Site icon Vistara News

Yuva Nidhi Scheme: ಯುವನಿಧಿ ನೋಂದಣಿ ಜೋರು; ನೀವಿನ್ನೂ ಮಾಡಿಲ್ವಾ? ಹಾಗಿದ್ರೆ ಈ ವಿಡಿಯೊ ನೋಡಿ!

how to registration Yuva Nidhi Scheme watch this video ಯುವನಿಧಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Yuva Nidhi Scheme) ಡಿ. 26ರಿಂದ ನೋಂದಣಿಗೆ ಚಾಲನೆ ನೀಡಲಾಗುತ್ತಿದ್ದು, ಜ. 12ರಂದು ಖಾತೆಗೆ ನೇರವಾಗಿ ಜಮೆಯಾಗಲಿದೆ. ಯುವ ನಿಧಿ ಯೋಜನೆಗೆ 2023ರ ಡಿಸೆಂಬರ್‌ 26ರಿಂದ 2024ರ ಜನವರಿ 1ರ ಅವಧಿಯ 7 ದಿನಗಳಲ್ಲಿ 19,392 ಮಂದಿ ನೋಂದಣಿ ಮಾಡಿಸಿದ್ದಾರೆ.

ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದ್ದು, ಅಂದು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುವುದಾಗಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಈಗಾಗಲೇ ಘೋಷಿಸಿದ್ದಾರೆ. ಕೆಲಸ ಸಿಗದಿರುವ ಬಗ್ಗೆ ಫಲಾನುಭವಿ ಸ್ವಯಂ ಧೃಢೀಕರಣ ಮಾಡಿಕೊಳ್ಳಬೇಕು. ಈ ನಡುವೆ ಕೆಲಸ ಸಿಕ್ಕರೆ ಅವರಿಗೆ ನಿಧಿ ಹಣ ಸಿಗುವುದಿಲ್ಲ.

ಆದರೆ, ಒಂದು ವೇಳೆ ಉದ್ಯೋಗ ಸಿಕ್ಕ ಮೇಲೆಯೂ ಇಲ್ಲವೇ ಉದ್ಯೋಗದಲ್ಲಿದ್ದೂ ಅರ್ಜಿ ಹಾಕಿ ಹಣ ಪಡೆದಿದ್ದು ಸಾಬೀತಾದರೆ ಅಂಥವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಅಲ್ಲದೆ, ಅವರು ಪಡೆದ ಅಷ್ಟೂ ಹಣವನ್ನು ವಾಪಸ್‌ ಪಡೆಯಲಾಗುವುದು. ಯುವ ನಿಧಿ ಯೋಜನೆಯ ದುರುಪಯೋಗದ ಬಗ್ಗೆ ಸರ್ಕಾರ ಕ್ರಮವಹಿಸಲಿದೆ. ಯುವನಿಧಿ ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಯುವ ನಿಧಿ ನೋಂದಣಿ ಹೇಗೆ? ಇಲ್ಲಿದೆ ವಿಡಿಯೋ

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Housing Scheme: ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version