ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾ (Cotton Corporation of India Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನಿ, ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ಸುಮಾರು 214 ಹುದ್ದೆಗಳಿವೆ (Cotton Corporation of India Recruitment 2024). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2 (Job Alert).
ಹುದ್ದೆಗಳ ವಿವರ
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 1 ಹುದ್ದೆ, ವಿದ್ಯಾರ್ಹತೆ: ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ) 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಮ್ಯಾನೇಜ್‌ಮೆಂಟ್ ಟ್ರೈನಿ (ಮಾರ್ಕೆಟಿಂಗ್) 11 ಹುದ್ದೆ, ವಿದ್ಯಾರ್ಹತೆ: ಕೃಷಿ ಕ್ಷೇತ್ರದಲ್ಲಿ ಎಂಬಿಎ
ಮ್ಯಾನೇಜ್‌ಮೆಂಟ್ ಟ್ರೈನಿ (ಅಕೌಂಟ್ಸ್) 20 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ 120 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ) 20 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 40 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ.
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ) 1 ಹುದ್ದೆ, ವಿದ್ಯಾರ್ಹತೆ: ಹಿಂದಿಯಲ್ಲಿ ಪದವಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ ವಿಭಾಗಕ್ಕೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು 1,000 ರೂ., ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಅನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Cotton Corporation of India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (cdn.digialm.com).
- ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
- ಲಾಗಿನ್ ಆಗಿ ಅಗತ್ಯ ಮಾಹಿತಿಗಳ ಮೂಲಕ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ.
- ಅಪ್ಲಿಕೇಷನ್ ಫಾರಂ ಅನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ