ಬೆಂಗಳೂರು: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ (NFL Recruitment 2024). ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).
ಹುದ್ದೆಗಳ ವಿವರ
ಮ್ಯಾನೇಜ್‌ಮೆಂಟ್ ಟ್ರೈನಿ (ಕೆಮಿಕಲ್)- 56
ಮ್ಯಾನೇಜ್‌ಮೆಂಟ್ ಟ್ರೈನಿ (ಮೆಕ್ಯಾನಿಕಲ್)- 18
ಮ್ಯಾನೇಜ್‌ಮೆಂಟ್ ಟ್ರೈನಿ (ಎಲೆಕ್ಟ್ರಿಕಲ್)- 21
ಮ್ಯಾನೇಜ್‌ಮೆಂಟ್ ಟ್ರೈನಿ (ಇನ್ಸ್ಟ್ರುಮೆಂಟೇಶನ್)- 17
ಮ್ಯಾನೇಜ್‌ಮೆಂಟ್ ಟ್ರೈನಿ (ಕೆಮಿಕಲ್ ಲ್ಯಾಬ್)- 12
ಮ್ಯಾನೇಜ್‌ಮೆಂಟ್ ಟ್ರೈನಿ (ಸಿವಿಲ್)- 3
ಮ್ಯಾನೇಜ್‌ಮೆಂಟ್ ಟ್ರೈನಿ (ಫೈರ್ & ಸೇಫ್ಟಿ)- 5
ಮ್ಯಾನೇಜ್‌ಮೆಂಟ್ ಟ್ರೈನಿ (ಮಾಹಿತಿ ತಂತ್ರಜ್ಞಾನ)- 5
ಮ್ಯಾನೇಜ್‌ಮೆಂಟ್ ಟ್ರೈನಿ (ಮೆಟೀರಿಯಲ್ಸ್) -11
ಮ್ಯಾನೇಜ್‌ಮೆಂಟ್ ಟ್ರೈನಿ (ಎಚ್ಆರ್)- 16
ವಿದ್ಯಾರ್ಹತೆ ಮತ್ತು ವಯೋಮಿತಿ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್‌ಸಿ / ಎಂಬಿಎ / ಎಂಎಸ್‌ಸಿ / ಪಿಜಿ ಡಿಪ್ಲೋಮಾ / ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.
ಮಾಸಿಕ ವೇತನ
ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ.-1,40,000 ರೂ. ಮಾಸಿಕ ವೇತನ ಲಭಿಸಲಿದೆ.
NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ (https://careers.nfl.co.in/).
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://careers.nfl.co.in/).
- ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
- ಬಳಿಕ ಲಾಗಿನ್ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ +91-8660511568 ನಂಬರ್‌ಗೆ ಕರೆ ಮಾಡಿ.
ಇದನ್ನೂ ಓದಿ: Job Alert: ಕಾಟನ್ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್ ಮೂಲಕ ಇಂದೇ ಅಪ್ಲೈ ಮಾಡಿ