Site icon Vistara News

IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 600 ಹುದ್ದೆ; ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ

Application invited for 600 Assistant Manager vacancies

ಐಡಿಬಿಐ ಬ್ಯಾಂಕ್‌ ನೇಮಕ

ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್‌ 600 ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳಿಗೆ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು (IDBI SO Recruitment 2023), ಅರ್ಜಿ ಸಲ್ಲಿಸಲು ನಾಳೆ ಅಂದರೆ ಮಾ.12 ಕೊನೆಯ ದಿನವಾಗಿದೆ.

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಬಹುದಾಗಿದೆ. ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಈ ಕೊನೆಯ ಅವಕಾಶ ಬಳಸಿಕೊಳ್ಳಬಹುದಾಗಿದೆ. ಮೊದಲಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವೆಂದು ಪ್ರಕಟಿಸಲಾಗಿತ್ತಾದರೂ, ನಂತರ ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ. 12ರ ವರೆಗೆ ವಿಸ್ತರಿಸಲಾಗಿತ್ತು.

ಈ 600 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 190, ಎಸ್‌ಟಿ ಅಭ್ಯರ್ಥಿಗಳಿಗೆ 17 ಒಬಿಸಿ ಅಭ್ಯರ್ಥಿಗಳಿಗೆ 89, ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 60 ಹುದ್ದೆಗಳನ್ನು ಹಾಗೂ ಉಳಿದ 244 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ ಏನು?

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆಯ ಜತೆಗೆ ಬ್ಯಾಂಕಿಂಗ್‌ ಅಥವಾ ವಿಮಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಖಾಸಗಿ ವಿತ್ತೀಯ ಸಂಸ್ಥೆಗಳಲ್ಲಿ, ಸಹಕಾರಿ ಬ್ಯಾಂಕುಗಳಲ್ಲಿ, ಬ್ಯಾಂಕೇತರ ವಿತ್ತೀಯ ಸಂಸ್ಥೆಗಳಲ್ಲಿ, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ, ವಿಮಾ ಸಂಸ್ಥೆಗಳಲ್ಲಿ ಅನುಭವ ಹೊಂದಿದವರನ್ನು ಪರಿಗಣಿಸಲಾಗುತ್ತದೆ.

ಅನುಭವ ಇರುವ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ಎಷ್ಟು?

ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯೋಮಿತಿ 30 ವರ್ಷ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ. ವಯೋಮಿತಿಯನ್ನು ದಿನಾಂಕ: 01-01-2023 ಕ್ಕೆ ಲೆಕ್ಕಹಾಕಲಾಗುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-03-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-03-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಏಪ್ರಿಲ್‌ 16, 2023
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ:
https://www.idbibank.in/

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಒಂದು ಸಾವಿರ ರೂ. (ಇಂಟಿಮೇಷನ್‌ ಚಾರ್ಜ್‌ ಸೇರಿ) ಅರ್ಜಿಶುಲ್ಕ ಪಾವತಿಸಬೇಕಾಗಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಇಂಟಿಮೇಷನ್‌ ಶುಲ್ಕ ಮಾತ್ರ ಪಾವತಿಸಿದರೆ ಸಾಕು. ಅರ್ಜಿ ಶುಲ್ಕ ಪಾವತಿಸಲೂ ಫೆ.28 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ

ವೇತನ ಎಷ್ಟಿರುತ್ತದೆ?

ಐಡಿಬಿಐ ಬ್ಯಾಂಕ್‌ನಲ್ಲಿನ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಯೂ ಗ್ರೇಡ್‌ “ಎʼʼ ಹುದ್ದೆಯಾಗಿದ್ದು, ಮಾಸಿಕ ಬೇಸಿಕ್‌ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36000-1490(7)-46430-1740(2)–49910–1990(7)-63840(17years)

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ನೇಮಕ ಹೇಗೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ ಟೆಸ್ಟ್‌ (OT) ನಡೆಸಲಾಗುತ್ತದೆ. ಏಪ್ರಿಲ್‌ನಲ್ಲಿ ಈ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.

ಆಲ್‌ಲೈನ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿಯೂ ಆಯ್ಕೆಯಾದವರನ್ನು (Final Score = 3/4 of Online Test Score +1/4 of Interview Score) ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?

ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್‌ ಟೆಸ್ಟ್‌ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇದನ್ನೂ ಓದಿ : DCC Bank Recruitment 2023 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ 36 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Exit mobile version