ಬೆಂಗಳೂರು: ಅಂಚೆ ಇಲಾಖೆಯಲ್ಲಿ (post office) ಕೆಲಸ ಮಾಡಬಯಸುವವರಿಗೆ (Job Alert) ಒಂದು ಸಿಹಿ ಸುದ್ದಿ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್ (Grameen Doc Sevak) ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು (Indian post department) ಅರ್ಜಿಯನ್ನು ಆಹ್ವಾನಿಸಿದೆ. ಯಾವುದೇ ಲಿಖಿತ ಪರೀಕ್ಷೆ, ಸಂದರ್ಶನ ನಿಯಮವಿಲ್ಲದೆ ಕೇವಲ ಎಸ್ ಎಸ್ ಎಲ್ ಸಿ ಯಲ್ಲಿ (SSLC) ಪಡೆದ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಭಾರತೀಯ ಅಂಚೆ ಇಲಾಖೆಯು ಕಳೆದ ವರ್ಷ ಜನವರಿಯಲ್ಲಿ ಸುಮಾರು 40,000 ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲಾಗಿತ್ತು. ಈ ವರ್ಷವೂ ಸಾವಿರಾರು ಹುದ್ದೆಗಳ ಅಧಿಸೂಚನೆ ಇನ್ನೂ ಬಿಡುಗಡೆಯಾಗಬೇಕಿದೆ. ಹೊಸ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹುದ್ದೆ ವಿವರ
ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಸುಮಾರು 50,000 ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿದ್ದು, ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂಬಳ ಆರಂಭದಲ್ಲಿ 10,000 ರೂ.ಗಳಿಂದ 12,000 ರೂ.ಗಳವರೆಗೆ ಇರುತ್ತದೆ. ಬಡ್ತಿಗಳ ಮೂಲಕ ಉನ್ನತ ಸ್ಥಾನಗಳನ್ನ ತಲುಪಬಹುದು. ಭಾರತೀಯ ಅಂಚೆ ಪಾವತಿ ಬ್ಯಾಂಕ್ ಸೇವೆಗಳ ಮೂಲಕ ಪ್ರೋತ್ಸಾಹಕಗಳನ್ನ ಪಡೆಯಬಹುದು.
ಅರ್ಹತೆ ಏನು?
ಎಸ್ ಎಸ್ ಎಲ್ ಸಿ ಅಂಕಗಳ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 40 ವರ್ಷದೊಳಗಿನವರಿಗಿರಬೇಕು. ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ.
ಇದನ್ನೂ ಓದಿ: Job Alert: ಗುಡ್‌ನ್ಯೂಸ್; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ
ಆಯ್ಕೆ ಪ್ರಕ್ರಿಯೆ ಹೇಗೆ?
10ನೇ ತರಗತಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ತಮ್ಮ ಪ್ರದೇಶದ ಸುತ್ತಮುತ್ತಲಿನ ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುವ ಅವಕಾಶಕ್ಕೆ ಆಯ್ಕೆ ಮಾಡಬಹುದು. ಅರ್ಹತೆಯ ಆಧಾರದ ಮೇಲೆ ಹತ್ತಿರದ ಅಂಚೆ ಕಚೇರಿಗಳಲ್ಲಿ ಪೋಸ್ಟಿಂಗ್ ನೀಡಲಾಗುವುದು. ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳು ಮತ್ತು ಮೀಸಲಾತಿ ನಿಯಮದ ಆಧಾರದ ಮೇಲೆ ಹಂತ ಹಂತವಾಗಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಅಂಚೆ ಇಲಾಖೆಯ ವೆಬ್ ಸೈಟ್ https://indiapostgdsonline.gov.in/ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಆಯ್ಕೆಯಾಗುವ ಅಭ್ಯರ್ಥಿಗಳ ವಿವರವನ್ನೂ ಈ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.