Site icon Vistara News

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

Job Alert

Job Alert

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 7) (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Exit mobile version