ನವ ದೆಹಲಿ: ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಖಾಲಿ ಇರುವ ವಿವಿಧ 677 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (IB Recruitment 2023). ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟರ್ ಟ್ರಾನ್ಸ್‌ಪೋರ್ಟ್, ಎಂಟಿಎಸ್(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 13ರೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು. ಭಾರತಾದ್ಯಂತ ಹುದ್ದೆ ಖಾಲಿ ಇದೆ. ಅಧಿಕೃತ ವೆಬ್‌ಸೈಟ್ ವಿಳಾಸ mha.gov.in
ಹುದ್ದೆ ಮತ್ತು ಶೈಕ್ಷಣಿಕ ಅರ್ಹತೆಗಳ ವಿವರ
ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟರ್ ಟ್ರಾನ್ಸ್‌ಪೋರ್ಟ್ 362 ಮತ್ತು ಎಂಟಿಎಸ್ 315 ಹುದ್ದೆಗಳಿವೆ. ಅಧಿಚೂಚನೆ ಪ್ರಕಾರ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಏನು?
ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 27 ವರ್ಷ ಮತ್ತು ಎಂಟಿಎಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು 18-25 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಎಷ್ಟು?
ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ ಒಬಿಸಿ/ ಇಡಬ್ಲ್ಯುಎಸ್ ಪುರುಷ ಅಭ್ಯರ್ಥಿಗಳು 500 ರೂ. ಮತ್ತು ಪಿಡಬ್ಲ್ಯು ಡಿ ಅಭ್ಯರ್ಥಿಗಳು 450 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟರ್ ಟ್ರಾನ್ಸ್‌ಪೋರ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲರೂ 500 ರೂ. ಅರ್ಜಿ ಶುಲ್ಕ ಕಟ್ಟಬೇಕು. ಆನ್‌ಲೈನ್ ಮತ್ತು ಆಫ್‌ಲೈಫ್ ಎರಡರಲ್ಲೂ ಶುಲ್ಕ ಪಾವತಿಸುವ ಅವಕಾಶವಿದೆ.
ಆಯ್ಕೆ ವಿಧಾನ ಮತ್ತು ವೇತನ ವಿವರ
ಆನ್‌ಲೈನ್ ಪರೀಕ್ಷೆ, ಮೋಟರ್ ಮೆಕ್ಯಾನಿಸಮ್, ಡ್ರೈವಿಂಗ್ ಟೆಸ್ಟ್, ವಿವರಣಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟರ್ ಟ್ರಾನ್ಸ್‌ಪೋರ್ಟ್ ಹುದ್ದೆಗಳಿಗೆ 21,700-69,100 ರೂ. ಮಾಸಿಕ ವೇತನ ಇದೆ. ಎಂಟಿಎಸ್ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ 18,000-56,900 ರೂ. ವೇತನ ಸಿಗಲಿದೆ.
ಇದನ್ನೂ ಓದಿ: Job Alert: ಜಯದೇವ ಹೃದ್ರೋಗ ವಿಜ್ಞಾನ, ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸುವ ಮುನ್ನ ಕೇಳಿರುವ ಎಲ್ಲ ಅರ್ಹತೆ ಇರುವುದನ್ನು ಖಚಿತಪಡಿಸಿಕೊಳ್ಳಿ
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸಂವಹನಕ್ಕೆ ಅಗತ್ಯವಾದ, ಸರಿಯಾದ ಫೋನ್ ನಂಬರ್, ಇಮೇಲ್ ಐಡಿ ನಮೂದಿಸಿ. ಐಡಿ ಪ್ರೂಫ್, ವಯಸ್ಸಿನ ದಾಖಲಾತಿ, ಶೈಕ್ಷಣಿಕ ಅರ್ಹತೆಯ ದಾಖಲಾತಿ, ರೆಸ್ಯೂಮ್ ಇತ್ಯಾದಿ ರೆಡಿ ಮಾಡಿಟ್ಟುಕೊಳ್ಳಿ.
- ಸೆಕ್ಯುರಿಟಿ ಅಸಿಸ್ಟೆಂಟ್/ ಮೋಟರ್ ಟ್ರಾನ್ಸ್‌ಪೋರ್ಟ್, ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಅಗತ್ಯವಾದ ಎಲ್ಲ ಮಾಹಿತಿಗಳನ್ನು ತುಂಬಿ. ಡಾಕ್ಯುಮೆಂಟ್ನ ಸ್ಕ್ಯಾನ್ ಪ್ರತಿ, ನಿಮ್ಮ ಫೋಟೊ (ಅಗತ್ಯವಿದ್ದರೆ ಮಾತ್ರ) ಅಪ್ಲೋಡ್ ಮಾಡಿ
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
- ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿದ ಬಳಿಕ Intelligence Bureau Recruitment 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Submit ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ತೆಗೆದಿಡಿ.