ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು (Government Jobs) ಎಂದು ಕನಸು ಕಾಣುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಶೀಘ್ರದಲ್ಲಿಯೇ ವಿವಿಧ ಇಲಾಖೆಗಳ 504 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka Cm Siddaramaia) ತಿಳಿಸಿದ್ದಾರೆ.
ʼʼ16 ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 656 ಹುದ್ದೆಗಳ ನೇರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಎಸ್ ಸೇರಿ ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಯಂತಹ ವಿವಿಧ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಭರ್ತಿ ಮಾಡಲು ಸಮ್ಮತಿ ಲಭಿಸಿದೆʼʼ ಎಂದು ಅವರು ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ ಈ ಮಾಹಿತಿ ನೀಡಿದರು. ಯಾವೆಲ್ಲ ಇಲಾಖೆಯಲ್ಲಿ, ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳಲಾಗುತ್ತಿದೆ ಎನ್ನುವುದರ ಮಾಹಿತಿ ಇಲ್ಲಿದೆ:
ಗ್ರಾಮ ಆಡಳಿತ ಅದಿಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ
ಇದರ ಜತೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಧಾಕಾರಕ್ಕೆ ಜವಾಬ್ದಾರಿ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್; 64 ಹುದ್ದೆಗಳಿಗೆ ಫೆ. 10ರಿಂದ ಅರ್ಜಿ ಸಲ್ಲಿಸಿ
ವಯೋಮಿತಿ ನಿಗದಿ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸರ್ಕಾರವು ವಯೋಮಿತಿಯನ್ನೂ ನಿಗದಿ ಪಡಿಸಿದೆ.
ಪರಿಶಿಷ್ಟ ಜಾತಿ / ಪಂಗಡ / ಪ್ರವರ್ಗ-1: ಕನಿಷ್ಠ-18 ವರ್ಷ, ಗರಿಷ್ಠ: 40 ವರ್ಷ
2ಎ, 2ಬಿ, 3ಎ, 3 ಬಿ: ಕನಿಷ್ಠ-18 ವರ್ಷ, ಗರಿಷ್ಠ: 38 ವರ್ಷ
ಸಾಮಾನ್ಯ ವರ್ಗ: ಕನಿಷ್ಠ-18 ವರ್ಷ, ಗರಿಷ್ಠ: 35 ವರ್ಷ.
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ-ಸಾಮಾನ್ಯ) ನಿಯಮಗಳು-2021ರಲ್ಲಿ ನಿಗದಿಪಡಿಸಿರುವಂತೆ ಪಠ್ಯ ಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ