Job Alert: ಬ್ಯಾಂಕ್ ಆಫ್ ಬರೋಡಾದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - Vistara News

ಉದ್ಯೋಗ

Job Alert: ಬ್ಯಾಂಕ್ ಆಫ್ ಬರೋಡಾದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಬ್ಯಾಂಕ್ ಆಫ್ ಬರೋಡಾ ಒಟ್ಟು 38 ಮ್ಯಾನೇಜರ್ (ಸೆಕ್ಯುರಿಟಿ ಆಫೀಸರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ.

VISTARANEWS.COM


on

bank of baroda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಪ್ರಮುಖ ಬ್ಯಾಂಕ್‌ಗಳ ಪೈಕಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) ಒಟ್ಟು 38 ಮ್ಯಾನೇಜರ್ (ಸೆಕ್ಯುರಿಟಿ ಆಫೀಸರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2024). ಭಾರತದ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಜತೆಗೆ ಭೂ ಸೇನೆ, ನೌಕಾಪಡೆ ಅಥವಾ ವಾಯುಪಡೆಯಲ್ಲಿ ಅಧಿಕಾರಿಯಾಗಿ ಕನಿಷ್ಠ ಐದು ವರ್ಷಗಳ ಸೇವೆ ಸಲ್ಲಿಸಿರಬೇಕು. ಅಲ್ಲದೆ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್‌ ಹುದ್ದೆಗಿಂತ ಕಡಿಮೆಯಿಲ್ಲದ ಶ್ರೇಣಿಯ ಪೊಲೀಸ್ ಅಧಿಕಾರಿಯಾಗಿರಬೇಕು. ಕ್ಲಾಸ್ -1 ಗೆಜೆಟೆಡ್ ಆಫೀಸರ್ ಆಗಿ ಕನಿಷ್ಠ ಐದು ವರ್ಷಗಳ ಸೇವೆಯನ್ನು ಹೊಂದಿರಬೇಕು. ಯುಆರ್‌-18, ಎಸ್‌ಸಿ-5, ಎಸ್‌ಟಿ-2, ಒಬಿಸಿ-10, ಇಡಬ್ಲ್ಯುಎಸ್‌ ವಿಭಾಗಕ್ಕೆ 3 ಹುದ್ದೆಗಳಿವೆ. ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ ವಯಸ್ಸು 25 ವರ್ಷ ಮತ್ತು ಗರಿಷ್ಠ 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆಯ್ಕೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಆನ್‌ಲೈನ್ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಆಯ್ಕೆಯಾದವರಿಗೆ 48,170 ರೂ.-69,810 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾದ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
 • ಹೋಮ್‌ ಪೇಜ್‌ನಲ್ಲಿ ಕಂಡು ಬರುವ Careers ಅಥವಾ Recruitment ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
 • Bank of Baroda Security Officer Recruitment 2024 ಬಟನ್‌ ಮೇಲೆ ಕ್ಲಿಕ್‌ ಮಾಡಿ.
 • ನಿಮ್ಮ ಹೆಸರು, ಇ ಮೇಲ್‌ ವಿಳಾಸ, ಫೋನ್‌ ನಂಬರ್‌ ಇತ್ಯಾದಿ ನೀಡಿ ಹೆಸರು ನೋಂದಾಯಿಸಿ.
 • ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರ್ಮ್‌ ಭರ್ತಿ ಮಾಡಿ.
 • ನೋಟಿಫಿಕೇಷನ್‌ನಲ್ಲಿ ಉಲ್ಲೇಖಿಸಿರುವ ಡಾಕ್ಯುಮೆಂಟ್‌, ಫೋಟೊಗಳನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
 • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
 • ಅಪ್ಲಿಕೇಷನ್‌ ಫಾರಂನಲ್ಲಿ ಉಲ್ಲೇಖಿಸಿರುವ ಮಾಹಿತಿಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job Alert: ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳನ್ನು (Job Alert) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನೋಂದಣಿ ಪ್ರಕ್ರಿಯೆ, ಶುಲ್ಕ, ಆಯ್ಕೆ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Sbi Recruitment
Koo

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (State Bank of India job) ಕೆಲಸ (Sbi Recruitment) ಮಾಡಬೇಕು (Job Alert) ಎನ್ನುವುದು ಬಹುಜನರ ಕನಸು. ಈ ಕನಸು ನನಸು ಮಾಡಿಕೊಳ್ಳಲು ಈಗ ಸುವರ್ಣಾವಕಾಶ ಒದಗಿ ಬಂದಿದೆ. ಒಟ್ಟು 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ (Specialist Cadre Officers) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ (SCO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ವಿಪಿ ವೆಲ್ತ್, ಹೂಡಿಕೆ ತಜ್ಞ, ಹೂಡಿಕೆ ಅಧಿಕಾರಿ, ಸಂಬಂಧ ವ್ಯವಸ್ಥಾಪಕ- ಟೀಮ್ ಲೀಡ್, ಸೆಂಟ್ರಲ್ ರಿಸರ್ಚ್ ಟೀಮ್ ಹುದ್ದೆಗಳು, ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್ (ತಂತ್ರಜ್ಞಾನ ಮತ್ತು ವ್ಯವಹಾರ) ಮತ್ತು ಪ್ರಾದೇಶಿಕ ಮುಖ್ಯಸ್ಥರು ಸೇರಿದಂತೆ ಅನೇಕ ಹುದ್ದೆಗಳಿವೆ.


ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಜುಲೈ 19ರಿಂದಲೇ ವಿವಿಧ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ (SCO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭವಾಗಿದೆ ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಎಸ್‌ಒ ನೇಮಕಾತಿ 2024ಗೆ ಸಂಬಂಧಿಸಿದ ಅಧಿಕೃತ ವೆಬ್‌ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ನೋಂದಣಿ ಪ್ರಕ್ರಿಯೆ ಜುಲೈ 19ರಂದು ಪ್ರಾರಂಭಗೊಂಡಿದ್ದು, ಆಗಸ್ಟ್ 8ರಂದು ಮುಕ್ತಾಯವಾಗಲಿದೆ. ಪರೀಕ್ಷಾ ಶುಲ್ಕವನ್ನು ಪಾವತಿಸಲು ಆಗಸ್ಟ್ 8 ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ

ಕಾಯ್ದಿರಿಸದ ಅಥವಾ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಎಸ್‌ಬಿಐ ಎಸ್‌ಒ ಅಪ್ಲಿಕೇಶನ್ 2024 ಶುಲ್ಕವಾಗಿ 750 ರೂ. ನಿಗದಿಪಡಿಸಲಾಗಿದೆ. ಆದರೆ ಎಸ್ ಸಿ, ಎಸ್ ಟಿಯಂತಹ ಮೀಸಲಾತಿ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಿಲ್ಲ.

ಇದನ್ನೂ ಓದಿ: KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರಗಳನ್ನು ನೋಡಿ ಅರ್ಹ ಅಭ್ಯರ್ಥಿಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಲಾಗುತ್ತದೆ. ಬಳಿಕ ಅದರಲ್ಲಿ ಅರ್ಹರಾದವರಿಗೆ ಸಂದರ್ಶನ ನಡೆಸಿ ಸೂಕ್ತರಾದವರನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕುರಿತು ಇರುವ ಸಂಪೂರ್ಣ ವಿವರಗಳನ್ನು ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.inಗೆ ಭೇಟಿ ನೀಡಬಹುದು.

Continue Reading

ಉದ್ಯೋಗ

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Indian Navy Recruitment: ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2

VISTARANEWS.COM


on

Indian Navy Recruitment
Koo

ನವದೆಹಲಿ: ಭಾರತೀಯ ನೌಕಾ ಪಡೆ (Indian Navy)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಇಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Navy Recruitment). ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಜ್‌ಮ್ಯಾನ್‌ (ಮದ್ದುಗುಂಡು ಕಾರ್ಯಾಗಾರ) 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಚಾರ್ಜ್‌ಮ್ಯಾನ್‌ (ಫ್ಯಾಕ್ಟರಿ) 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಟ್ರೇಡ್ಸ್‌ಮ್ಯಾನ್‌ ಮೇಟ್ 161 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕೀಟ ನಿಯಂತ್ರಣ ಕಾರ್ಯಕರ್ತ (Pest Control Worker) 18 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕುಕ್ 9 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) (ಮಿನಿಸ್ಟ್ರಿಯಲ್) 16 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಚಾರ್ಜ್‌ಮ್ಯಾನ್‌ (ಮೆಕ್ಯಾನಿಕ್) 18 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೈಂಟಿಫಿಕ್ ಅಸಿಸ್ಟೆಂಟ್ 4 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಡ್ರಾಟ್ಸ್‌ಮ್ಯಾನ್‌ (Draughtsman) (ಕನ್ಟ್ರಕ್ಷನ್‌) 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಫೈರ್ ಮ್ಯಾನ್ 444 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಗ್ನಿಶಾಮಕ ಎಂಜಿನ್ ಚಾಲಕ 58 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಸುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 295 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Indian Navy Recruitment ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (joinindiannavy.gov.in).
 • ಹೆಸರು ನಮೂದಿಸಿ.
 • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
 • ಅಪ್ಲೀಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
 • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
 • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
 • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Continue Reading

ಕರ್ನಾಟಕ

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

KPSC Recruitment 2024: 2024ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುವ ದಿನಾಂಕವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಯಾವೆ ಇಲಾಖೆ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment 2024
Koo

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸೇರಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು (KPSC Recruitment 2024) ಬಿಡುಗಡೆ ಮಾಡಲಾಗಿದೆ.

ವಿವಿಧ ಪರೀಕ್ಷೆ ವೇಳಾಪಟ್ಟಿ

ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ- 1/2023 ದಿನಾಂಕ 13-03-2024 ರ ಹುದ್ದೆಗಳಿಗೆ ಪರೀಕ್ಷೆ

 • ಕನ್ನಡ ಭಾಷಾ ಪರೀಕ್ಷೆ (ಉಳಿಕೆ ಮೂಲ ವೃಂದ): 14-09-2024 (ಶನಿವಾರ ಮಧ್ಯಾಹ್ನ)
 • ಸಾಮಾನ್ಯ ಪತ್ರಿಕೆ-I (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಬೆಳಗ್ಗೆ)
 • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ- 2/2023 ದಿನಾಂಕ 13-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

 • ಕನ್ನಡ ಭಾಷಾ ಪರೀಕ್ಷೆ (ಹೈದರಾಬಾದ್ ಕರ್ನಾಟಕ ) : 19-10-2024 (ಶನಿವಾರ ಮಧ್ಯಾಹ್ನ)
 • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
 • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
 • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಹೈದರಾಬಾದ್ ಕರ್ನಾಟಕ ) : 19-10-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ: ಇ(2) 598/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

 • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 97 ಹುದ್ದೆಗಳು (ಹೈದರಾಬಾದ್ ಕರ್ನಾಟಕ) : 16-11-2024 (ಶನಿವಾರ ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 17-11-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

ಅಧಿಸೂಚನೆ: ಇ(2) 597/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ

 • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 150 ಹುದ್ದೆಗಳು (ಉಳಿಕೆ ಮೂಲ ವೃಂದ) : 07-12-2024 (ಶನಿವಾರ) (ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 08-12-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಕೆ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
 • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
 • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
 • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
 • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
 • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
 • ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ವೈರಲ್ ನ್ಯೂಸ್

Viral Video: ತಿಂಗಳಲ್ಲಿ 35 ಲಕ್ಷ ರೂ. ಗಳಿಸಿದ ಬೆಂಗಳೂರಿನ 22 ವರ್ಷದ ಯುವಕ; ಹೇಗೆ?

ಗೋವಾದ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದ ಬೆಂಗಳೂರಿನ 22 ವರ್ಷದ ಯುವಕ ಇಶಾನ್ ಶರ್ಮಾ ಸಣ್ಣ ವಯಸ್ಸಿನಲ್ಲಿ ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಶಿಕ್ಷಣವನ್ನು ಅರ್ಧದಲ್ಲಿ ಕೈಬಿಟ್ಟು ಕಳೆದ ತಿಂಗಳು ಯೂಟ್ಯೂಬ್ ವಿಡಿಯೊ ಮೂಲಕ 35 ಲಕ್ಷ ರೂ. ಗಳಿಸಿರುವುದಾಗಿ ಬೆಂಗಳೂರಿನ (bengaluru) 22 ವರ್ಷದ ಯುವಕ ಇಶಾನ್ ಶರ್ಮಾ (Ishan Sharma) ಇತ್ತೀಚೆಗೆ ಉದ್ಯಮಿಗಳಾದ ಅಶ್ನೀರ್ ಗ್ರೋವರ್ (Ashneer Grover), ಆಶಿಶ್ ಮೊಹಾಪಾತ್ರ (Asish Mohapatra), ಸಾರ್ಥಕ್ ಅಹುಜಾ (Sarthak Ahuja) ಮತ್ತು ಸಂಜೀವ್ ಬಿಖ್‌ಚಂದಾನಿ (Sanjeev Bikhchandani) ಅವರೊಂದಿಗೆ ಪಾಡ್‌ಕಾಸ್ಟ್ ನಲ್ಲಿ ತಿಳಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ.

ಗೋವಾ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇಶಾನ್ ಅವರು ಕಳೆದ ತಿಂಗಳು 35 ಲಕ್ಷ ರೂ. ಗಳಿಸಿದ್ದಾರೆ. ಆದರೆ ಅವರು, ಇದು ಸಣ್ಣ ಮೊತ್ತ. ಹೊರಗೆ ಹೋಗಿ ಅಷ್ಟು ಸಣ್ಣ ಮೊತ್ತದಿಂದ ಬಿಸಿನೆಸ್ ಪ್ರಾರಂಭಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಗೆ ಅಶ್ನೀರ್ ಗ್ರೋವರ್, ಆಸಿಶ್ ಮೊಹಾಪಾತ್ರ, ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಆಶ್ಚರ್ಯಕರ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಇಶಾನ್ ಶರ್ಮಾ ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಆಗ ಅಶ್ನೀರ್ ಗ್ರೋವರ್, ನಾವು ನಿಮ್ಮ ಕಥೆಯನ್ನು ಕೇಳಬೇಕು ಎಂದು ಆಸಕ್ತಿ ತೋರುತ್ತಾರೆ. ಅಲ್ಲದೇ ತಾವು 22 ವರ್ಷದವರಾಗಿದ್ದಾಗ ಏನನ್ನೂ ಗಳಿಸುತ್ತಿರಲಿಲ್ಲ ಎಂದು ಬಹಿರಂಗಪಡಿಸಿದರು.

Viral Video


ಮತ್ತೊಂದೆಡೆ ಆಶಿಶ್ ಮೊಹಾಪಾತ್ರ ಅವರು ತಿಂಗಳಿಗೆ 35,000 ರೂ. ಪಡೆದಿದ್ದರು ಎಂದು ಹೇಳಿದರೆ ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಅವರು ತಿಂಗಳಿಗೆ ಕ್ರಮವಾಗಿ 5,000 ರೂ. ಮತ್ತು 1,500 ರೂ. ಗಳಿಸುತ್ತಿರುವುದಾಗಿ ತಿಳಿಸಿದರು.

ಮಾರ್ಕೆಟಿಂಗ್ ಏಜೆನ್ಸಿ ಮಾರ್ಕಿಟ್‌ಅಪ್ ಅನ್ನು ತನ್ನ ಕಾಲೇಜ್ ಮೇಟ್ ಸರನ್ಶ್ ಆನಂದ್ ಅವರೊಂದಿಗೆ ಸ್ಥಾಪಿಸಿರುವ ಇಶಾನ್ ಶರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುಮಾರು 2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಈ ಮೂಲಕ ಅವರು ಭಾರೀ ಹಣ ಗಳಿಸಿದ್ದಾರೆ.

ಇವರ ಈ ವಿಡಿಯೋ ವೈರಲ್ ಆದ ಬಳಿಕ 80,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಸಾಕಷ್ಟು ಲೈಕ್ ಗಳನ್ನು ಗಳಿಸಿದೆ.


ಇದಕ್ಕೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, ನಾನು 23 ವರ್ಷ ವಯಸ್ಸಿನವನಾಗಿದ್ದರೂ ಒಂದು ಪೈಸೆಯನ್ನೂ ಗಳಿಸುತ್ತಿಲ್ಲ. ತಂದೆಯ ಮೇಲೆ ಅವಲಂಬಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಮತ್ತೊಬ್ಬರು ಕಾಮೆಂಟ್ ನಲ್ಲಿ ತಿಂಗಳಿಗೆ 35 ಲಕ್ಷ ರೂ. ಅನ್ನು ಒಂದು ಸಣ್ಣ ಮೊತ್ತ ಎಂದು ಹೇಳುತ್ತಿದ್ದಾರಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನನಗೆ ತಿಳಿದಿರುವ ಅತ್ಯಂತ ಶ್ರಮಜೀವಿಗಳಲ್ಲಿ ಅವರು ಒಬ್ಬರು ಎಂದು ಇನ್ನೊಬ್ಬರು ಕಾಮೆಂಟ್ ನಲ್ಲಿ ಹೇಳಿದ್ದಾರೆ.

Continue Reading
Advertisement
road accident savadatti belagavi news
ಬೆಳಗಾವಿ39 mins ago

Road Accident: ಬೈಕ್‌ಗಳು ಮುಖಾಮುಖಿ ಡಿಕ್ಕಿ, ಇಬ್ಬರು ಸಾವು, ಇಬ್ಬರು ಗಂಭೀರ

road rage bangalore
ಬೆಂಗಳೂರು1 hour ago

Road Rage: ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

Pets in Designer Outfits
Latest1 hour ago

Pets in Designer Outfits : ಅನಂತ್-ರಾಧಿಕಾ ಮದುವೆಯಲ್ಲಿ ಅಂಬಾನಿ ಕುಟುಂಬದ ನಾಯಿಗಳ ಸಂಭ್ರಮ ನೋಡಿ!

dengue fever death davanagere
ಪ್ರಮುಖ ಸುದ್ದಿ1 hour ago

Dengue fever: ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು, ರಾಜ್ಯದಲ್ಲಿ ಡೆಂಗ್ಯು ಸಾವು 9ಕ್ಕೆ ಏರಿಕೆ

ರಾಜಮಾರ್ಗ ಅಂಕಣ alphe hevett
ಅಂಕಣ2 hours ago

ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

karnataka weather Forecast
ಮಳೆ2 hours ago

Karnataka Weather : ಗಾಳಿ ಸಹಿತ ಜೋರು ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ರಾಜಮಾರ್ಗ ಅಂಕಣ sadananda suvarna
ಅಂಕಣ2 hours ago

ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

Bengaluru power cut July 20th power outage in many parts of Bengaluru
ಬೆಂಗಳೂರು3 hours ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

Dina Bhavishya
ಭವಿಷ್ಯ4 hours ago

Dina Bhavishya : ನಂಬಿದ ವ್ಯಕ್ತಿಗಳಿಂದಲೇ ಈ ರಾಶಿಯವರಿಗೆ ಇಂದು ನಿರಾಸೆ

Cargo container ship
ದೇಶ9 hours ago

Cargo container ship: ಕಾರ್ಗೋ ಶಿಪ್‌ನಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಕರಕಲಾದ ಸರಕುಗಳು-ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ20 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ6 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌