • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ

Continue Reading

ಉದ್ಯೋಗ

Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ ಸಂಸ್ಥೆಯಲ್ಲಿ ಖಾಲಿ ಇರುವ 93 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 27.

VISTARANEWS.COM


on

nbcc
Koo

ಬೆಂಗಳೂರು: ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ ಸಂಸ್ಥೆ (National Buildings Construction Corporation Limited) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NBCC Recruitment 2024). ಜೂನಿಯರ್ ಎಂಜಿನಿಯರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಮುಂತಾದ 93 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್ 27 (Job Alert).

ಹುದ್ದೆಗಳ ವಿವರ

ಜನರಲ್‌ ಮ್ಯಾನೇಜರ್‌ -3, ಅಡಿಷನಲ್‌ ಜನರಲ್‌ ಮ್ಯಾನೇಜರ್‌ – 2, ಡೆಪ್ಯುಟಿ ಜನರಲ್‌ ಮ್ಯಾನೇಜರ್‌ – 1, ಮ್ಯಾನೇಜರ್‌ – 2, ಡೆಪ್ಯುಟಿ ಮ್ಯಾನೇಜರ್‌ – 6, ಜೂನಿಯರ್‌ ಎಂಜಿನಿಯರ್‌ – 40, ಪ್ರಾಜೆಕ್ಟ್‌ ಮ್ಯಾನೇಜರ್‌ – 3, ಡೆಪ್ಯುಟಿ ಪ್ರಾಜೆಕ್ಟ್‌ ಮ್ಯಾನೇಜರ್‌ – 2, ಸೀನಿಯರ್‌ ಪ್ರಾಜೆಕ್ಟ್‌ ಎಕ್ಸಿಕ್ಯುಟಿವ್‌ – 30, ಮ್ಯಾನೇಜ್‌ಮೆಂಟ್‌ ಟ್ರೈನಿ -4 ಸೇರಿ 93 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಎಂಜಿನಿಯರಿಂಗ್‌ / ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಮ್ಯಾನೇಜ್‌ಮೆಂಟ್‌ ಟ್ರೈನಿ (ಲಾ) ಹುದ್ದೆಗೆ 500 ರೂ., ಉಳಿದೆಲ್ಲ ಹುದ್ದೆಗಳಿಗೆ 1,000 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವಯೋಮಿತಿ

ಹುದ್ದೆಗಳಿಗೆ ಅನುಗುಣವಾಗಿ 28 ವರ್ಷದಿಂದ 49 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ

ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌ (CBT), ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
 • ನಿಮ್ಮ ಫೋನ್‌ ನಂಬರ್‌, ಇ-ಮೇಲ್‌ ಐಡಿ ಮುಂತಾದ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
 • ನಿಮ್ಮ ಫೋನ್‌ ನಂಬರ್‌ / ಇ-ಮೇಲ್‌ಗೆ ಕೋಡ್‌ ರವಾನೆಯಾಗುತ್ತದೆ.
 • ಇದನ್ನು ಬಳಿಸಿ ಅಪ್ಲಿಕೇಷನ್‌ ಫಾರಂ ಓಪನ್‌ ಮಾಡಿ.
 • ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯ ದಾಖಲೆ, ಪಾಸ್‌ಪೋರ್ಟ್‌ ಫೋಟೊ, ಸಹಿಯನ್ನು ಅಪ್‌ಲೋಡ್‌ ಮಾಡಿ.
 • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
 • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
 • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನು ಗಮನಿಸಿ

 • ಆನ್‌ಲೈನ್‌ ಅಪ್ಲಿಕೇಷನ್‌ನ ಪ್ರಿಂಟ್‌ ಔಟ್‌ಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.
 • ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚಳ ಅಥವಾ ಕಡಿತ ಆಗುವ ಸಾಧ್ಯತೆ ಇರುತ್ತದೆ.
 • ಅಭ್ಯರ್ಥಿಗಳು ನೀಡಿರುವ ಇ-ಮೇಲ್‌ ಐಡಿಯನ್ನು ಕನಿಷ್ಠ ಒಂದು ವರ್ಷದವರೆಗೆ ಸಕ್ರಿಯವಾಗಿರಿಸಿಕೊಳ್ಳಬೇಕು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸ್‌ ಆದವರಿಗೆ ಗುಡ್‌ನ್ಯೂಸ್‌; 2,500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

Continue Reading
Advertisement
railway crossing work Bengaluru Mysuru train services suspended for 5 days
ಬೆಂಗಳೂರು18 mins ago

Train services: ರೈಲ್ವೆ ಕ್ರಾಸಿಂಗ್‌ ಕಾಮಗಾರಿ; 5 ದಿನ ಬೆಂಗಳೂರು-ಮೈಸೂರು ರೈಲು ಸಂಚಾರ ಬಂದ್‌

Sedition Case Mandya
ಮಂಡ್ಯ45 mins ago

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Couple
ದೇಶ1 hour ago

ಹೆಣ್ಣುಮಕ್ಕಳನ್ನು ‘ಡಾರ್ಲಿಂಗ್‌’ ಎಂದು ಕರೆಯುವುದೂ ಇನ್ನು ಲೈಂಗಿಕ ಕಿರುಕುಳ; ಹುಡುಗರೇ ಹುಷಾರ್!

china military
ವಿದೇಶ1 hour ago

ಮಾಲ್ಡೀವ್ಸ್‌ಗೆ ಉಚಿತ ಮಿಲಿಟರಿ ನೆರವು ನೀಡುವ ಒಪ್ಪಂದಕ್ಕೆ ಚೀನಾ ಸಹಿ

Rameshwarm Cafe
ಪ್ರಮುಖ ಸುದ್ದಿ1 hour ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

NIA Raid
ಕರ್ನಾಟಕ1 hour ago

NIA Raid: ಬೆಂಗಳೂರು ಜೈಲಿನಲ್ಲಿ ಉಗ್ರ ದಾಳಿಗೆ ಸ್ಕೆಚ್; 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

Missile Attack
ವಿದೇಶ2 hours ago

Missile Attack: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ; ಕೇರಳ ಮೂಲದ ವ್ಯಕ್ತಿ ಸಾವು

Raja Marga Column Beena das2
ಸ್ಫೂರ್ತಿ ಕತೆ4 hours ago

Raja Marga Column : ಕ್ರಾಂತಿ ಸಿಂಹಿಣಿ ಬೀನಾ ದಾಸ್! ಅನಾಥ ಶವದ ಪರ್ಸಲ್ಲಿತ್ತು ಸುಭಾಸ್ ಚಿತ್ರ!

Best Ways To Clean Fruits
ಆಹಾರ/ಅಡುಗೆ4 hours ago

Best Ways To Clean Fruits: ಹಣ್ಣುಗಳನ್ನು ತಿನ್ನುವ ಮೊದಲು ನೀವು ಈ ವಿಧಾನದಲ್ಲಿ ತೊಳೆದುಕೊಂಡಿದ್ದೀರಾ?

Sunny weather across the karnataka
ಮಳೆ5 hours ago

Karnataka Weather: ರಾಜ್ಯಾದ್ಯಂತ ಇಂದು ಬಿಸಿಲಿನ ವಾತಾವರಣ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ18 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ21 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌