ನವದೆಹಲಿ: ಗಡಿ ಭದ್ರತಾ ಪಡೆ (Border Security Force-BSF)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವುದು ಬಹುತೇಕ ಯುವ ಜನತೆಯ ಕನಸು. ಅಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಬಿಎಸ್ಎಫ್ ತನ್ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಸೇರಿ ಬರೋಬ್ಬರಿ 1,526 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BSF Recruitment 2024). 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನಾಂಕ ಜುಲೈ 8 (Job Alert).
ಹುದ್ದೆಗಳ ವಿವರ
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರೆಂಟ್ ಆಫೀಸರ್ – 243 ಮತ್ತು ಹೆಡ್ ಕಾನ್ಸ್‌ಟೇಬಲ್ ಮತ್ತು ಹವಲ್ದಾರ್ (ಕ್ಲರ್ಕ್) – 1,283 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ವಯೋಮಿತಿ
ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ಮಾಜಿ ಯೋಧರು / ಒಬಿಸಿ ವರ್ಗಕ್ಕೆ 3 ವರ್ಷಗಳ ವಿನಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳೆಯರು ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್ ವಿಧಾನವನ್ನು ಬಳಸಬಹುದು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಲಿಖಿತ ಪರೀಕ್ಷೆ (Written Examination), ದೈಹಿಕ ಸಾಮರ್ಥ್ಯ ಪರೀಕ್ಷೆ (Physical Standards Test), ಸ್ಕಿಲ್ ಟೆಸ್ಟ್ (Skill Test), ದಾಖಲಾತಿ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆ (Medical Examination) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ & ವಾರೆಂಟ್ ಆಫೀಸರ್ ಹುದ್ದೆಗೆ 29,200 ರೂ. -92,300 ರೂ. ಮತ್ತು ಹೆಡ್ ಕಾನ್ಸ್‌ಸ್ಟೇಬಲ್ & ಹವಲ್ದಾರ್ ಹುದ್ದೆಗೆ 25,500 ರೂ. – 81,100 ರೂ. ಮಾಸಿಕ ವೇತನ ದೊರೆಯಲಿದೆ.
BSF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಹೆಸರು, ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ ನೋಂದಾಯಿಸಿ. ಒಟಿಪಿಯನ್ನು ನಮೂದಿಸಿ.
- ಈಗ ತೆರೆದುಕೊಳ್ಳುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: rectt.bsf.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ