Site icon Vistara News

Job Alert: ಗುಡ್‌ನ್ಯೂಸ್; 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಸಿ

vidhana soudha

vidhana soudha

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನಾಂಕ ಏಪ್ರಿಲ್‌ 3 (Job Alert).

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ವಿದ್ಯಾರ್ಹತೆ ಮತ್ತು ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ: http://kea.kar.nic.in

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನು ಗಮನಿಸಿ

ಇದನ್ನೂ ಓದಿ: Job Alert: ಡಿಪ್ಲೋಮಾ ಪದವೀಧರರಿಗೆ ಗುಡ್‌ನ್ಯೂಸ್‌; ರೈಲ್ವೇ ನೇಮಕಾತಿ ಮಂಡಳಿಯಿಂದ 9,000 ಹುದ್ದೆ ಭರ್ತಿ

Exit mobile version