ಕರ್ನಾಟಕ ಹೈಕೋರ್ಟ್ ಖಾಲಿ ಇರುವ 13 ಲಾ ಕ್ಲರ್ಕ್ ಕಮ್ ರೀಸರ್ಚ್ ಅಸಿಸ್ಟೆಂಟ್ (Law Clerks-cum-Research Assistants) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ (High Court Recruitment 2023) ಹೊರಡಿಸಿದೆ. ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನವಾಗಿದೆ.
ಈ ಹುದ್ದೆಗೆ ನೇಮಕಗೊಳ್ಳುವವರು ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ತೀರ್ಪು ನೀಡುವಲ್ಲಿ ಮತ್ತು ನ್ಯಾಯಾಲಯದ ಆಡಳಿತ ನೋಡಿಕೊಳ್ಳುವಲ್ಲಿ ನೆರವಾಗಬೇಕಿರುತ್ತದೆ. ಈ ಹುದ್ದೆಯಲ್ಲಿರುವವರಿಗೆ ಕೋರ್ಟ್ ರೂಮ್/ ಲೈಬ್ರರಿ/ ಮಾನ್ಯ ನ್ಯಾಯಮೂರ್ತಿಗಳ ಕಚೇರಿ ಪ್ರವೇಶಿಸಲು ಅನುಮತಿ ಇರುತ್ತದೆ. ನೇಮಕಗೊಂಡ ಅಭ್ಯರ್ಥಿಗಳು ಬೆಂಗಳೂರು, ಧಾರವಾಡ, ಕಲಬುರಗಿಯಲ್ಲಿ ಕಾರ್ಯನಿರ್ವಹಿಸಬೇಕಿರುತ್ತದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2023 (ರಾತ್ರಿ 11.59 ಗಂಟೆಯ ಒಳಗೆ)
ಅರ್ಜಿ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ (Click Here) ಮಾಡಿ
ಅಭ್ಯರ್ಥಿಗಳು ಅರ್ಜಿಯೊಂದಿಗೆ ಕಡ್ಡಾಯವಾಗಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸವನ್ನು ನೀಡಬೇಕು. ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುವುದಿಲ್ಲ. ನೇಮಕಗೊಂಡವರಿಗೆ ಗೌರವ ಧನವಾಗಿ 25 ಸಾವಿರ ರೂ. ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನು?
ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕಾದದು ಅವಶ್ಯಕ. ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೊಂದಾಯಿಸಿಕೊಂಡಿರಬೇಕು. ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ (Click Here) ಮಾಡಿ.
ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಂದರೆ ಫೆಬ್ರವರಿ 25 ಕ್ಕೆ 30 ವರ್ಷ ಮೀರಿರಬಾರದು. ಎಲ್ಲ ಅಭ್ಯರ್ಥಿಗಳಿಗೂ ಇದು ಅನ್ವಯವಾಗಲಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ನೇಮಕ ಹೇಗೆ?
ಅರ್ಜಿ ಸಲ್ಲಿಸಲಾಗಿರುವ ಎಲ್ಲ ಅಭ್ಯರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಇತರ ಸರ್ಟಿಫಿಕೇಟ್‌ಗಳನ್ನು ಪರಿಶೀಲಿಸಿ, ಮೆರಿಟ್ ಆಧಾರದಲ್ಲಿ ಪಟ್ಟಿ ತಯಾರಿಸಿ, ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದ ಮೂಲಕ ನೇಮಕ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.
ಇದನ್ನೂ ಓದಿ : Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ