ಭಾರತೀಯ ಅಂಚೆ ಇಲಾಖೆಯು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಬೃಹತ್ ನೇಮಕ ಪ್ರಕ್ರಿಯೆಯನ್ನು ಆರಂಭಿಸಿದೆ (India Post GDS Recruitment 2023). ದೇಶದಾದ್ಯಂತ ಖಾಲಿ ಇರುವ 40,889 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕದಲ್ಲಿ (karnataka postal circle recruitment 2023) 3,036 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 16 ಕೊನೆಯ ದಿನವಾಗಿರುತ್ತದೆ.
ಗ್ರಾಮೀಣ ಡಾಕ್ ಸೇವಕ್ ಹುದ್ದೆಯನ್ನು ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್, ಡಾಕ್ ಸೇವಕ್ ಎಂದೂ ಕರೆಯಲಾಗುತ್ತದೆ. ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆಂದು ನೇಮಕಗೊಂಡರೆ 12,000 ರಿಂದ 29,380 ರೂ. ವೇತನ ನೀಡಲಾಗುತ್ತದೆ. ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್, ಡಾಕ್ ಸೇವಕ್ (ABPM/Dak Sevak) ಹುದ್ದೆಗಳಿಗಾದರೆ 10,000 ರಿಂದ 24,470 ರೂ.ಗಳವರೆಗೆ ವೇತನ ನಿಗಿದಿಯಾಗಿರುತ್ತದೆ.
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ (10 ನೇ ತರಗತಿಯಲ್ಲಿ) ಉತ್ತೀರ್ಣರಾಗಿರಬೇಕು ಮತ್ತು ರಾಜ್ಯದ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಜತೆಗೆ ಕಂಪ್ಯೂಟರ್ ಕಾರ್ಯನಿರ್ವಹಿಸಲು ತಿಳಿದಿರಬೇಕು. ಸೈಕಲ್ ಹೊಡೆಯಲು ಬರುತ್ತಿರಬೇಕು.
ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16.02.2023
ಅರ್ಜಿಯಲ್ಲಿ ತಪ್ಪುಗಳಾಗಿದ್ದರೆ ತಿದ್ದಲು ಅವಕಾಶ: 17.02.2023 to 19.02.2023
ಸಹಾಯವಾಣಿ ಸಂಖ್ಯೆ: 080-22850002
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://indiapostgdsonline.cept.gov.in/
ನೇಮಕ ಹೇಗೆ?
ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿಯಲ್ಲಿ (10ನೇ ತರಗತಿ) ಪಡೆದ ಅಂಕಗಳ ಮೆರಿಟ್ ಆಧಾರದಲ್ಲಿ ನೇಮಕ ನಡೆಯಲಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗಲೇ ತಾವು ಪಡೆದ ಅಂಕಗಳ ಮಾಹಿತಿಯನ್ನು ಒದಗಿಸಬೇಕಿರುತ್ತದೆ. ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ನೇಮಕ ಮಾಡಲಾಗುತ್ತದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿದೆ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಇದನ್ನೂ ಓದಿ : LIC Recruitment 2023 : ಎಲ್‌ಐಸಿಯಲ್ಲಿ 9,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ