Job Alert: ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ - Vistara News

ಉದ್ಯೋಗ

Job Alert: ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ನೌಕರರ ಕಾರ್ನರ್

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

KSET- 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಜುಲೈ 22ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ ನಡೆಯಲಿದೆ.

VISTARANEWS.COM


on

KSET-2024
Koo

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ (KSET- 2024) ನಡೆಸುವುದಾಗಿ ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅರ್ಹ ಅಭ್ಯರ್ಥಿಗಳು KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

1) ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
5) ಪರೀಕ್ಷಾ ದಿನಾಂಕ- ನವೆಂಬರ್‌ 24

ವಯೋಮಿತಿ:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.

ಇದನ್ನೂ ಓದಿ | Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಪರೀಕ್ಷಾ ಶುಲ್ಕ, ಪಾವತಿಸುವ ವಿಧಾನ

1) ಪರೀಕ್ಷಾ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000 ರೂ.
ಪ್ರವರ್ಗ-I, ಎಸ್‌ಸಿ, ಎಸ್‌ಟಿ, ವಿಶೇಷಚೇತನರು, ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700 ರೂ.

2) ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ವಿಶೇಷಚೇತನರಾದ ಪ್ರವರ್ಗ-I, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. (Medical Certificate with 40% or more disability )

ಪರೀಕ್ಷಾ ವಿಧಾನ, ಪರೀಕ್ಷಾ ದಿನಾಂಕ

ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯು ನವೆಂಬರ್ 24 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ನಡೆಯುವುದು.

ಪತ್ರಿಕೆ-1: 50 ಪ್ರಶ್ನೆ (100 ಅಂಕ)
ಪತ್ರಿಕೆ-2: 100 ಪ್ರಶ್ನೆ (200 ಅಂಕ)
(ಸಮಯ-ಬೆಳಗ್ಗೆ 10ರಿಂದ ಮ.1 ಗಂಟೆವರೆಗೆ)

ಫಲಿತಾಂಶ ಪ್ರಕಟಣೆಯ ವಿಧಾನ

ಯುಜಿಸಿ ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕು.

ಸಾಮಾನ್ಯ ವರ್ಗ(GM): ಎರಡೂ ಪತ್ರಿಕೆಗಳಲ್ಲೂ ಸೇರಿ ಒಟ್ಟು ಶೇ. 40 ಅಂಕಗಳು
ಎಸ್‌ಸಿ. ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ವಿಶೇಷಚೇತನರು, ತೃತೀಯ ಲಿಂಗಿಗಳು: ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳು

ಅರ್ಹತಾ ನಿಬಂಧನೆಗಳು

1) ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.

2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರದೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆ ರದ್ದಾಗುತ್ತದೆ.

3) ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪ್ರಸ್ತುತ ಕೆಸೆಟ್ ಪ್ರಕಟಣೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ, ಎನ್.ಇ.ಟಿ. ಅಥವಾ ಯು.ಜಿ.ಸಿ-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

4) 1991ರ ಸೆಪ್ಟೆಂಬರ್ 19ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55%ರ ಬದಲಾಗಿ 50%).

5) ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ನಮೂದಿಸಿರಬೇಕು. SC, ST, CAT-1, IIA, IIB, IIIA, IIIB ಅಭ್ಯರ್ತಿಗಳು ಸಕ್ಷಮ ಪ್ರಾಧಿಕಾರಗಳು ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಲಗತ್ತಿಸಬೇಕು. ಈ ಅಭ್ಯರ್ಥಿಗಳ ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಆಭ್ಯರ್ಥಿತ್ವವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

6) ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗಧಿತ ಕನಿಷ್ಟ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗದಡಿಯಲ್ಲಿ ಪ್ರವೇಶಾತಿಗೆ ನೊಂದಾಯಿಸಬಹುದು. SC/ ST/OBC ಅರ್ಹತೆಯ ನಿಯಮವು ಕೇವಲ ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.

7) ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಭಾವಿಸಿಕೊಳ್ಳತಕ್ಕದ್ದು. ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.

8) ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂಬರುವ ಕೆಸೆಟ್ ಪರೀಕ್ಷೆಗೆ ಆದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಿದ್ದು ಕಂಡು ಬಂದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಗೊಳಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುವುದು.

9) ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ) ಯಿಂದ ಖಚಿತಪಡಿಸಿಕೊಳ್ಳಬೇಕು.

ವಿನಾಯಿತಿ:

ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಆಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಆರ್ಹತೆ ಪಡೆದಿರಬೇಕೆಂಬ ನಿಯಮವಿದೆ.

ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.

Continue Reading

ಉದ್ಯೋಗ

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18.

VISTARANEWS.COM


on

Job Alert
Koo

ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಂಡಿದ್ದೀರಾ? ಹೌದು ಎಂದಾದರೆ ಇಲ್ಲಿದೆ ಸುವರ್ಣಾವಕಾಶ. ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (South Canara District Central Co-operative Bank Ltd.) ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SCDCC Bank Recruitment Notification 2024). ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ

ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ 2 ಎ: 18, ಪ್ರವರ್ಗ 2 ಬಿ: 5, ಪ್ರವರ್ಗ 3 ಎ: 5, ಪ್ರವರ್ಗ 3 ಬಿ: 6 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜತೆಗೆ ಕಂಪ್ಯೂಟರ್‌ ಆಪರೇಷನ್‌ ಮತ್ತು ಅಪ್ಲಿಕೇಷನ್‌ ಜ್ಞಾನದೊಂದಿಗೆ ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್‌ ಡಿಪ್ಲೋಮಾ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್‌ ತರಬೇತಿ ಪಡೆದ ಸರ್ಟಿಫಿಕೆಟ್‌ ಹೊಂದಿರಬೇಕು. ಕಂಪ್ಯೂಟರ್‌ ಸೈನ್‌ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆಯ್ಕೆಯಾದವರಿಗೆ 24,910 ರೂ. – 55,655 ರೂ. ಮಾಸಿಕ ವೇತನ ಜತೆಗೆ ಡಿಎ & ಎಚ್.ಆರ್.ಎ. ಮುಂತಾದ ಸೌಲಭ್ಯ ದೊರೆಯಲಿದೆ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1,180 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕೆ1 ಸೇರಿದ ಅಭ್ಯರ್ಥಿಗಳು 590 ರೂ. ಪಾವತಿಸಬೇಕು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್‌, ಸಾಮಾನ್ಯ ಜ್ಞಾನ, ಸಹಕಾರಿ ವಿಷಯ / ಬ್ಯಾಂಕಿಂಗ್‌ ಕ್ಷೇತ್ರದ ಬಗ್ಗೆ, ಭಾರತದ ಸಂವಿಧಾನ, ಸಮಾಜದ ಯುಕ್ತವಾದ ಚಟುವಟಿಕೆ ಮತ್ತು ವಸ್ತುನಿಷ್ಟ ವಿಷಯಗಳ ಪ್ರಶ್ನೆಗಳಿರುತ್ತವೆ.

SCDCC Bank Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://scdccbank.com/recruitment/addi-notification.pdf)

ಅಲ್ಲಿ ಸಲ್ಲಿಸುವ ವಿಧಾನ

The Chief Executive Officer,
The South Canara District Central Cooperative Bank Ltd., Kodialbail,
Mangalore – 575 003

ಹೆಚ್ಚಿನ ಮಾಹಿತಿಗೆ: (0824) – 2440381, 2440882 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Continue Reading

ಕರ್ನಾಟಕ

Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

Job Alert: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ. ಲೈನ್‌ಮೆನ್‌ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

VISTARANEWS.COM


on

Job Alert
Koo

ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ (Job Alert) ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ (Raichur News) ತಿಳಿಸಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಲೈನ್‌ಮೆನ್‌ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳೀಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ; ಎಂ ಬಿ ಪಾಟೀಲ್‌

ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಅವರು ತಿಳಿಸಿದರು.

ಈಗಾಗಲೇ 1000 ಸಹಾಯಕ ಎಂಜಿನಿಯರ್‌ಗಳ (ಎಇ), ಕಿರಿಯ ಎಂಜಿನಿಯರ್‌ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಎಂಜಿನಿಯರ್‌ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಿಗಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ ಎಂದು ಅವರು ಹೇಳಿದರು.

ದಾಖಲೆ ಉತ್ಪಾದನೆ

ಈ ಬಾರಿ ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್‌ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ. ಅವರೆಲ್ಲನ್ನೂ ಅಭಿನಂದಿಸಲೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್‌ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು, ಇದು ದಾಖಲೆಯಾಗಿದೆ.

ಇದನ್ನೂ ಓದಿ: Karnataka Media Academy: ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಅದರಲ್ಲೂ ಆರ್‌ಟಿಪಿಎಸ್‌ ವಿದ್ಯುತ್‌ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್‌ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್‌ ಸಾಮರ್ಥ್ಯದ 3ನೇ ವಿದ್ಯುತ್‌ ಘಟಕದಲ್ಲಿ ಏಪ್ರಿಲ್‌ 4ರಂದು 216 ಮೆಗಾವ್ಯಾಟ್‌ ಉತ್ಪಾದನೆ ಮಾಡಲಾಗಿದ್ದು, ಆ ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ಟಿಪಿಎಸ್‌ನ ಏಳು ವಿದ್ಯುತ್‌ ಘಟಕಗಳು ಸೇರಿ ಶೇ. 85ರಷ್ಟು ವಿದ್ಯುತ್‌ ಉತ್ಪಾದಿಸಿವೆ ಎಂದರು.

ಅದೇ ರೀತಿ, ಯರಮರಸ್‌ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್‌) 2023-24 ಹಣಕಾಸು ವರ್ಷದಲ್ಲಿ 6229.250 ಮಿ.ಯೂ. ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6000 ಮಿ.ಯೂ. ಗುರಿಯನ್ನು ವೈಟಿಪಿಎಸ್‌ ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರ 8208.476 ಮಿ.ಯೂ ವಿದ್ಯುತ್‌ ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ ಎಂದರು.

ಆರ್‌ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ಈ ಕುರಿತು ಊಹಾಪೋಹ ಅಷ್ಟ. ಆದರೆ ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗ್‌ನಲ್ಲಿ ತೀರ್ಮಾನ ತೆಗೆದುಕೊಂಡಿದ್ದೀವಿ‌. ಅದನ್ನು ಸರಿ ಮಾಡಲು ಅಗತ್ಯ ಹಣ ಬಿಡುಗಡೆಗೂ ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕಲ್ಲಿದ್ದಲು ಕೊರತೆ ಇಲ್ಲ

ನಮ್ಮ ಸರ್ಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‌ನಿಂದಲೂ ಕಲ್ಲಿದ್ದಲು ಬರುತ್ತಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: Kannada New Movie: ಮೋಷನ್ ಪೋಸ್ಟರ್‌ನಲ್ಲೇ ಕುತೂಹಲ ಮೂಡಿಸಿದ ವಿಭಿನ್ನ ಕಥಾಹಂದರ ಹೊಂದಿರುವ ‘ಹಗ್ಗ’

ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಂಪಯ್ಯ‌ ನಾಯಕ್, ಮಾನಪ್ಪ ವಜ್ಜಲ್, ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Job News: ಮೊದಲ ಹಂತದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

VISTARANEWS.COM


on

Job News Proposal for filling 961 posts from Agriculture Department to KPSC
Koo

ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಲಾಖೆಯಲ್ಲಿನ ಆಡಳಿತಾತ್ಮಕ ಸುಧಾರಣೆಗೆ ಹಲವು ರೀತಿಯ ಕ್ರಮ ಕೈಗೊಂಡಿದ್ದು, ಖಾಲಿ ಇರುವ ಹುದ್ದೆಗಳ ಹಂತಹಂತವಾಗಿ ಭರ್ತಿಗೆ (Job News) ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಇಲಾಖೆಯಲ್ಲಿ ಖಾಲಿ ಇರುವ 961 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹುದ್ದೆಗಳ ವಿವರ

ಕಲ್ಯಾಣ ಕರ್ನಾಟಕ ಭಾಗದಲ್ಲಿ 34 ಕೃಷಿ ಅಧಿಕಾರಿ, 223 ಸಹಾಯಕ ಕೃಷಿ ಅಧಿಕಾರಿ, 17 ದ್ವಿತೀಯ ದರ್ಜೆ ಸಹಾಯಕರು, 17 ಬೆರಳಚ್ಚುಗಾರರು ಹಾಗೂ ಉಳಿಕೆ ವೃಂದದಲ್ಲಿ 84 ಕೃಷಿ ಅಧಿಕಾರಿ, 586 ಸಹಾಯಕ ಕೃಷಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 961 ಹುದ್ದೆಗಳ ನೇಮಕಾತಿಗೆ ಕೃಷಿ ಇಲಾಖೆಯಿಂದ ಕರ್ನಾಟಕ ಲೋಕಾಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬೆಳೆ ವಿಮೆ ಯೋಜನೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಿ

ರೈತರ ಹಿತಕಾಯಲು ಸರ್ಕಾರ ರೂಪಿಸಿರುವ ಬೆಳೆ ವಿಮೆ ಯೋಜನೆಯ ಸಂಪೂರ್ಣ ಫಲ ಕೃಷಿಕರಿಗೆ ಹೋಗುತ್ತಿದ್ದು, ಇದನ್ನು ಇನ್ನಷ್ಟು ಪಾರದರ್ಶಕಗೊಳಿಸಿ ಎಲ್ಲರ ಅನುಮಾನಗಳನ್ನು ಸಂಪೂರ್ಣವಾಗಿ ಬಗೆಹರಿಸಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: MB Patil: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ; ಎಂ ಬಿ ಪಾಟೀಲ್‌

ವಿಕಾಸ ಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 313ನೇ ನಿರ್ದೇಶಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಯ ಯಾವುದೇ ಅಧಿಕಾರಿಗಳು ಏಜೆನ್ಸಿಗಳ ಪರ ಇಲ್ಲವೇ ಇಲ್ಲ, ನಾವೆಲ್ಲರೂ ರೈತರಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದರೂ ಕೆಲವು ರೈತರು, ಜನ ಪ್ರತಿನಿಧಿಗಳಲ್ಲಿ ಇರುವ ಅನುಮಾನಗಳನ್ನು ವ್ಯವಸ್ಥಿತವಾಗಿ ಮನವರಿಕೆ ಮಾಡಿಕೊಟ್ಟು ಬಗೆಹರಿಸಬೇಕು ಇದಕ್ಕಾಗಿ ಒಂದು ಸಭೆ ಆಯೋಜಿಸುವಂತೆ ಸಚಿವರು ಸೂಚಿಸಿದರು.

ತಳ ಹಂತದಿಂದ ಮೇಲ್ಮಟ್ಟದವರೆಗೆ ಯಾವುದೇ ಅಧಿಕಾರಿ, ಸಿಬ್ಬಂದಿ ಬೆಳೆ ವಿಮೆ ಕಂಪನಿಗಳಿಂದ ಒಂದು ಸಣ್ಣ ಅನುಕೂಲವನ್ನೂ ಪಡೆಯುತ್ತಿಲ್ಲ. ಮುಂದೇಯೂ ಯಾವುದೇ ಸಂದರ್ಭದಲ್ಲಿಯೂ ನಡೆಯಬಾರದು ಎಂದು ಸೂಚನೆ ನೀಡಿದರು.

ಇದೇ ವೇಳೆ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಭುಕುಮಾರ್ ಮತ್ತು ಆಯುಕ್ತ ವೈ.ಎಸ್. ಪಾಟೀಲ್ ಅವರು ಬೆಳೆ ಸಮೀಕ್ಷೆ ಕೇವಲ ಕೃಷಿ ಇಲಾಖೆಗಳಿಂದ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗುವ ವಿವಿಧ ಇಲಾಖೆ ಅಧಿಕಾರಿಗಳ ಸಮಿತಿಯಿಂದ ನಡೆಯುತ್ತಿದ್ದು, ಯಾವುದೇ ಲೋಪಗಳಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Kannada New Movie: ಮೋಷನ್ ಪೋಸ್ಟರ್‌ನಲ್ಲೇ ಕುತೂಹಲ ಮೂಡಿಸಿದ ವಿಭಿನ್ನ ಕಥಾಹಂದರ ಹೊಂದಿರುವ ‘ಹಗ್ಗ’

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೇವರಾಜ್, ತೋಟಗಾರಿಕೆ ನಿರ್ದೇಶಕ ರಮೇಶ್, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿ ಹೊನ್ನಲಿಂಗಪ್ಪ ಹಾಗೂ ಇತರರು ಹಾಜರಿದ್ದರು.

Continue Reading
Advertisement
Narendra Modi
ದೇಶ7 mins ago

Narendra Modi: 3-4 ವರ್ಷದಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ; ಲೆಕ್ಕ ಕೊಟ್ಟ ನರೇಂದ್ರ ಮೋದಿ

IND vs ZIM
ಪ್ರಮುಖ ಸುದ್ದಿ15 mins ago

IND vs ZIM : ಭಾರತ ತಂಡಕ್ಕೆ 10 ವಿಕೆಟ್​ ಭರ್ಜರಿ ವಿಜಯ, ಸರಣಿ 3-1ರಲ್ಲಿ ಕೈವಶ

Kim Kardashian Saree Fashion
ಫ್ಯಾಷನ್25 mins ago

Kim Kardashian Saree Fashion: ರೆಡಿ ರೆಡ್‌ ಸೀರೆಯಲ್ಲಿ ಸೆಕ್ಸಿಯಾಗಿ ಕಂಡ ಕಿಮ್‌ ಕಾರ್ಡಶಿಯಾನ್‌! ವಿಡಿಯೊ ನೋಡಿ

Car Catches fire
ಕೊಡಗು41 mins ago

Car Catches fire: ಮಡಿಕೇರಿ ಬಳಿ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಸ್ವಿಫ್ಟ್‌ ಕಾರು!

Bypoll Results
ದೇಶ56 mins ago

Bypoll Results: ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 13ರ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟಕ್ಕೆ ಜಯ!

MS Dhoni
ಪ್ರಮುಖ ಸುದ್ದಿ58 mins ago

MS Dhoni : ಅಂಬಾನಿ ಪುತ್ರನ ಮದುವೆಯಲ್ಲಿ ಬಿಂದಾಸ್​ ​ ಡಾನ್ಸ್ ಮಾಡಿದ ಮಹೇಂದ್ರ ಸಿಂಗ್ ಧೋನಿ

CM Siddaramaiah
ಕರ್ನಾಟಕ1 hour ago

CM Siddaramaiah: ಕೆಪಿಸಿಸಿ ಕಚೇರಿ ಸ್ವಚ್ಛತಾ ಸಿಬ್ಬಂದಿಗೆ ಮನೆ ನೀಡಲು ಸಿಎಂ ಸೂಚನೆ

Israel Hamas War
ವಿದೇಶ1 hour ago

Israel Hamas War: ಗಾಜಾ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

karnataka Weather Forecast
ಮಳೆ2 hours ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

Healthy Food For Dengue
ಫ್ಯಾಷನ್2 hours ago

Healthy Food For Dengue: ಈ ಆಹಾರಗಳನ್ನು ತಿನ್ನಿ; ಡೆಂಗ್ಯೂಗೆ ಡೋಂಟ್ ಕೇರ್ ಅನ್ನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ7 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ5 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಟ್ರೆಂಡಿಂಗ್‌