Indian Army Recruitment 2023 Apply for 194 SSC technical course details in kannadaIndian Army Recruitment 2023 : ಎಂಜಿನಿಯರಿಂಗ್‌ ಪದವೀಧರರಿಗೆ ಸೇನೆಯಲ್ಲಿ ಆಫೀಸರ್‌ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ! - Vistara News

ಉದ್ಯೋಗ

Indian Army Recruitment 2023 : ಎಂಜಿನಿಯರಿಂಗ್‌ ಪದವೀಧರರಿಗೆ ಸೇನೆಯಲ್ಲಿ ಆಫೀಸರ್‌ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ!

ಭಾರತೀಯ ಸೇನೆಯು ಅಧಿಕಾರಿ ಹುದ್ದೆಗಳಿಗೆ ಎಂಜಿನಿಯರಿಂಗ್‌ ಪದವೀಧರರನ್ನು ನೇಮಕ (Indian Army Recruitment 2023) ಮಾಡಿಕೊಳ್ಳುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Indian Army Recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸೇನೆ ಸೇರಿ ದೇಶ ಸೇವೆ ಮಾಡಬೇಕೆಂದು ಕನಸು ಕಾಣುತ್ತಿರುವ ಎಂಜಿನಿಯರಿಂಗ್‌ ಪದವೀಧರರರಿಗೆ ಅಪೂರ್ವ ಅವಕಾಶವೊಂದು ಇಲ್ಲಿದೆ. ಭಾರತೀಯ ಸೇನೆಯು (Indian Army) ಶಾರ್ಟ್‌ ಸರ್ವೀಸ್‌ ಕಮೀಷನ್‌ ಅಡಿ ತಾಂತ್ರಿಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು (Indian Army Recruitment 2023), ಎಂಜಿನಿಯರಿಂಗ್‌ ಪದವೀಧರರಾಗಿರುವ ಅವಿವಾಹಿತ ಪುರಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಮತ್ತು ಕರ್ತವ್ಯದಲ್ಲಿರುವಾಗಲೇ ಮಡಿದ ಸೇನಾ ಸಿಬ್ಬಂದಿ ವಿಧವೆಯರಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳನ್ನು ಮೊದಲಿಗೆ ಚೆನ್ನೈನಲ್ಲಿರುವ ಆಫೀಸರ್‌ ಟ್ರೈನಿಂಗ್‌ ಅಕಾಡೆಮಿಯಲ್ಲಿ (ಒಟಿಎ) ನಡೆಯಲಿರುವ ಕೋರ್ಸ್‌ಗೆ ಆಯ್ಕೆ ಮಾಡಲಾಗುತ್ತದೆ ನಂತರ ಸೇನೆಯ ಅಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. SSC(Tech)-62 Men (175 ಅಭ್ಯರ್ಥಿಗಳಿಗೆ ಅವಕಾಶ) ಮತ್ತು SSCW(Tech)-33 Women (19 ಅಭ್ಯರ್ಥಿಗಳಿಗೆ ಅವಕಾಶ) ಎಂಬ ಎರಡು ಕೋರ್ಸ್‌ಗಳಿವೆ.

ಯಾವ ಎಂಜಿನಿಯರಿಂಗ್‌ ಪದವೀಧರರಿಗೆ ಎಷ್ಟು ಹುದ್ದೆ?

ಸಿವಿಲ್‌ ಎಂಜಿನಿಯರಿಂಗ್‌ ಪದವೀಧರರಿಗೆ 51 ಹುದ್ದೆಗಳಿವೆ. Building Construction & Technology ಮತ್ತು Architecture ಎಂಜಿನಿಯರಿಂಗ್‌ ಪದವಿ ಪಡೆದವರೂ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಕಂಪ್ಯೂಟರ್‌ ಸೈನ್ಸ್‌ ಪದವೀಧರರಿಗೆ 48 ಹುದ್ದೆಗಳಿವೆ. ಕಂಪ್ಯೂಟರ್‌ ಟೆಕ್ನಾಲಜಿ, ಎಂಎಸ್ಸಿ ಕಂಪ್ಯೂಟರ್‌, ಇನ್‌ಫಾರ್ಮೇಷನ್‌ ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-07-2023
ಸಹಾಯವಾಣಿ ಸಂಖ್ಯೆ: 011-26173215 and 011-26175473
ವೆಬ್‌ಸೈಟ್‌ ವಿಳಾಸ: https://joinindianarmy.nic.in/

ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಪದವೀಧರರಿಗೆ 19 ಹುದ್ದೆಗಳಿವೆ. ಎಲೆಕ್ಟ್ರಿಕಲ್‌, ಎಲೆಕ್ಟ್ರಿಕಲ್‌ & ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಾನಿಕ್ಸ್‌&ಇನ್‌ಸ್ಟ್ರುಮೆಂಟೇಷನ್‌, ಇನ್‌ಸ್ಟ್ರುಮೆಂಟೇಷನ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ ಪದವೀಧರರಿಗೆ 29 ಹುದ್ದೆಗಳಿವೆ. ಎಲೆಕ್ಟ್ರಾನಿಕ್ಸ್‌, ಎಲೆಕ್ಟ್ರಾನಿಕ್ಸ್‌ & ಟೆಲಿಕಾಮ್‌, ಎಲೆಕ್ಟ್ರಾನಿಕ್ಸ್‌ &ಕಮ್ಯುನಿಕೇಷನ್‌, ಟೆಲಿಕಮ್ಯುನಿಕೇಷನ್‌, ಮೈಕ್ರೋ ಎಲೆಕ್ಟ್ರಾನಿಕ್ಸ್‌ & ಮೈಕ್ರೋವೇವ್‌, ಸ್ಯಾಟಲೈಟ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ಪದವೀಧರರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವೀಧರರಿಗೆ 38 ಹುದ್ದೆಗಳಿವೆ. ಮೆಕ್ಯಾನಿಕಲ್‌, ಪ್ರೊಡಕ್ಷನ್‌, ಆಟೋಮೊಬೈಲ್‌, ಇಂಡಸ್ಟ್ರಿಯಲ್‌, ವರ್ಕ್‌ಶಾಪ್‌ ಟೆಕ್ನಾಲಜಿ, ಏರೋನಾಟಿಕಲ್‌ ಏರೋಸ್ಪೇಸ್‌ ಎಂಜಿನಿಯರಿಂಗ್‌ ಪದವೀಧರರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.
Misc Engg Streams ಎಂಜಿನಿಯರಿಂಗ್‌ ಪದವೀಧರರಿಗೆ 9 ಹುದ್ದೆಗಳಿವೆ. ಪ್ಲಾಸ್ಟಿಕ್‌ ಟೆಕ್‌, ರಿಮೋಟ್‌ ಸೆನ್ಸಿಂಗ್‌, ಬ್ಲಾಸ್ಟಿಕ್ಸ್‌, ಬಯೋ ಮೆಡಿಕಲ್‌ ಎಂಜಿನಿಯರಿಂಗ್‌, ಫುಡ್‌ ಟೆಕ್‌, ಅಗ್ರಿಕಲ್ಚರ್‌, ಲೇಸರ್‌ ಟೆಕ್‌, ಬಯೋಟೆಕ್‌, ಕೆಮಿಕಲ್‌ ಎಂಜಿನಿಯರಿಂಗ್, ನ್ಯೂಕ್ಲಿಯರ್‌ ಟೆಕ್ನಾಲಜಿ ಎಂಜಿನಿಯರಿಂಗ್‌ ಪದವೀಧರರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ವಯೋಮಿತಿ ಎಷ್ಟು?

20 ರಿಂದ 27ವರ್ಷದೊಳಗಿನ ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. (ಏಪ್ರಿಲ್‌ 02, 1997ರಿಂದ ಏಪ್ರಿಲ್‌ 01, 2004 ರೊಳಗೆ ಜನಿಸಿರಬೇಕು). ವಿಧವೆಯರಿಗೆ ಗರಿಷ್ಠ ವಯೋಮಿತಿ 35 ವರ್ಷ. ವಯೋಮಿತಿಯನ್ನು ಏಪ್ರಿಲ್‌1, 2024 ಕ್ಕೆ ಲೆಕ್ಕಹಾಕಲಾಗುತ್ತದೆ.

ನೇಮಕ ಹೇಗೆ?

ಎಂಜಿನಿಯರಿಂಗ್‌ ಪದವಿಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಪ್ರಕ್ರಿಯೆಗೆ ಆಹ್ವಾನಿಸಲಾಗುತ್ತದೆ. ಸಂದರ್ಶನ ಸೇರಿದಂತೆ ಎರಡು ಹಂತದ ನೇಮಕ ಪ್ರಕ್ರಿಯೆ ನಡೆಯಲಿದ್ದು, ಬೆಂಗಳೂರಿನಲ್ಲಿಯೇ ನೇಮಕ ಪ್ರಕ್ರಿಯೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಸ್‌ಗೆ ಆಯ್ಕೆ ಮಾಡಲಾಗುತ್ತದೆ. ಕೋರ್ಸ್‌ನ ಅವಧಿಯು 49 ವಾರಗಳಾಗಿವೆ. ಈ ಕೋರ್ಸ್‌ಗಳು 2024 ರ ಏಪ್ರಿಲ್‌ ತಿಂಗಳಲ್ಲಿ ಆರಂಭವಾಗಲಿವೆ.

ಸಂಪೂರ್ಣ ಮಾಹಿತಿಗೆ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ವೇತನ ಎಷ್ಟಿರುತ್ತದೆ?

Indian Army officer pay chart

ಮತ್ತು ಇತರ ಭತ್ಯೆಗಳು.

ಇದನ್ನೂ ಓದಿ : PDO Recruitment 2023 : ಪಿಡಿಒ ನೇಮಕಕ್ಕೆ ಮುಂದಾದ ಸರ್ಕಾರ; ಅರ್ಜಿ ಸಲ್ಲಿಸಲು ಈಗಲೇ ರೆಡಿಯಾಗಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading
Advertisement
pm narendra modi nomination varanasi
ಪ್ರಮುಖ ಸುದ್ದಿ31 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು39 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್41 mins ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್51 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ52 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Narendra Modi
ದೇಶ1 hour ago

Narendra Modi Live: ವಾರಾಣಸಿಯಲ್ಲಿ ನಮೋ ನಾಮಿನೇಶನ್‌; ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿ ಮೋದಿ

bomb hoax bengaluru
ಕ್ರೈಂ1 hour ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್2 hours ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ2 hours ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ2 hours ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು39 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ18 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌