Site icon Vistara News

IAS Coaching : ಹುಬ್ಬಳ್ಳಿಯ ಸಮುತ್ಕರ್ಷ ಐಎಎಸ್ ಅಕಾಡೆಮಿಯಿಂದ ಐಎಎಸ್‌, ಐಪಿಎಸ್‌ ಪರೀಕ್ಷೆಗೆ ತರಬೇತಿ

IAS Coaching

ಹುಬ್ಬಳ್ಳಿ: ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿಯ ಸಮುತ್ಕರ್ಷ ಐಎಎಸ್ ಅಕಾಡೆಮಿಯು ತರಬೇತಿಯನ್ನು (IAS Coaching ) ಆಯೋಜಿಸಿದೆ. ನಗರದ ವಿದ್ಯಾನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಬಿವಿಬಿ ಕ್ಯಾಂಪಸ್‌ನಲ್ಲಿ ಫೆಬ್ರವರಿಯಿಂದ ಈ ತರಗತಿಗಳು ನಡೆಯಲಿವೆ ಎಂದು ಸಮುತ್ಕರ್ಷ ಟ್ರಸ್ಟ್‌ನ ಕಾರ್ಯದರ್ಶಿ ಜಿತೇಂದ್ರ ನಾಯಕ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ದೆಹಲಿಯ ನುರಿತ ತರಬೇತಿದಾರರು ಮತ್ತು ಹಿರಿಯ ಅಧಿಕಾರಿಗಳು ವಿಶೇಷ ತರಗತಿಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳ ಗೊಂದಲವನ್ನು ದೂರ ಮಾಡಲು ಸಂವಾದ ಕಾರ್ಯಕ್ರಮ ಕೂಡ ಏರ್ಪಡಿಸಲಾಗುತ್ತದೆ. ಅತಿ ಕಡಿಮೆ ಖರ್ಚಿನಲ್ಲಿ ತರಬೇತಿ ನೀಡಲಿದ್ದು, ಅಧ್ಯಯನ ಕೇಂದ್ರವನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯ “ಸಂಕಲ್ಪʼʼ ಎಂಬ ಸಂಸ್ಥೆಯ ಸಹಯೋಗದೊಂದಿಗೆ ಕಳೆದ ಐದು ವರ್ಷಗಳಿಂದ ಟ್ರಸ್ಟ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿ ಕೆಲಸ ಮಾಡುತ್ತಿದ್ದೆ. ಈ ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವ ಅಭ್ಯರ್ಥಿಗಳು ಇದೇ ಫೆಬ್ರವರಿ 10 ರ ಒಳಗಾಗಿ ದೂರವಾಣಿ ಸಂಖ್ಯೆ 97391 13612 ಅನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಜಿತೇಂದ್ರ ನಾಯಕ ಕೋರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಸದಸ್ಯ ಅಚ್ಯುತ್ ಲಿಮಯೆ ಉಪಸ್ಥಿತರಿದ್ದರು.

ಇದನ್ನೂ ಓದಿ : LIC AAO Recruitment 2023 | ಎಲ್‌ಐಸಿಯಲ್ಲಿ 300 ಎಎಓ ನೇಮಕ; ಕನ್ನಡದಲ್ಲಿ ನಡೆಯಲ್ಲ ಪರೀಕ್ಷೆ!

Exit mobile version