ಬೆಂಗಳೂರು: ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (Rajiv Gandhi University of Health Sciences) ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 26ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನ ಏಪ್ರಿಲ್ 25 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್ ಬಿ), ಸಹಾಯಕ ಎಂಜಿನಿಯರ್ (ಸಿವಿಲ್) (ಗ್ರೂಪ್ ಬಿ), ಸಹಾಯಕ ಗ್ರಂಥಪಾಲಕ (ಗ್ರೂಪ್ ಸಿ), ಸಹಾಯಕ (ಗ್ರೂಪ್ ಸಿ) ಮತ್ತು ಕಿರಿಯ ಸಹಾಯಕ (ಗ್ರೂಪ್ ಸಿ) ಹುದ್ದೆಗಳಿವೆ. ಬಿ.ಇ. ಮತ್ತು ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಮತ್ತು ಇತರ ಪ್ರವರ್ಗದ ಅಭ್ಯರ್ಥಿಗಳು 750 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು 500 ರೂ. ಪಾವತಿಸಬೇಕು.
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಗಮನಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಪ್ರತಿಯೊಂದು ಪ್ರಶ್ನೆಗೂ 4 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಗಳು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡಬೇಕು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕಗಳನ್ನು ಕಳೆಯಲಾಗುವುದು. ಹೀಗಾಗಿ ಎಚ್ಚರಿಕೆಯಿಂದ ಉತ್ತರಿಸಬೇಕು. ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಇರಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬೇಕು. ನೆನಪಿಡಿ, ಪರೀಕ್ಷೆಗೆ ಹಾಜರಾಗಲು ಹಾಲ್ ಟಿಕೆಟ್ ಜತೆಗೆ ಅಭ್ಯರ್ಥಿಗಳು ಮೂಲ ಗುರುತಿನ ಚೀಟಿ (ಪ್ಯಾನ್ ಕಾರ್ಡ್ / ಲೈಸನ್ಸ್ / ಆಧಾರ್ ಕಾರ್ಡ್ / ಪಾಸ್‌ಪೋರ್ಟ್ / ವೋಟರ್ ಐಡಿ / ಸರ್ಕಾರಿ ನೌಕರರ ಐಡಿ) ಪೈಕಿ ಯಾವುದಾದರೂ ಒಂದು ದಾಖಲಾತಿ ಹಾಜರುಪಡಿಸುವುದು ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ http://kea.kar.nic.inಗೆ ಭೇಟಿ ನೀಡಿ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆ: 080-23460460ಗೆ ಕಚೇರಿ ಸಮಯದಲ್ಲಿ ಕರೆ ಮಾಡಬಹುದು.
ಇದನ್ನೂ ಓದಿ: Job Alert: ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದ ಕರ್ನಾಟಕ ಲೋಕಸೇವಾ ಆಯೋಗ; ಟೈಮ್ ಟೇಬಲ್ ಇಲ್ಲಿ ವೀಕ್ಷಿಸಿ