Site icon Vistara News

ISRO Recruitment 2023 : ಇಸ್ರೊದಲ್ಲಿ ವಿಜ್ಞಾನಿಯಾಗಬೇಕೇ? ಈಗ ಒದಗಿ ಬಂದಿದೆ ಅವಕಾಶ!

ISRO Recruitment 2023 ISRO Recruitment 2023 for Scientist/ Engineer 'SC'

#image_title

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯ ಸಾಧನೆ ಮಾಡುತ್ತಿರುವ ನಮ್ಮ ದೇಶದ ಹೆಮ್ಮೆಯ ʻಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆʼ (ಇಸ್ರೊ) 303 ಸೈಂಟಿಸ್ಟ್‌/ಎಂಜಿನಿಯರ್‌-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದೆ.

ಮುಖ್ಯವಾಗಿ ಉಪಗ್ರಹಗಳ ನಿರ್ಮಾಣ, ಉಪಗ್ರಹಗಳ ಉಡಾವಣೆ, ಬಾಹ್ಯಾಕಾಶದಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿರುವ ಇಸ್ರೊ, ಗ್ರೂಪ್‌ ʻಎʼಗೆ ಸೇರಿದ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಮತ್ತು ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಇ/ಬಿಟೆಕ್‌ ಮಾಡಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

1. ಸೈಂಟಿಸ್ಟ್‌/ಎಂಜಿನಿರ್‌-ಎಸ್‌ಸಿ (ಎಲೆಕ್ಟ್ರಾನಿಕ್ಸ್‌) – 90 ಹುದ್ದೆ
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

2. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಮೆಕ್ಯಾನಿಕಲ್‌)- 160 ಹುದ್ದೆ
ವಿದ್ಯಾರ್ಹತೆ: ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

3. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 47 ಹುದ್ದೆ
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

4. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಎಲೆಕ್ಟ್ರಾನಿಕ್ಸ್‌)- 2 ಹುದ್ದೆ (Autonomous Body)
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

5. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 01 ಹುದ್ದೆ (Autonomous Body)
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
ಮಾಹಿತಿ ಪಡೆಯಲು ಇ-ಮೇಲ್‌ ವಿಳಾಸ: rmt-icrb@isro.gov.in
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: www.isro.gov.in

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ವಯೋಮಿತಿ ಎಷ್ಟು?

ಈ ಎಲ್ಲ ಹುದ್ದೆಗಳಿಗೂ ಗರಿಷ್ಠ ವಯೋಮಿತಿ 28 ವರ್ಷ. ವಯೋಮಿತಿಯನ್ನು ದಿನಾಂಕ 14-06-2023ಕಕ್ಕೆ ಲೆಕ್ಕ ಹಾಕಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ.

ಅರ್ಜಿ ಶುಲ್ಕ ಎಷ್ಟು?

ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಒಂದು ವೇಳೆ ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಎಸ್‌ಬಿಐ ಶಾಖೆಗಳ ಮೂಲಕವೂ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಅಭ್ಯರ್ಥಿಗಳು ಈ ಮೇಲಿನ ಯಾವುದಾದರೂ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆದರೆ ಒಂದೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ನೇಮಕ ಹೇಗೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಿರುತ್ತದೆ. ಪರೀಕ್ಷೆಯ ಕುರಿತು ಅಭ್ಯರ್ಥಿಯ ಇ-ಮೇಲ್‌ ವಿಳಾಸಕ್ಕೆ ಮಾಹಿತಿ ನೀಡಲಾಗುತ್ತದೆ.

ಅಬ್ಜೆಕ್ಟೀವ್‌ ಮಾದರಿಯಲ್ಲಿ ಲಿಖಿತ ಪರೀಕ್ಷೆಯು ನಡೆಯಲಿದ್ದು, ಪ್ರಶ್ನೆ ಪತ್ರಿಕೆಯು ಎರಡು ಭಾಗಗಳನ್ನು ಒಳಗೊಂಡಿರಲಿದೆ. 120 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.

ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ

Exit mobile version