ಬೆಂಗಳೂರು : ಕರ್ನಾಟಕ ಹೈಕೋರ್ಟ್ 39 ವಾಹನ ಚಾಲಕರ ನೇಮಕಕ್ಕಾಗಿ ಅಧಿಸೂಚನೆ (High Court Recruitment 2023) ಹೊರಡಿಸಿದೆ. ಇದರರಲ್ಲಿ ಎರಡು ಹುದ್ದೆಗಳು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆನ್‌ಲೈನ್ ಹೊರತು ಪಡಿಸಿ ಬೇರೆ ಮಾರ್ಗದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಚಾಲಕ ಹುದ್ದೆಗಳಿಗೆ ನೇಮಕಗೊಂಡವರು ಬೆಂಗಳೂರು ಮಾತ್ರವಲ್ಲದೆ, ಧಾರವಾಡ ಅಥವಾ ಕಲಬುರಗಿ ಪೀಠದಲ್ಲಿಯೂ ಕಾರ್ಯನಿರ್ವಹಿಸಬೇಕಾಗುತ್ತದೆ. ಕರ್ತವ್ಯದ ಬಿಡುವಿನ ವೇಳೆಯಲ್ಲಿ ಇತರೆ ಕಚೇರಿ ಕರ್ತವ್ಯಗಳನ್ನೂ ಸಹ ನಿರ್ವಹಿಸಬೇಕಿರುತ್ತದೆ. ನೇಮಕಗೊಂಡವರಿಗೆ ಹೈಕೋರ್ಟ್‌ನ ಪರಿಷ್ಕೃತ ವೇತನ ಶ್ರೇಣಿಯ ಪ್ರಕಾರ ಮಾಸಿಕ ರೂ. 25,500– 81,100 (ಲೆವೆಲ್- 4) ವೇತನವನ್ನು ಮತ್ತು ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಹತೆಗಳೇನು?
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಭಾರಿ ಪ್ರಯಾಣಿಕ ಮೋಟಾರು ವಾಹನ ಅಥವಾ ಸರಕು ಸಾಗಣೆ ಮಾಡುವ ಭಾರೀ ಪ್ರಮಾಣ ವಾಹನವನ್ನು ಚಾಲನೆ ಮಾಡುವ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಹಾಗೂ ಚಾಲನೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವರಾಗಿರಬೇಕು.
ವಯೋಮಿತಿ ಎಷ್ಟು?
ಅಭ್ಯರ್ಥಿಗಳ ಕನಿಷ್ಠ ವಯಸ್ಸ 18 ವರ್ಷಗಳಾಗಿರಬೇಕು ಹಾಗೂ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೇ ಹಿಂದುಳಿದ ಜಾತಿಗಳ ಪ್ರವರ್ಗ-1 ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಇತರೇ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಮತ್ತು 2ಬಿ ಹಾಗೂ 3ಎ ಮತ್ತು 3ಬಿ ಅಭ್ಯರ್ಥಿಗಳಾದರೆ 38 ವರ್ಷ ಮೀರಿರಬಾರದು.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 6, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆನ್‌ಲೈನ್‌ನಲ್ಲಿ ಏಪ್ರಿಲ್ 6 (ರಾತ್ರಿ 11.59ರವರೆಗೆ) ಆಫ್‌ಲೈನ್‌ನಲ್ಲಿಯಾದರೆ ಏಪ್ರಿಲ್ 12.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://karnatakajudiciary.kar.nic.in
ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-Iಕ್ಕೆ ಸೇರಿದ ಅಭ್ಯರ್ಥಿಗಳನ್ನು ಹೊರತುಪಡಿಸಿ) ಹುದ್ದೆಗೆ ಸಂಬಂಧಿಸಿದಂತೆ ನಿಗದಿ ಪಡಿಸಿದ ರೂ. 500 ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-Iಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು ರೂ. 250 ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಅರ್ಜಿ ಶುಲ್ಕ ಪಾವತಿಸಬಹುದು. ಆಫ್‌ಲೈನ್‌ನಲ್ಲಿಯೂ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ (Click Here) ಮಾಡಿ.
ನೇಮಕ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ, ವಾಹನ ಚಾಲನಾ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.
ಇದನ್ನೂ ಓದಿ : DCC Bank Recruitment 2023 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ 36 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ