ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ನಾವಿಕ್ (ಜನರಲ್ ಡ್ಯೂಟಿ) – 260 ಮತ್ತು ಯಾಂತ್ರಿಕ್ – 60 ಹುದ್ದೆಗಳಿವೆ. ನಾವಿಕ್ (ಜನರಲ್ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ವಯೋಮಿತಿ
Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್ ಮತ್ತು ಅಡಾಟ್ಬೆಲಿಟಿ ಟೆಸ್ಟ್ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. (https://cgept.cdac.in/icgreg/candidate/login)
- ನಿಮ್ಮ ಇ-ಮೇಲ್ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
- ಈಗ ಲಾಗಿನ್ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
- ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ