Banking Jobs: ನೆನಪಿರಲಿ, 3049 ಬ್ಯಾಂಕ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಹಾಕಲು ಆ. 28 ಅಂತಿಮ ದಿನ - Vistara News

ಉದ್ಯೋಗ

Banking Jobs: ನೆನಪಿರಲಿ, 3049 ಬ್ಯಾಂಕ್ ಅಧಿಕಾರಿಗಳ ಹುದ್ದೆಗೆ ಅರ್ಜಿ ಹಾಕಲು ಆ. 28 ಅಂತಿಮ ದಿನ

Banking Jobs: ಪರಿಶಿಷ್ಟ ಜಾತಿಯವರಿಗೆ 462, ಪರಿಶಿಷ್ಟ ಪಂಗಡದವರಿಗೆ 234, ಹಿಂದುಳಿದ ವರ್ಗದವರಿಗೆ 829, ಸಾಮಾನ್ಯ ವರ್ಗದವರಿಗೆ 1,224 ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 300 ಹುದ್ದೆಗಳು ದೇಶಾದ್ಯಂತ ಮೀಸಲಾಗಿವೆ. ಅರ್ಜಿ ಸಲ್ಲಿಸಲು ಆಗಸ್ಟ್‌ 28 ಕೊನೆಯ ದಿನ.

VISTARANEWS.COM


on

IBPS Recruitment
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
R K Balachandra

:: ಆರ್. ಕೆ ಬಾಲಚಂದ್ರ

(ಲೇಖಕರು ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ʼವಿಸ್ತಾರ ಕಾಯಕ ಯೋಗಿʼ ಪ್ರಶಸ್ತಿ ಪುರಸ್ಕೃತರು)

ಬ್ಯಾಂಕ್‌ನಲ್ಲಿ ಅಧಿಕಾರಿಯಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ (Banking Jobs) ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 3,049 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಲು ತೀರ್ಮಾನಿಸಿದೆ. ಪರಿಶಿಷ್ಟ ಜಾತಿಯವರಿಗೆ 462, ಪರಿಶಿಷ್ಟ ಪಂಗಡದವರಿಗೆ 234, ಹಿಂದುಳಿದ ವರ್ಗದವರಿಗೆ 829, ಸಾಮಾನ್ಯ ವರ್ಗದವರಿಗೆ 1,224 ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 300 ಹುದ್ದೆಗಳು ದೇಶಾದ್ಯಂತ ಮೀಸಲಾಗಿವೆ. ರಾಜ್ಯದ 13 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 28 ಕೊನೆಯ ದಿನವಾಗಿದೆ.

ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?

Sr. No.BankSCSTOBCEWSURTotal
1BANK OF INDIA3316602293224
2CANARA BANK753713550203500
3CENTRAL BANK OF INDIA3001505402008102000
4PUNJAB NATIONAL BANK3015542081200
5PUNJAB&SIND BANK241640837125
Total46223482930012243049

ಕೆನರಾ ಬ್ಯಾಂಕ್ 500, ಪಂಜಾಬ್ ಎಂಡ್ ಸಿಂಧ ಬ್ಯಾಂಕ್ 125 , ಸೆಂಟ್ರಲ್ ಬ್ಯಾಂಕ್ ಆಪ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 224 ಪಂಜಾಬ್ ನ್ಯಾಷನಲ್ ಬ್ಯಾಂಕ್ 200 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಲಾಗಿದೆ. .

ಶೈಕ್ಷಣಿಕ ಅರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ. ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೆ, ಅವರು 21ನೇ ಆಗಸ್ಟ್‌, 2023 ಅಥವಾ ಅದಕ್ಕಿಂತ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ಪುರಾವೆಗಳನ್ನು ಒದಗಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಅರ್ಜಿ ಸಲ್ಲಿಕೆ ದಿನಾಂಕ: ಆಗಸ್ಟ್‌ 1ರಿಂದ ಆಗಸ್ಟ್‌ 28ರವರೆಗೆ (ಇದಕ್ಕೂ ಮೊದಲು ಆಗಸ್ಟ್‌ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಅದನ್ನು ಆಗಸ್ಟ್‌ 28ಕ್ಕೆ ವಿಸ್ತರಿಸಲಾಗಿದೆ.)

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕಿನ ಆದ್ಯತೆಯ ಆದೇಶವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ಬ್ಯಾಂಕ್ ಬದಲಾವಣೆಗೆ/ಸ್ಥಳ ಬದಲಾವಣೆಗೆ ಯಾವುದೇ ವಿನಂತಿಯನ್ನು ನಂತರದ ದಿನಗಳಲ್ಲಿ ಪರಿಗಣಿಸಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್‌ಮೆಂಟ್‌ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹ ದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್ ವತಿಯಿಂದ ಎಸ್.ಸಿ, ಎಸ್‌.ಟಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು ಮಾಜಿ ಸೈನಿಕರು ವಿಕಲಚೇತನ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಆನ್‌ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕಾಗುತ್ತದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ನಿಗದಿಪಡಿಸಿದ ಕೇಂದ್ರಗಳಲ್ಲಿಯೇ ಉಚಿತ ಪರೀಕ್ಷಾ ತರಬೇತಿಯನ್ನೂ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳು ಭರಿಸಬೇಕಾಗುತ್ತದೆ.

ಪರೀಕ್ಷಾ ಪ್ರಕ್ರಿಯೆ

ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ – ಅಕ್ಟೋಬರ್ 2023

ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ – ನವೆಂಬರ್, 2023

ಮೂರನೇ ಹಂತ: ಸಂದರ್ಶನ ಜನವರಿ/ಫೆಬ್ರವರಿ,2024

ವಯೋಮಿತಿ

01.08.2023 ಕ್ಕೆ, 20 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 20 ವರ್ಷದಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂದರೆ ಅಭ್ಯರ್ಥಿಗಳು 02.08.1993 ಕ್ಕಿಂತ ಮುಂಚಿತವಾಗಿ ಮತ್ತು 01.08.2003 ಕ್ಕಿಂತ ನಂತರ ಜನಿಸಿರಬಾರದು. (ಎರಡೂ ದಿನಾಂಕಗಳು ಒಳಗೊಂಡಂತೆ) ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು. ಮತ್ತು ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿ ಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ, ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದ ಅಭ್ಯರ್ಥಿಗಳು, CIBIL ಸ್ಥಿತಿಯನ್ನು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಸೂಚನೆ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯವಿಲ್ಲ.

ಶುಲ್ಕಪಾವತಿ

ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್‌ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಶುಲ್ಕ

850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ [ಜಿ ಎಸ್ ಟಿ ಸೇರಿ] (ಎಸ್‌ಸಿ/ಎಸ್‌ಟಿ/PWBD/ EXSM ಅಭ್ಯರ್ಥಿಗಳಿಗೆ 175 ರೂ. [ಜಿ ಎಸ್ ಟಿ ಸೇರಿ] ಆನ್‌ಲೈನ್‌ ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non creamy layer) ಷರತ್ತಿನೊಂದಿಗೆ OBC ಪ್ರಮಾಣಪತ್ರವನ್ನು ಹೊಂದಿರಬೇಕು.

ಈ ಬಾರಿಯ ಬದಲಾವಣೆಗಳೇನು?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಕೆಲವು ಬದಲಾವಣೆಗಳು ಸಾಮಾನ್ಯ. ಹಾಗೆಯೇ ಈ ಬಾರಿಯ ಬದಲಾವಣೆಗಳು ಕೆಳಗಿನಂತಿವೆ:
ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ನೀವು ತರುವ ಐಡಿ ಪ್ರೂಫ್‌ನ ಸಂಖ್ಯೆ ನೀಡುವುದು ಕಡ್ಡಾಯ ಹಾಗೂ ಅದು ನೀವು ಅರ್ಜಿ ಸಲ್ಲಿಸಿದ ಹೆಸರಿನೊಂದಿಗೆ ಹೊಂದಾಣಿಕೆಯಾಗಿರಬೇಕು. ಈ ಬಾರಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಸಂಗ್ರಹಿಸ ಲಾಗುವುದಿಲ್ಲ. ಬದಲಾಗಿ ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿ ಕೊಳ್ಳುವ ಅಗತ್ಯವಿದೆ. ಮೇನ್ಸ್ ಪರೀಕ್ಷೆಗೆ ಅರ್ಹಗೊಂಡ ಅಭ್ಯರ್ಥಿಗಳು ಮೇನ್ಸ್ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನು ಕೂಡ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಬಹುದು. ಕನಿಷ್ಠ 8 ಭಾವಚಿತ್ರವನ್ನು (ಅಭ್ಯರ್ಥಿಯು ಕಾಲ್-ಲೆಟರ್‌ನಲ್ಲಿ ಅಂಟಿಸಿದಂತೆಯೇ) ಹಾಗೂ ಪ್ರಿಲಿಮ್ಸ್ ಹಾಗೂ ಮೇನ್ಸ್ ನ ಕರೆ ಪತ್ರದ ಜೆರಾಕ್ಸ್ ಪ್ರತಿಯನ್ನು ಅಥವಾ ಹೆಚ್ಚುವರಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ. ಕೊನೆಯಲ್ಲಿ ಅದರ ಪ್ರತಿಯನ್ನು ಬ್ಯಾಂಕ್ ಗಳಿಗೆ ಸೇರುವಾಗ ನೀಡಬೇಕು ಎಂಬುದನ್ನು ಮರೆಯಬೇಡಿ.
ನಂತರದ ದಿನಗಳಲ್ಲಿ ವೆಬ್‌ಸೈಟ್‌ನಲ್ಲಿ ಸಿಗುವುದಿಲ್ಲ.
ಅಭ್ಯರ್ಥಿಗಳು ಒಂದು ಹೆಚ್ಚುವರಿ ಛಾಯಾಚಿತ್ರವನ್ನು (ಅಭ್ಯರ್ಥಿಯು ಕಾಲ್ ಲೆಟರ್‌ನಲ್ಲಿ ಅಂಟಿಸಿದಂತೆಯೇ) ಜತೆಗೆ ಕರೆ ಪತ್ರ ಮತ್ತು ಇತರ ಅಗತ್ಯ ದಾಖಲೆಗಳೊಂದಿಗೆ “ಮಾಹಿತಿ ಕೈಪಿಡಿ” ಮತ್ತು ಕರೆ ಪತ್ರದಲ್ಲಿ ಸೂಚಿಸಿದ ಮಾಹಿತಿಯಂತೆ ತೆಗೆದುಕೊಂಡು ಹೋಗಬೇಕು.

ಇದನ್ನೂ ಓದಿ: Banking Jobs: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅಧಿಕಾರಿಗಳ ಹುದ್ದೆ; ನೀವಿನ್ನೂ ಅರ್ಜಿ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ನೋಂದಣಿ

ಎ.ಅಭ್ಯರ್ಥಿಗಳ ನೋಂದಣಿ ಯನ್ನು ಫೋಟೋ ಕ್ಯಾಪ್ಚರ್ ಮೂಲಕ ಮಾಡಲಾಗುವುದು.

ಬಿ.ಅಭ್ಯರ್ಥಿಯನ್ನು ಪರೀಕ್ಷಾ ಕೇಂದ್ರದಲ್ಲಿ ನಿಲ್ಲಿಸಿ ಛಾಯಾಚಿತ್ರ ತೆಗೆಯಲಾಗುವುದು.

ಸಿ.ಅಭ್ಯರ್ಥಿಗಳಿಗೆ ಸೀಟ್ ನಂಬರ್ ನೀಡಲಾಗುತ್ತದೆ.

ಡಿ.ರಫ್ ಶೀಟ್‌ಗಳನ್ನು ಪ್ರತಿ ಕ್ಯಾಂಡಿಡೇಟ್ ಡೆಸ್ಕ್‌ನಲ್ಲಿ ಇರಿಸಲಾಗಿರುತ್ತದೆ. ಪರೀಕ್ಷೆಯ ಕೊನೆಯಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿದಂತೆ ನಿಗದಿತ ಡ್ರಾಪ್ ಬಾಕ್ಸ್‌ನಲ್ಲಿ ರಫ್ ಶೀಟ್ ಗಳನ್ನು ಹಿಂತಿರುಗಿಸಬೇಕು. ಮುಖ್ಯ ಪರೀಕ್ಷೆಗೆ ಸ್ಟ್ಯಾಂಪ್ ಮಾಡಿದ ಫೋಟೊ ಕಾಪಿಯನ್ನು ತರದೇ ಇರುವ ಅಭ್ಯರ್ಥಿಗಳನ್ನು ಪರೀಕ್ಷೆಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ.

ನೇಮಕ ಹೇಗೆ?

ಮೊದಲ ಹಂತದಲ್ಲಿ ಪೂರ್ವ ಭಾವಿ ಪರೀಕ್ಷೆ (ಪ್ರಿಲಿಮ್ಸ್) ನಡೆಯಲಿದೆ.
ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ ದಾವಣಗೆರೆ, ದಾರವಾಡ ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷಾ ಕೇಂದ್ರಗಳಿರಲಿವೆ. ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು, (ಪ್ರತಿ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ಕೇಳಲಾಗುತ್ತದೆ. (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿಯಾಗಿರುತ್ತದೆ) ಇದರಲ್ಲಿ ಇಂಗ್ಲೀಷ್ ಲಾಂಗ್ವೇಜಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ. (ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ) ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು, ಹುಬ್ಬಳ್ಳಿ-ದಾರವಾಡ ಮತ್ತು ಮಂಗಳೂರಿನಲ್ಲಿ ಮಾತ್ರ ನಡೆಯಲಿದ್ದು, ಪರೀಕ್ಷೆಗಳು ಎರಡು ಹಂತಗಳಲ್ಲಿ ನಡೆಯಲಿದೆ. ನಿಗದಿತ ದಿನದಂದು ಆನ್ ಲೈನ್‌ನಲ್ಲಿಯೇ ಎರಡೂ ಲಿಖಿತ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯು ಮೂರು ಗಂಟೆ ಗಳ ಕಾಲ ನಡೆಯಲಿದ್ದು, 155 ಪ್ರಶ್ನೆಗಳನ್ನು 200 ಅಂಕಗಳಿಗೆ ಕೇಳಲಾಗುತ್ತದೆ.

ಯಾವ ಪ್ರಶ್ನೆಗೆ ಎಷ್ಟು ಅವಧಿ?
I. Reasoning & Computer Aptitude 45 ಪ್ರಶ್ನೆ 60 ಅಂಕಗಳು 60 ನಿಮಿಷಗಳು,
II.General/ Economy/ Banking Awareness 40 ಪ್ರಶ್ನೆ 40 ಅಂಕಗಳು 35 ನಿಮಿಷಗಳು,
III. English Language 35 ಪ್ರಶ್ನೆ 40 ಅಂಕಗಳು 40 ನಿಮಿಷಗಳು,
VI.Data Analysis & Interpretation 35 ಪ್ರಶ್ನೆ 60 ಅಂಕಗಳು 45 ನಿಮಿಷಗಳು

ಹೀಗೆ ಒಟ್ಟಾರೆ 155 ಪ್ರಶ್ನೆಗಳಿಗೆ 200 ಅಂಕಗಳು ನಿಗದಿಯಾಗಿದ್ದು ಹಾಗೂ 180 ನಿಮಿಷದ ಸಮಯ ನಿಗದಿಪಡಿಸಲಾಗಿದೆ. ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಯನ್ನು ಬರೆಯಲು ಪ್ರಯತ್ನಿಸದೆ ಹಾಗೆಯೆ ಬಿಟ್ಟರೆ, ಅಂದರೆ ಯಾವುದೇ ಉತ್ತರವನ್ನು ಗುರುತಿಸಲಾಗಿಲ್ಲದಿದ್ದರೆ ಅಂತಹ‌ ಅಭ್ಯರ್ಥಿಗಳಿಗೆ, ಆ ಪ್ರಶ್ನೆಗೆ ಯಾವುದೇ ರೀತಿಯ ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ದಂಡವಿರುವುದಿಲ್ಲ.

ಮೇನ್ಸ್ ಮುಗಿಯುತ್ತಿದ್ದಂತೆಯೇ ಡಿಸ್ಸ್ಕ್ರಿಟಿವ್ ಟೆಸ್ಟ್ ಇಂಗ್ಲಿಷ್ ಭಾಷೆಗೆ (Letter Writing & Essay- with two questions)ಸಂಬಂಧಿಸಿದಂತೆ 25 ಅಂಕಗಳಿಗೆ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರವನ್ನು ಬರೆಯಬೇಕು.‌ ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ ವೈಶಿಷ್ಟ್ಯಗಳನ್ನು ಗುರುತಿಸುವುದು ಇದರ ಕಾರ್ಯವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯತೆ ಯನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ.

ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು ಮತ್ತು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಎಂದು ಪರಿಗಣಿಸಬೇಕಾದ ಕನಿಷ್ಠ ಒಟ್ಟು ಅಂಕಗಳನ್ನು ಗಳಿಸಿರಬೇಕು.ನಕನಿಷ್ಠ ಅಂಕಗಳು ಖಾಲಿ ಹುದ್ದೆಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ. ಮತ್ತು ಅವುಗಳ ಮೇಲೆ ಕಟ್-ಆಫ್‌ಗಳನ್ನು ನಿರ್ಧರಿಸಲಾಗುವುದು ಮತ್ತು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಸಂದರ್ಶನಕ್ಕಾಗಿ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ಪ್ರಕ್ರಿಯೆ, ಪೂರ್ಣಗೊಳಿಸುವ ಮೊದಲು
ಆನ್‌ಲೈನ್ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಅಭ್ಯರ್ಥಿಗಳೊಂದಿಗೆ ಹಂಚಿಕೊಳ್ಳಲಾಗುವುದಿಲ್ಲ.

ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ’ (‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. EWS ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು 2022-23ರ ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಆಯ್ಕೆ ಪಟ್ಟಿ

ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು 40% (35% SC/ST/OBC/PWBD ಅಭ್ಯರ್ಥಿಗಳಿಗೆ). ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಕ್ರಮವಾಗಿ 80:20 ಅನುಪಾತದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ, ನೇಮಕಾತಿ ಮಾಡಿಕೊಳ್ಳ ಲಾಗುತ್ತದೆ.

ಅರ್ಜಿ ಸಲ್ಲಿಕೆ, ನೋಂದಣಿಗೆ ಬಳಸಬೇಕಾದ ಲಿಂಕ್:

Website: www.ibps.in

https://ibpsonline.ibps.in/crppo13jun23/

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert)

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading
Advertisement
mumbai hoarding collapse
ಪ್ರಮುಖ ಸುದ್ದಿ32 mins ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ57 mins ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ1 hour ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ1 hour ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ2 hours ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Narendra Modi
ದೇಶ3 hours ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ8 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ8 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ13 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna jailed gets Bail
ಕ್ರೈಂ13 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ14 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ14 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ14 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ21 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌