Site icon Vistara News

Job Alert: ಎನ್‌ಐಸಿಎಲ್‌ನ ಆಫೀಸರ್‌ ಹುದ್ದೆಗಳಿಗೆ ಪದವೀಧರರು ಅರ್ಜಿ ಸಲ್ಲಿಸಿ

nicl

nicl

ಬೆಂಗಳೂರು: ನ್ಯಾಷನಲ್ ಇನ್ಶುರೆನ್ಸ್‌ ಕಂಪೆನಿ ಲಿಮಿಟೆಡ್ (NICL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NICL AO Notification 2024). ಪದವಿ, ಸ್ನಾತಕೋತ್ತರ ಪಡವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸುಮಾರು 274 ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ ಸ್ಕೇಲ್‌-I (Administrative Officer Scale-I) ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕಂಪೆನಿ ತಿಳಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ನಾಳೆ (ಜನವರಿ 2)ಯಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜನವರಿ 22 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಎಒ)-ಸ್ಪೆಷಲಿಸ್ಟ್‌: 142, ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಎಒ)-ಜೆನೆರಲಿಸ್ಟ್‌: 132 ಹುದ್ದೆಗಳಿವೆ. ಡಾಕ್ಟರ್ಸ್‌ (ಎಂಬಿಬಿಎಸ್‌), ಲೀಗಲ್‌, ಫೈನಾನ್ಸ್‌, ಅಕ್ಚುರಿಯಲ್‌, ಇನ್ಫಾರ್ಮೇಷನ್‌ ಟೆಕ್ನಾಲಜಿ, ಆಟೋಮೋಬೈಲ್‌ ಎಂಜಿನಿಯರ್ಸ್‌, ಹಿಂದಿ ಆಫೀಸರ್‌ ಹುದ್ದೆಗಳಿಗೆ ಪದವಿ / ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ

ಪ್ರಿಲಿಮ್ಸ್, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ ಪ್ರತಿ ತಿಂಗಳು 50,925 ರೂ.-96,765 ರೂ. ವೇತನ ಸಿಗಲಿದೆ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21ರಿಂದ 30 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ ಎಂದು ಪ್ರಕಟಣೆ ತಿಳಿಸಿವೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಪಾವತಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1,000 ರೂ. ಇದನ್ನು ನೆಟ್‌ ಬ್ಯಾಂಕಿಂಗ್‌, ಡೆಬಿಟ್‌ / ಕ್ರೆಡಿಟ್‌ ಕಾರ್ಡ್‌ ಮೂಲಕ ಪಾವತಿಸುವುದು ಕಡ್ಡಾಯ.

ನ್ಯಾಷನಲ್ ಇನ್ಶುರೆನ್ಸ್‌ ಕಂಪೆನಿ ಲಿಮಿಟೆಡ್‌ನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ಮಾಹಿತಿಗೆ ನ್ಯಾಷನಲ್ ಇನ್ಶುರೆನ್ಸ್‌ ಕಂಪೆನಿ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://nationalinsurance.nic.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪಶ್ಚಿಮ ಕೇಂದ್ರ ರೈಲ್ವೆಯಿಂದ 3,015 ಅಪ್ರೆಂಟಿಸ್‌ಗಳ ಆಯ್ಕೆಗೆ ಅರ್ಜಿ ಆಹ್ವಾನ

Exit mobile version