ಉದ್ಯೋಗ
IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್ ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ
ದೇಶದ ಪ್ರಮುಖ ಅಭಿವೃದ್ಧಿ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ (IDBI Recruitment 2023) ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಭಾರತ ಸರ್ಕಾರದ ಒಡೆತನಕ್ಕೆ ಸೇರಿದ, ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಎಕ್ಸಿಕ್ಯೂಟಿವ್‌ಗಳ ನೇಮಕಕ್ಕೆ (IDBI Recruitment 2023) ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಜೂನ್ 07) ಕೊನೆಯ ದಿನವಾಗಿರುತ್ತದೆ.
ಒಟ್ಟು 1,036 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 160, ಎಸ್‌ಟಿ ಅಭ್ಯರ್ಥಿಗಳಿಗೆ 67 ಒಬಿಸಿ ಅಭ್ಯರ್ಥಿಗಳಿಗೆ 255, ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 103 ಹುದ್ದೆಗಳನ್ನು ಹಾಗೂ ಉಳಿದ 451 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ.
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ.
ವಿದ್ಯಾರ್ಹತೆ ಏನು?
ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಮಾಡಿದವರನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕಾದದು ಕಡ್ಡಾಯ.
ವಯೋಮಿತಿ ಎಷ್ಟು?
ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ. ಗರಿಷ್ಠ ವಯೋಮಿತಿ 25 ವರ್ಷ. ವಯೋಮಿತಿಯನ್ನು ಮೇ 1, 2023ಕಕ್ಕೆ ಲೆಕ್ಕಹಾಕಲಾಗುತ್ತದೆ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-06-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಜುಲೈ 2, 2023
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://www.idbibank.in/
ವೇತನ ಎಷ್ಟಿರುತ್ತದೆ?
ಐಡಿಬಿಐ ಬ್ಯಾಂಕ್‌ನಲ್ಲಿನ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಮೂರು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷ ಮಾಸಿಕ ರೂ.29,000 ವೇತನ ನೀಡಲಾಗುತ್ತದೆ. ಎರಡನೇ ವರ್ಷ ಮಾಸಿಕ 31,000ರೂ. ವೇತನ ನೀಡಿದರೆ ಮೂರನೇ ವರ್ಷ ಮಾಸಿ ರೂ.34,000 ವೇತನ ನೀಡಲಾಗುತ್ತದೆ.
ಮೂರು ವರ್ಷ ಪೂರ್ಣಗೊಳಿಸಿದವರು ಗ್ರೇಡ್ ʻಎʼಯ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಈ ಹುದ್ದೆಯ ಮಾಸಿಕ ಬೇಸಿಕ್ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36,000-1,490(7)-46,430-1,740(2)–49,910–1,990(7)-63,840(17years)
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ನೇಮಕ ಹೇಗೆ?
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್ ಟೆಸ್ಟ್ (OT) ನಡೆಸಲಾಗುತ್ತದೆ. ಜುಲೈನಲ್ಲಿ ಈ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.
ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.
ಆಲ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ
ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?
ಎಕ್ಸಿಕ್ಯೂಟಿವ್ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್ ಟೆಸ್ಟ್ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.
ಇದನ್ನೂ ಓದಿ : DRDO Recruitment 2023 : ಎಂಜಿನಿಯರಿಂಗ್ ಮುಗಿಯಿತಾ? ಡಿಆರ್‌ಡಿಒನಲ್ಲಿ ಸೈಂಟಿಸ್ಟ್ ಆಗಿ!
ಉದ್ಯೋಗ
CPCB Recruitment: ಮಾಲಿನ್ಯ ನಿಯಂತ್ರಣ ಬೋರ್ಡ್‌ನಲ್ಲಿದೆ 74 ಹುದ್ದೆ; ಇಂದೇ ಅರ್ಜಿ ಸಲ್ಲಿಸಿ
CPCB Recruitment: ಮಾಲಿನ್ಯ ನಿಯಂತ್ರಣ ಬೋರ್ಡ್‌ನಲ್ಲಿ 74 ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದು.
ನವ ದೆಹಲಿ: ಸೆಂಟ್ರಲ್ ಪೊಲ್ಯುಷನ್ ಕಂಟ್ರೋಲ್ ಬೋರ್ಡ್ ಖಾಲಿ ಇರುವ ವಿವಿಧ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CPCB Recruitment 2023). ಕನ್ಸಲ್ಟಂಟ್ ಎ, ಕನ್ಸಲ್ಟಂಟ್ ಬಿ ಮತ್ತು ಕನ್ಸಲ್ಟಂಟ್ ಸಿ ಹುದ್ದೆಗಳು ಖಾಲಿ ಇದ್ದು ಆಸಕ್ತರು ಆನ್‌ಲೈನ್ ಮೂಲಕ ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಇದಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ cpcb.nic.in ಸಂಪರ್ಕಿಸಿ.
ಹುದ್ದೆಗಳ ವಿವರ
ಕನ್ಸಲ್ಟಂಟ್ ಎ-19, ಕನ್ಸಲ್ಟಂಟ್ ಬಿ-52 ಮತ್ತು ಕನ್ಸಲ್ಟಂಟ್ ಸಿ-3 ಹುದ್ದೆಗಳಿವೆ. ಅಭ್ಯರ್ಥಿಗಳು ಎನ್ವಿಯೋರ್ನಮೆಂಟಲ್ ಎಂಜಿನಿಯರಿಂಗ್/ ಟೆಕ್ನಾಲಜಿ/ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎನ್ವಿಯೋರ್ನಮೆಂಟಲ್ ಎಂಜಿನಿಯರಿಂಗ್/ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು. ಜತೆಗೆ ಎಂ.ಎಸ್. ಆಫೀಸ್ ಬಗ್ಗೆ ಉತ್ತಮ ಜ್ಞಾನ ಹೊಂದಿರಬೇಕು. ಪರಿಸರ ಮಾಲಿನ್ಯ ನಿರ್ವಹಣೆ ಕ್ಷೇತ್ರದಲ್ಲಿ 3ರಿಂದ 15 ವರ್ಷಗಳ ಅನುಭವ ಹೊಂದಿರಬೇಕು. ಗರಿಷ್ಠ 65 ವರ್ಷದೊಳಗಿನ ಅಭ್ಯೃಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆಯಾದ ಅಭ್ಯರ್ಥಿಗಳಿಗೆ 60,000 to 1,00,000 ರೂ. ವೇತನ ದೊರೆಯಲಿದೆ. ದಿಲ್ಲಿಯಲ್ಲಿ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಆರಂಭದಲ್ಲಿ ವೆಬ್‌ಸೈಟ್ http://www.cpcbncaprecruitment.co.in ಮೇಲೆ ಕ್ಲಿಕ್ ಮಾಡಿ
- ಲಾಗಿನ್ ಆಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಿ
- ನೀವು ಅರ್ಜಿ ಸಲ್ಲಿಸಲು ಇಚ್ಛಿಸುವ ಹುದ್ದೆಯನ್ನು ಆಯ್ಕೆ ಮಾಡಿ
- ಅದರಲ್ಲಿ ಕೇಳಿರುವ ಮಾಹಿತಿಗಳನ್ನು ಒದಗಿಸಿ ಫಾರ್ಮ್ ತುಂಬಿ
- ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದಿಡಿ.
ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಕಾಂಟ್ರಾಕ್ಟ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸದ್ಯಕ್ಕೆ ಒಂದು ವರ್ಷದ ಅವಧಿಗೆ ನೇಮಿಸಿಕೊಂಡು ಬಳಿಕ ಅಭ್ಯರ್ಥಿಯ ಕೆಲಸ ಆಧಾರದಲ್ಲಿ ಉದ್ಯೋಗ ಮುಂದುವರಿಸುವ ಸಾಧ್ಯತೆ ಇದೆ.
ಉದ್ಯೋಗ
ESICK Recruitment: ಡೆಂಟಲ್ ಮೆಕ್ಯಾನಿಕ್, ರೇಡಿಯೋಗ್ರಾಫರ್ ಸೇರಿ 57 ಹುದ್ದೆ; ಇಂದೇ ಅರ್ಜಿ ಸಲ್ಲಿಸಿ
ESICK Recruitment: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 57 ಹುದ್ದೆಗಳಿವೆ.
ಬೆಂಗಳೂರು: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (Employees State Insurance Corporation Karnataka-ESIC recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 57 ಜೂನಿಯರ್ ರೇಡಿಯೋಗ್ರಾಫರ್, ಡೆಂಟಲ್ ಮೆಕ್ಯಾನಿಕ್ ಹುದ್ದೆಗಳು ಖಾಲಿ ಇದೆ. ಕರ್ನಾಟಕದಲ್ಲೇ ಉದ್ಯೋಗ ಮಾಡಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅಕ್ಟೋಬರ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
- ಡೆಂಟಲ್ ಮೆಕ್ಯಾನಿಕ್- 9
- ECG ಟೆಕ್ನಿಷಿಯನ್- 8
- ಜೂನಿಯರ್ ರೇಡಿಯೋಗ್ರಾಫರ್- 11
- ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್-13
- ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್-1ಫಾರ್ಮಾಸಿಸ್ಟ್-5
- ರೇಡಿಯೋಗ್ರಾಫರ್- 5
- ರೇಡಿಯೋಗ್ರಾಫರ್- 5
ಶೈಕ್ಷಣಿಕ ಅರ್ಹತೆ
- ಡೆಂಟಲ್ ಮೆಕ್ಯಾನಿಕ್- 12ನೇ ತರಗತಿ, ಡಿಪ್ಲೊಮಾ
- ECG ಟೆಕ್ನಿಷಿಯನ್- 12ನೇ ತರಗತಿ, ಡಿಪ್ಲೊಮಾ
- ಜೂನಿಯರ್ ರೇಡಿಯೋಗ್ರಾಫರ್- 12ನೇ ತರಗತಿ, ಡಿಪ್ಲೊಮಾ
- ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್-12ನೇ ತರಗತಿ, ಡಿಪ್ಲೊಮಾ
- ರೇಡಿಯೋಗ್ರಾಫರ್- 12ನೇ ತರಗತಿ, ಡಿಪ್ಲೊಮಾ
- ಮೆಡಿಕಲ್ ರೆಕಾರ್ಡ್ ಅಸಿಸ್ಟೆಂಟ್- 12ನೇ ತರಗತಿ
- ಫಾರ್ಮಾಸಿಸ್ಟ್- 12ನೇ ತರಗತಿ, ಡಿಪ್ಲೊಮಾ, ಫಾರ್ಮಸಿಯಲ್ಲಿ ಪದವಿ
- ಸೋಷಿಯಲ್ ಗೈಡ್/ ಸೋಷಿಯಲ್ ವರ್ಕರ್- ಡಿಗ್ರಿ, ಸೋಷಿಯಲ್ ವರ್ಕ್ನಲ್ಲಿ ಡಿಪ್ಲೊಮಾ
ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ
ಲಿಖಿತ ಪರೀಕ್ಷೆ, ಟೈಪಿಂಗ್/ ಡೇಟಾ ಎಂಟ್ರಿ ಟೆಸ್ಟ್, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯುಬಿಡಿ/ ಮಹಿಳಾ/ ಮಾಜಿ ಸೈನಿಕ & ಡಿಪಾರ್ಟ್ಮೆಂಟಲ್ ಅಭ್ಯರ್ಥಿಗಳು 250 ರೂ. ಪಾವತಿಸಿದರೆ ಸಾಕು. ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಸಬೇಕು.
ಇದನ್ನೂ ಓದಿ: NHB Recruitment 2023: ನ್ಯಾಷನಲ್ ಹೌಸಿಂಗ್ ಬೋರ್ಡ್‌ನಲ್ಲಿ 43 ಹುದ್ದೆ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗ
BEML Group C Recruitment: ಐಟಿಐ ಪಾಸಾದವರಿಗೆ ಸಿಹಿ ಸುದ್ದಿ; ಬಿಇಎಂಎಲ್‌ನಲ್ಲಿ 119 ಹುದ್ದೆಗೆ ಅರ್ಜಿ ಸಲ್ಲಿಸಿ
BEML Group C Recruitment: Bharat Earth Movers Limited ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಹುದ್ದೆಗಳಿದ್ದು, ಅಕ್ಟೋಬರ್ 18ರೊಳಗೆ ಅರ್ಜಿ ಸಲ್ಲಿಸಬಹುದು.
ಬೆಂಗಳೂರು: ಕರ್ನಾಟಕ/ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. Bharat Earth Movers Limited (BEML) ಖಾಲಿ ಇರುವ 119 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 18ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ https://www.bemlindia.in/ ಸಂದರ್ಶಿಸಿ.
ಶೈಕ್ಷಣಿಕ ಅರ್ಹತೆ
- ಡಿಪ್ಲೋಮಾ ಟ್ರೈನೀಸ್ (ಮೆಕ್ಯಾನಿಕಲ್)52 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
- ಡಿಪ್ಲೋಮಾ ಟ್ರೈನೀಸ್ (ಎಲೆಕ್ಟ್ರಿಕಲ್) 27 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
- ಡಿಪ್ಲೋಮಾ ಟ್ರೈನೀಸ್ (ಸಿವಿಲ್) 7 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
- ಐಟಿಐ ಟ್ರೈನೀಸ್(ಟರ್ನರ್) 16 ಹುದ್ದೆ-ವಿದ್ಯಾರ್ಹತೆ: ಐಟಿಐ
- ಐಟಿಐ ಟ್ರೈನೀಸ್ (ಮೆಕ್ಯಾನಿಸ್ಟ್ ) 16 ಹುದ್ದೆ-ವಿದ್ಯಾರ್ಹತೆ: ಐಟಿಐ
- ಸ್ಟಾಫ್ ನರ್ಸ್ 01 ಹುದ್ದೆ-ವಿದ್ಯಾರ್ಹತೆ: ಬಿ.ಎಸ್‌ಸಿ. (ನರ್ಸಿಂಗ್)
ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಜನರಲ್/ ಇಡಬ್ಲ್ಯುಎಸ್/ ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲುಡಿಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆನ್‌ಲೈನ್ ಮೂಲಕವೇ ಸುಲ್ಕ ಪಾವತಿಸಬೇಕು.
ವಯೋಮಿತಿ
ಡಿಪ್ಲೋಮಾ ಟ್ರೈನೀಸ್ (ಮೆಕ್ಯಾನಿಕಲ್), ಡಿಪ್ಲೋಮಾ ಟ್ರೈನೀಸ್ (ಎಲೆಕ್ಟ್ರಿಕಲ್), ಡಿಪ್ಲೋಮಾ ಟ್ರೈನೀಸ್ (ಸಿವಿಲ್), ಐಟಿಐ ಟ್ರೈನೀಸ್(ಟರ್ನರ್), ಐಟಿಐ ಟ್ರೈನೀಸ್(ಮೆಕ್ಯಾನಿಸ್ಟ್ ) ಹುದ್ದೆಗಳಿಗೆ ಸರ್ಜಿ ಸಲ್ಲಿಸುವ ಸಾಮಾನ್ಯ ವಿಭಾಗದವರ ವಯೋಮಿತಿ ಗರಿಷ್ಠ 29 ವರ್ಷ. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಒಬಿಸಿ 32 ವರ್ಷ ಮತ್ತು ಎಸ್/ ಎಸ್‌ಟಿ ವಿಭಾಗದವರಿಗೆ 34 ವರ್ಷ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?
ಉದ್ಯೋಗ
7th Pay Commission : 7ನೇ ವೇತನ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ; ಮಹತ್ವದ ಚರ್ಚೆ
7th Pay Commission : ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು (Revision of pay scales of state government employees) ಮತ್ತು ನೂತನ ವೇತನ ರಚನೆ (New pay structure) ಸೇರಿದಂತೆ ಇನ್ನಿತರ ಅಂಶಗಳಿಗಾಗಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಈ ಆಯೋಗವು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲವು ಸಂಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ.
ಬೆಂಗಳೂರು: 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ (7th Pay Commission Chairman Sudhakar Rao) ಹಾಗೂ ಸದಸ್ಯರ ನಿಯೋಗವು ಶುಕ್ರವಾರ (ಸೆ. 29) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಈ ವೇಳೆ ಕೆಲವು ಮಹತ್ವದ ಸಂಗತಿಗಳ ಬಗ್ಗೆ ಸಿಎಂ ಗಮನ ಸೆಳೆಯಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ. ಎಂ.ಟಿ. ರೇಜು ಈ ವೇಳೆ ಭಾಗಿಯಾಗಿದ್ದರು.
ಇದನ್ನೂ ಓದಿ: Cauvery water dispute : ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವೆನೆಂದ ಸಿಎಂ; ನೀರು ಬಿಡದಿದ್ದರೆ ಸರ್ಕಾರವೇ ವಜಾ ಆಗಬಹುದು!
ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು (Revision of pay scales of state government employees) ಮತ್ತು ನೂತನ ವೇತನ ರಚನೆ (New pay structure) ಸೇರಿದಂತೆ ಇನ್ನಿತರ ಅಂಶಗಳಿಗಾಗಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಈ ಆಯೋಗವು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲವು ಸಂಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ.
2022ರಲ್ಲಿ ರಚನೆಯಾಗಿದ್ದ ಆಯೋಗ
2022ರ ನವೆಂಬರ್ 19ರಂದು ಆಗಿನ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಅವರು 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿ ಆದೇಶಿಸಿದ್ದರು. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ ಆಯೋಗವನ್ನು ಅವರು ರಚಿಸಿದ್ದರು.
ಈ 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷ. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಕಾರ್ಯದರ್ಶಿಗಳಾಗಿ ನೇಮಕವಾಗಿದ್ದರು. ಈ ಹಿಂದಿನ ಆದೇಶದನ್ವಯ ಆಯೋಗವು 19/5/2023ಕ್ಕೆ ವರದಿ ನೀಡಬೇಕಿತ್ತು. ಆದರೆ, ಬಳಿಕ ವಿಧಾನಸಭಾ ಚುನಾವಣೆ ಬಂದಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೇ 19ಕ್ಕೆ ವರದಿ ನೀಡಬೇಕಿದ್ದ ಕಾಲಾವಧಿಯನ್ನು ಮತ್ತೆ 6 ತಿಂಗಳ ಅವಧಿಗೆ ವಿಸ್ತರಣೆ ಮಾಡಿ ಆದೇಶಿಸಿತ್ತು.
7ನೇ ವೇತನ ಆಯೋಗದ ಕಾರ್ಯಚಟುವಟಿಕೆ ಏನು?
ಈ 7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ ಎಐಸಿಟಿಇ/ ಐಸಿಎಆರ್/ ಎನ್‌ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ), ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲ ಕ್ರೋಢೀಕೃತ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ನೂತನ ವೇತನ ರಚನೆಯನ್ನು ರೂಪಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಕಾರ್ಯಚಟುವಟಿಕೆಯನ್ನು ಸೂಚಿಸಿತ್ತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವೃಂದದ ಹುದ್ದೆಗಳನ್ನು ಸಮೀಕರಿಸಿ ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲನೆ ಮಾಡಬೇಕು. ರಾಜ್ಯ ಸರ್ಕಾರವು ಅಳವಡಿಸಿಕೊಳ್ಳಬಹುದಾದ ತುಟ್ಟಿಭತ್ಯೆಯ ಸೂತ್ರವನ್ನು ನಿರ್ಧರಿಸಿ ಪರಿಶೀಲಿಸಬೇಕು. ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆಗಳು ಇತ್ಯಾದಿ ಮತ್ತು ರಜೆ ಪ್ರಯಾಣ ರಿಯಾಯಿತಿ ಹಾಗೂ ವೈದ್ಯಕೀಯ ಮರುಪಾವತಿ ಸೌಲಭ್ಯಗಳನ್ನೊಳಗೊಂಡಂತಹ ವಿವಿಧ ಭತ್ಯೆಗಳನ್ನು ಪರಿಶೀಲಿಸುವುದರ ಜತೆಗೆ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ಬದಲಾವಣೆಗಳನ್ನು 7ನೇ ವೇತನ ಆಯೋಗವು ಸಲಹೆ ಮಾಡಬೇಕಿದೆ.
ಪರಿಶೀಲನೆ ಮಾಡಬೇಕಾದ ಇತರೆ ಅಂಶಗಳೇನು?
ಆಯೋಗವು ಶಿಫಾರಸು ಮಾಡುವಲ್ಲಿ, ರಾಜ್ಯ ಸಂಪನ್ಮೂಲಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾಗಿ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ಕ್ರಮಬದ್ಧ ಕಾರ್ಯಗಳು, ಋಣಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಹಾಗೂ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ, 2002ರ ಅಧ್ಯಾದೇಶದ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿಕೊಳ್ಳುವುದು ಹಾಗೂ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸುವುದು. ರಾಜ್ಯ ಸರ್ಕಾರದಿಂದ ವಹಿಸಲ್ಪಡುವ/ ಸೂಚಿಸಬಹುದಾದ ಇತರೆ ವಿಷಯಗಳನ್ನು ಈ ಆಯೋಗವು ಪರಿಶೀಲಿಸಬೇಕಿದೆ.
ಆಯೋಗವು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವುದು ಹಾಗೂ ಪರಿಶೀಲನಾರ್ಹ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿರುತ್ತದೆ. ಸರ್ಕಾರದ ಎಲ್ಲ ಇಲಾಖೆಗಳು ಆಯೋಗವು ಅಪೇಕ್ಷಿಸುವ ಎಲ್ಲ ಮಾಹಿತಿ, ದಾಖಲೆ ಹಾಗೂ ಇನ್ನಿತರೆ ಸಹಕಾರವನ್ನು ಒದಗಿಸಬೇಕು. ಎಲ್ಲ ಸೇವಾ ಸಂಘಟನೆಗಳು, ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು ಮತ್ತು ಇತರೆ ಸಂಬಂಧಪಟ್ಟವರು ಆಯೋಗಕ್ಕೆ ಅವುಗಳ ಸಂಪೂರ್ಣ ಸಹಕಾರ ಮತ್ತು ನೆರವನ್ನು ನೀಡುತ್ತವೆ ಎಂದು ಸರ್ಕಾರವು ಭಾವಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ವೇತನ ಹೆಚ್ಚಳದ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಶೇ 38 ರಿಂದ 40ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹೇಳಿದ್ದಾರೆ.
ಇದನ್ನೂ ಓದಿ: Cauvery Water Dispute : ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಆಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್
ನವೆಂಬರ್ ಅಂತ್ಯಕ್ಕೆ ವರದಿ?
7ನೇ ವೇತನ ಆಯೋಗವು ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಮತ್ತೆ ಆರು ತಿಂಗಳು ಕಾಲ ಮಿತಿಯನ್ನು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ನವೆಂಬರ್ ಅಂತ್ಯಕ್ಕೆ ವರದಿ ನೀಡಬಹುದಾಗಿದೆ. ಸಮಿತಿಯ ಸದಸ್ಯರನ್ನು ಭೇಟಿ ಮಾಡಿ ಶೇ. 38ರಿಂದ 40ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
-
ದೇಶ21 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ16 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್23 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ22 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್24 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ11 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕಿರುತೆರೆ6 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ಕ್ರೈಂ13 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?