ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ (Motor Vehicle Inspector) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್ 1 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್ ಹೊಂದಿರಬೇಕು.
ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಕಡ್ಡಾಯ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್ ನಂಬರ್: 080-30574957 / 30574901ಕ್ಕೆ ಕರೆ ಮಾಡಿ.
ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೈದರಾಬಾದ್-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ / ರಿಕ್ವೆಸ್ಟ್ ನಂಬರ್ ತೆಗೆದಿಡಿ.
ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ