ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ಜಲ ಸಂಪನ್ಮೂಲ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 313 ಸಿ ಗುಂಪಿನ ಹುದ್ದೆಗಳಿಗೆ ಅರ್ಜಿ (Job Alert) ಕರೆದಿದೆ. ಏಪ್ರಿಲ್ 29ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮೇ ತಿಂಗಳ 28ಕ್ಕೆ ಕೊನೇ ದಿನಾಂಕವಾಗಿದೆ.
ಜಲ ಸಂಪನ್ಮೂಲ ಇಲಾಖೆಯಲ್ಲಿ 216 ಕಿರಿಯ ಇಂಜಿನಿಯರ್ (ಸಿವಿಲ್), ಕಿರಿಯ ಇಂಜಿನಿಯರ್ (ಸಿವಿಲ್) ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ 54 ಹುದದೆಗಳು, ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 26 ಹುದ್ದೆಗಳು, ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 26 ಹುದ್ದೆಗಳು, ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ 04 ಹುದ್ದೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 13 ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಬೇಕು. ಭಾವಚಿತ್ರ.ಸಹಿ. ವಯೋಮಿತಿ, ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್. UPI ಮೂಲಕ ಸಂದಾಯ ಮಾಡಬಹುದು.
ಇದನ್ನೂ ಓದಿ : Job Alert: 364 ಭೂ ಮಾಪಕರ ಹುದ್ದೆಗೆ ಇಂದೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
ಸಾಮಾನ್ಯ ಅಭ್ಯರ್ಥಿಗೆ 600 ರೂಪಾಯಿ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕರಿಗೆ 50 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1 ಹಾಗೂ ಅಂಗವಿಕಲರಿಗೆ ಶುಲ್ಕ ವಿನಾಯಿತಿಯಿದೆ.
ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. 150 ಅಂಕದ ಪ್ರಶ್ನೆ ಪತ್ರಿಕೆ ಹೊಂದಿರುತ್ತದೆ. ಕನ್ನಡ ಭಾಷೆ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಸ್ಪರ್ಧಾತ್ಮ ಕ ಪರೀಕ್ಷೆ ಮೂಲಕ ಪಾಸಾಗಬೇಕು. ಪರೀಕ್ಷೆ ಅಂಕ ಹಾಗೂ ಮೀಸಲಾತಿ ಆಧಾರದಲ್ಲಿ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.