ಅವರೆಲ್ಲ ಬೇಕಾಬಿಟ್ಟಿ ರಾಜೀನಾಮೆ ಬರ್ದಿಟ್ಟು ಕೆಲಸ ಬಿಟ್ಟು ಹೋಗ್ತಾರಲ್ಲಾ ಯಾಕೆ? - Vistara News

ಉದ್ಯೋಗ

ಅವರೆಲ್ಲ ಬೇಕಾಬಿಟ್ಟಿ ರಾಜೀನಾಮೆ ಬರ್ದಿಟ್ಟು ಕೆಲಸ ಬಿಟ್ಟು ಹೋಗ್ತಾರಲ್ಲಾ ಯಾಕೆ?

ಜಾಬ್‌ ಚೇಂಜ್‌ ಎನ್ನುವುದು ಈಗ ಸುಲಿದ ಬಾಳೆ ಹಣ್ಣು ತಿಂದ ಹಾಗೆ! ಎರಡು ದಶಕಗಳ ಹಿಂದೆ ಒಂದೇ ಕೆಲಸಕ್ಕೆ ಅಂಟಿಕೊಂಡಿದ್ದವರು ಕಳೆದ ಕೆಲವು ವರ್ಷಗಳಲ್ಲಿ ಏಕ್‌ದಂ ಜಾಬ್‌ ಜಂಪ್‌ ಮಾಡುತ್ತಿರುವುದರ ಹಿಂದಿನ ಕಾರಣ ಏನು?

VISTARANEWS.COM


on

Resignation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ʻಕೆಲವೇ ದಶಕಗಳ ಹಿಂದೆ ಹಿಂದೆ ಒಂದು ಉದ್ಯೋಗ ಸಿಕ್ಕಿದರೆ ಅದು ಇಡೀ ಜೀವಮಾನಕ್ಕೆ ಫಿಕ್ಸ್‌ ಎನ್ನುವ ಪರಿಸ್ಥಿತಿ ಇತ್ತು. ಒಬ್ಬ ವ್ಯಕ್ತಿ ಒಂದೇ ಸಂಸ್ಥೆಯಲ್ಲಿ ಜೀವನದ ಬಹುಕಾಲವನ್ನು ಕಳೆದಿದ್ದಾನೆ ಅಂದರೆ ಅದೊಂದು ಬಹುದೊಡ್ಡ ಸಾಧನೆ ಅನಿಸ್ತಾ ಇತ್ತು. ಆಗಾಗ ಕೆಲಸ ಬದಲಾಯಿಸೋರನ್ನು ಅವನಿಗೆ ಎಲ್ಲಿಯೂ ಸೆಟ್‌ ಆಗುವುದಿಲ್ಲ ಎಂದು ಎಲ್ಲರೂ ಹಂಗಿಸಿ ಅಪಮಾನ ಮಾಡುತ್ತಿದ್ದರು. ತುಂಬಾ ಕಡೆ ಕೆಲಸ ಮಾಡಿದ್ದಾನೆ ಅನ್ನುವುದೇ ನೆಗೆಟಿವ್‌ ಪಾಯಿಂಟ್‌ ಆಗುತ್ತಿತ್ತು. ಆದರೆ, ಈಗ ಫುಲ್‌ ಚೇಂಜ್‌!

ಒಂದೇ ಸಂಸ್ಥೆಯಲ್ಲಿ ಹತ್ತು ವರ್ಷ ಕೆಲಸ ಮಾಡಿದ್ದೇನೆ ಎಂದರೆ ʻಏನ್ಸಾರ್‌ ನಿಮಗೆ ಬೇರೆ ಎಲ್ಲಿಂದಲೂ ಆಫರ್‌ ಬಂದಿಲ್ವಾʼ ಅಂತ ನೇರವಾಗಿ ಕೇಳ್ತಾರೆ. ಒಂದೇ ಸಂಸ್ಥೇಲಿ ಗೂಟ ಹಾಕಿಕೊಂಡು ಕೂತಿದ್ದಾರೆ ಎಂದರೆ ಒಂದೋ ಬೇರೆ ಕಡೆ ಡಿಮ್ಯಾಂಡಿಲ್ಲ ಅಂತ, ಅಥವಾ ಅಂತ ಕೆಪ್ಯಾಸಿಟಿನೇ ಇಲ್ಲ ಅಂತಾನೇ ಸಮಾಜ ತೀರ್ಮಾನ ಮಾಡಿಬಿಡುತ್ತದೆ.

ಇತ್ತೀಚಿನ ದಿನಗಳಲ್ಲಂತೂ ಒಂದು ಕಂಪನಿಯಲ್ಲಿ ಒಂದು ವರ್ಷ ಕೆಲಸ ಮಾಡಿದ್ದಾನೆ ಅಂದರೆ ಅದುವೇ ದೊಡ್ಡ ಸಾಧನೆ. ಯಾವ ದೊಡ್ಡ ಐಟಿ ಕಂಪನಿಗಳಿಗೂ ಒಬ್ಬ ಒಳ್ಳೆಯ ಉದ್ಯೋಗಿಯನ್ನು ಮೂರು ವರ್ಷಕ್ಕಿಂತ ಹೆಚ್ಚು ಉಳಿಸಿಕೊಳ್ಳಲು ಕಷ್ಟಕರವಾದ ಸನ್ನಿವೇಶ ಇದೆ. ಈ ಧಾವಂತ ಎಷ್ಟಿದೆ ಎಂದರೆ ಕಂಪನಿಗಳು ಈ ರೀತಿ ಕೆಲಸ ಬಿಟ್ಟು ಹೋಗುವುದನ್ನು ತಪ್ಪಿಸಲು ಒಂದು, ಎರಡು, ಮೂರು ವರ್ಷದ ಬಾಂಡ್‌ ಬರೆಸಿಕೊಳ್ಳುವ ಪದ್ಧತಿಯನ್ನು ಶುರು ಮಾಡಿದ್ದವು. ಆದರೆ, ಈಗ ಬಾಂಡ್‌ ಇದ್ದರೆ ಕೆಲಸಕ್ಕೇ ಬರುವುದಿಲ್ಲ ಅಂತ ಕಟ್ಟು ನಿಟ್ಟಾಗಿ ಹೇಳಿಬಿಡುತ್ತಾರೆ ವೃತ್ತಿಪರರು! ಉದ್ಯೋಗಿಗಳು ಬಿಡಿ, ಕ್ಯಾಂಪಸ್‌ ಸೆಲೆಕ್ಷನ್‌ನಲ್ಲೂ ಬಾಂಡ್‌ ಇದ್ದರೆ ಬರುವುದಿಲ್ಲ ಎಂದು ಕಾಲೇಜು ಮಕ್ಕಳೂ ಆಫರನ್ನೇ ರಿಜೆಕ್ಟ್‌ ಮಾಡಿಬಿಡುತ್ತಾರೆ.

ಇನ್ನು ಕೆಲಸ ಬಿಡುವಾಗ ಫಾರ್ಮಾಲಿಟಿಸ್‌ಗಳಿಗೆ ಗುಂಡು ಹೊಡೆದು ಎಷ್ಟೋ ಕಾಲವಾಗಿದೆ! ಮೂರು ತಿಂಗಳು ಮೊದಲು ಹೇಳಬೇಕು, ಎರಡು ತಿಂಗಳು ಮೊದಲು ಹೇಳಬೇಕು ಅನ್ನೋ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ʻನಾಳೆಯಿಂದ ಬರಲ್ಲʼ ಅಂತ ಮೇಲ್‌ ಹಾಕಿ ಹೊರಟುಬಿಡುವಷ್ಟು ಸರಳವಾಗಿದೆ. ಇನ್ನು ʻಬಾಯ್‌ ಬಾಯ್‌ ಸರ್‌ʼ ಅಂತಾನೋ, ʻಕೆಲಸ ತುಂಬ ಬೋರಾಗ್ತಿದೆ… ಹಾಗಾಗಿ ರಿಸೈನ್‌ ಮಾಡ್ತಾ ಇದೇನೆʼ ಅಂತಾನೋ, ʻಕೆಲಸದಲ್ಲಿ ಮಜಾ ಇಲ್ಲ ಸರ್‌ʼ ಅಂತಾನೋ ನೇರವಾಗಿ ಹೇಳುವಷ್ಟು ಪರಿಸ್ಥಿತಿ ಬದಲಾಗಿದೆ. ಅಚ್ಚರಿ ಎಂದರೆ ಕಂಪನಿಗಳು ಕೂಡಾ ಹೊಸ ಮಾದರಿಗೆ ಒಗ್ಗಿಕೊಂಡಿವೆ. ಆದರೂ ಆಗಾಗ ಹೊಸಬರನ್ನು ನೇಮಕ ಮಾಡಿಕೊಂಡು ಅವರಿಗೆ ತರಬೇತಿ ಕೊಡುವುದು, ಅವರು ಒಂದಿಷ್ಟು ರೆಕ್ಕೆ ಬಲಿತ ಕೂಡಲೇ ಹಾರಿ ಹೋಗುವುದು.. ಹೀಗೆ ಮಾಡುವುದರಿಂದ ಕಂಪನಿಯ ವ್ಯವಸ್ಥೆಯ ಮೇಲೆ ಪರಿಣಾಮ ಬಿದ್ದೇ ಬೀರುತ್ತದೆ. (ಕಂಪನಿಗಳೂ ಹಿಂದೆ ಮುಂದೆ ನೋಡದೆ ಪಿಂಕ್‌ ಸ್ಲಿಪ್‌ ಕೊಡುವುದು ಬೇರೆಯೇ ಸಂಗತಿ)

ಯಾಕೆ ಹೀಗೆ ಚೇಂಜಿಂಗ್‌ ಟ್ರೆಂಡ್‌?
ಪದೇಪದೆ ಕೆಲಸ ಬದಲಾವಣೆ ಮಾಡುವುದಕ್ಕೆ ಇರುವ ಸರಳ ಕಾರಣಗಳು ಎರಡು: ಒಂದನೆಯದು, ಕಂಪನಿಯಿಂದ ಕಂಪನಿಗೆ ಹಾರಿದಾಗ ದೊಡ್ಡ ಮೊತ್ತದ ವೇತನ ಜಂಪ್‌ ದೊರೆಯುತ್ತದೆ, ಎರಡನೆಯದು ಒಂದೇ ಕಡೆ ಇದ್ದರೆ ಪ್ರಮೋಷನ್‌ಗಳು ಸುಲಭದಲ್ಲಿ ಸಿಗುವುದಿಲ್ಲ. ಬೇರೆ ಕಂಪನಿ ಸೇರಿದಾಗ ಸುಲಭದಲ್ಲಿ ಭಡ್ತಿಯೂ ಸಿಗ್ತದೆ.

ಆದರೆ, ಇದು ನಾವು ಮೇಲ್ನೋಟದಲ್ಲಿ ನೀಡಬಹುದಾದ ಕಾರಣ. ಇದನ್ನೇ ಸಾಮಾಜಿಕ-ಮಾನಸಿಕ-ವ್ಯಾವಹಾರಿಕ ನೆಲೆಯಲ್ಲಿ ನೋಡಿದಾಗ ಬೇರೆ ಬೇರೆ ಅರ್ಥಗಳು ಹೊಳೆಯುತ್ತವೆ. ಬ್ಯುಸಿನೆಸ್‌ ಕೋಚ್‌ ಆಗಿರುವ ರಾಜೀವ್‌ ತಲ್ರೇಜಾ ಅವರು ಈಗೀಗ ಕಂಪನಿಗಳಿಗೆ ಉದ್ಯೋಗಿಗಳನ್ನು ಹೆಚ್ಚು ಕಾಲ ರಿಟೇನ್‌ ಮಾಡಿಕೊಳ್ಳಲು ಯಾಕೆ ಸಾಧ್ಯವಾಗುತ್ತಿಲ್ಲ ಎನ್ನುವುದನ್ನು ಮೂರು ಪೀಳಿಗೆಗಳ ಉದಾಹರಣೆ ನೀಡುತ್ತಾ ಸೊಗಸಾಗಿ ವಿವರಿಸಿದ್ದಾರೆ.

ಮುಂದಿನದು ರಾಜೀವ್‌ ತಲ್ರೇಜಾ ಅವರ ಮಾತು…
ಉದ್ಯಮದ ಜಗತ್ತು ಮೂರು ತಲೆಮಾರುಗಳನ್ನು ನೋಡಿದೆ. ಒಂದು ಕೈಗಾರಿಕಾ ಕ್ರಾಂತಿಯ ಕಾಲ, ಎರಡು ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಕಾಲ, ಮೂರನೆಯದು ಈಗಿನ ಸೋಷಿಯಲ್‌ ರೆವೆಲ್ಯುಷನ್‌.

ರಾಜೀವ್‌ ತಹ್ರೇಜಾ

ಕೈಗಾರಿಕಾ ಕ್ರಾಂತಿಯ ಕಾಲ
ಕೈಗಾರಿಕಾ ಕ್ರಾಂತಿಯ ಕಾಲದಲ್ಲಿ ಜನರಿಗೆ ಉದ್ಯೋಗ ಎನ್ನುವುದು ಜೀವನ ಸಾಗಿಸುವ ಅನಿವಾರ್ಯ ದಾರಿಯಾಗಿತ್ತು. ರೋಟಿ, ಕಪಡಾ, ಮಕಾನ್‌ (ಅಶನ, ವಸನ, ವಸತಿ)ಗೆ ಅದೇ ಅನಿವಾರ್ಯವಾಗಿತ್ತು. ಆಗ ಜನ ಒಂದು ಕೆಲಸಕ್ಕೆ ಸೇರಿದರೆ ಅದನ್ನು ಬಿಟ್ಟು ಹೋಗುತ್ತಿರಲಿಲ್ಲ. ಕೆಲವೊಮ್ಮೆ ಬಾಸ್‌ ಎಷ್ಟೇ ಶೋಷಣೆ ಮಾಡಿದರೂ, ಕೊನೆಗೊಮ್ಮೆ ಹೊಡೆದರೂ ಕೆಲಸ ಬಿಡುತ್ತಿರಲಿಲ್ಲ. ಕೆಲಸದಿಂದ ತೆಗೆದರೂ ಹೋರಾಟ ಮಾಡಿಯೋ, ಕಾರ್ಮಿಕ ಸಂಸ್ಥೆಗಳಿಗೆ ದೂರು ನೀಡಿಯೋ ಮರಳಿ ಸಂಸ್ಥೆ ಸೇರಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಆಗ ಅವಕಾಶಗಳು ತುಂಬ ಕಡಿಮೆ ಇದ್ದವು.. ಹಾಗಾಗಿ Boss is always Right ಎಂದು ನಂಬಿ ಕೆಲಸ ಮಾಡುತ್ತಿದ್ದರು. ಅಂದ್ರೆ ಇವರೆಲ್ಲ ಈಗ ಕೆಲಸ ಮಾಡುತ್ತಿರುವ ಯುವಕರ ಅಜ್ಜಂದಿರು!

ಮಾಹಿತಿ ತಂತ್ರಜ್ಞಾನ ಕಾಲ
ದೊಡ್ಡ ದೊಡ್ಡ ಐಟಿ ಕಂಪನಿಗಳು ಬಂದಾಗ ಸಾಕಷ್ಟು ಜನರಿಗೆ ಉದ್ಯೋಗ ಸಿಕ್ಕಿತು. ಈ ಹಂತದಲ್ಲಿ ಕಂಪನಿಗಳನ್ನು ಸೇರಿದವರು ಕೇವಲ ರೋಟಿ, ಕಪಡಾ, ಮಕಾನ್‌ನ ಆಸೆಗೆ ಬಿದ್ದವರಲ್ಲ. ಅವರಿಗೆ ಗುಣಮಟ್ಟದ ಜೀವನದ ಕನಸಿತ್ತು. ಅಂದರೆ ಒಂದು ಮನೆ, ಅದರ ಇಎಂಐ, ಒಂದು ಕಾರು, ಅದರ ಸಾಲದ ಕಂತುಗಳನ್ನು ಕಟ್ಟುವುದು ಅವರ ಅಗತ್ಯವಾಗಿತ್ತು. ಅವರ ಅಗತ್ಯಗಳನ್ನು ಕಂಪನಿಗಳು ಪೂರೈಸಿದವು. ಸಂಬಳ ಕಡಿಮೆ ಆಯಿತು ಅನಿಸಿದವರು ಎಲ್ಲಿ ಜಾಸ್ತಿ ಸಿಗುತ್ತದೋ ಅಲ್ಲಿಗೆ ವಲಸೆ ಹೋಗಲು ಶುರು ಮಾಡಿದರು. ಅಂದರೆ ಮೊದಲು ಒಂದು ಕಂಪನಿಯಲ್ಲೇ ಕೆಲಸ ಮಾಡಬೇಕು ಎನ್ನುವ ಮೊದಲಿನ ನಂಬಿಕೆ, ನಿಷ್ಠೆ ಇಲ್ಲಿ ಕಡಿಮೆ ಆಯಿತು.

ಸಾಮಾಜಿಕ ಕ್ರಾಂತಿಯ ಕಾಲ
೨೦೦೮ರ ಬಳಿಕ ಮಾಹಿತಿ ತಂತ್ರಜ್ಞಾನ ಅನ್ನುವುದು ಕ್ರಾಂತಿಯೇನೂ ಅಲ್ಲ. ಈಗ ಕೋಡಿಂಗ್‌ ಬ್ರಹ್ಮ ವಿದ್ಯೆಯೇನೂ ಅಲ್ಲ. ಯೂಟ್ಯೂಬ್‌ನಲ್ಲಿ ನೋಡಿಯೂ ಕಲಿಯಬಹುದು. ನಾವೀಗ ಡಿಜಿಟಲ್‌ ಯುಗದಲ್ಲಿದ್ದೇವೆ. ಈಗ ಎಲ್ಲವೂ ಇಲ್ಲಿ ಸೋಷಿಯಲ್‌. ಈಗ ಯಾರೂ ಕೂಡಾ ಹೊಟ್ಟೆ, ಬಟ್ಟೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಒಳ್ಳೆಯ ಸ್ಟಾಂಡರ್ಡ್‌ ಬದುಕು, ಎಲ್ಲರ ಹಾಗೆ ಬದುಕಬೇಕು ಎಂಬ ಬಗ್ಗೆ ಕಾರ್ಮಿಕರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಮನೆಯಲ್ಲಿ ಟೀವಿ, ಫ್ರಿಜ್‌ನಂಥ ಕಂಫರ್ಟ್‌ಗಳು ಎಲ್ಲರ ಮನೆಯಲ್ಲೂ ಇವೆ. ಈಗಿನ ಜನರಿಗೆ ಬೇಕಾಗಿರುವುದು ಸೋಷಿಯಲ್‌ ರೆಕಗ್ನಿಷನ್‌ ಮತ್ತು ಗುಣಮಟ್ಟದ ಬದುಕು. ಒಳ್ಳೆ ಕ್ವಾಲಿಟಿಯ ಕಂಪನಿ, ಒಳ್ಳೆಯ ಕ್ವಾಲಿಟಿ ಆಫೀಸು, ಒಳ್ಳೆಯ ರೋಲ್‌, ಅವಕಾಶ, ಸವಾಲು ಮತ್ತು ಆ ಸವಾಲನ್ನು ಮೀರಿದಾಗ ಸಿಗುವ ಗೌರವ ಇದನ್ನು ಈಗಿನ ಜನರು ಕೇಳುತ್ತಿದ್ದಾರೆ. ಅದು ಸಿಗುವಲ್ಲಿಗೆ ಹಾರುತ್ತಲೇ ಇರುತ್ತಾರೆ.

ರಾಜೀವ್‌ ತಲ್ರೇಜಾ ಹೇಳುವ ಈ ಮಾತಿನಲ್ಲಿ ಸತ್ಯವಿದೆ. ಈಗ ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ಹಾರಿದಾಗ ಕನಿಷ್ಠ ೨೫-೫೦% ವೇತನ ಹೆಚ್ಚಾಗುತ್ತದೆ. ಡಬ್ಬಲ್‌ ಆಗೋ ಸಾಧ್ಯತೆಯೂ ಇದೆ. ಒಂದೇ ಕಂಪನಿಯಲ್ಲಿದ್ದರೆ ಸೀನಿಯರ್‌ಗಳನ್ನು ಮೀರುವುದು ಕಷ್ಟ. ಹೊಸ ಕಂಪನಿಯಲ್ಲಿ ಅದಕ್ಕೆ ವಿಫುಲ ಅವಕಾಶವಿದೆ. ಹೀಗಾಗಿ ಸಣ್ಣ ವಯಸ್ಸಿನಲ್ಲೇ ದೊಡ್ಡ ಹುದ್ದೆಗೆ ಹೋಗಬೇಕು ಎಂದರೆ ಬದಲಾವಣೆ ಒಂದೇ ಮಾರ್ಗ ಎಂದು ಅವರು ನಂಬಿದ್ದಾರೆ. ಹಾಗಾಗಿ ತಮ್ಮ ಬೆಳವಣಿಗೆಯ ಮೇಲೆ ಕಣ್ಣಿಟ್ಟಿರುವ ಯುವಜನ ಟಕ್‌ ಟಕ್‌ ಟಕ್‌ ಅಂತ ಓಡುತ್ತಲೇ ಇರುತ್ತಾರೆ.

ಇದನ್ನೂ ಓದಿ| ಏನೂ ಮಜಾ ಅನಿಸ್ತಿಲ್ಲ ಸರ್‌, ಕೆಲಸ ಬಿಡ್ತೀನಿ! ಹೀಗೂ ಒಬ್ಬ ರಿಸೈನ್‌ ಲೆಟರ್‌ ಬರ್ದಿದ್ದಾನೆ ನೋಡಿ
ಇದನ್ನೂ ಓದಿ| ʼಬೈ ಬೈ ಸರ್‌ʼ-ಮೂರೇ ಶಬ್ದದ ರಾಜೀನಾಮೆ ಪತ್ರ ನಮಗೆಲ್ಲ ಮಾದರಿಯೆಂದ ನೆಟ್ಟಿಗರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಡಿಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Job Alert: ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 12.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ನಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

Continue Reading

ಉದ್ಯೋಗ

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

PSI Exam: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

Exam date announced for recruitment of 4000 posts including PSI exam
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ – Karnataka Examination Authority) ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೇಮಕಾತಿ ಪರೀಕ್ಷೆಗಳ (PSI Exam) ದಿನಾಂಕಗಳನ್ನು ಪ್ರಕಟಿಸಿದೆ. ಇಲ್ಲಿ ಆಯಾ ಇಲಾಖೆಗಳ ಪರೀಕ್ಷೆಯನ್ನು ಯಾವ ದಿನಾಂಕದಲ್ಲಿ ಮಾಡಲಾಗುವುದು ಎಂಬ ಮಾಹಿತಿಯನ್ನು ನೀಡಲಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆಪ್ಟೆಂಬರ್ 1ರಂದು ಪರೀಕ್ಷೆ ನಡೆಯಲಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

ಪಿಎಸ್ಐ) ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ‌ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ತಿಳಿಸಿದೆ.

Exam date announced for recruitment of 4000 posts including PSI exam

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.
Continue Reading
Advertisement
Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್14 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ14 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ36 mins ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ39 mins ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ39 mins ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Viral Video
ವೈರಲ್ ನ್ಯೂಸ್54 mins ago

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

India Highest Paid Item Girl not Malaika Nora, Katrina, Sunny
ಸಿನಿಮಾ60 mins ago

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

Job Alert
ಉದ್ಯೋಗ1 hour ago

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

love jihad kasaragod 2
ಕ್ರೈಂ1 hour ago

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್2 hours ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌