ನವದೆಹಲಿ: ದೇಶದ ಪ್ರಮುಖ ಬ್ಯಾಂಕ್‌ಗಳ ಪೈಕಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) ಒಟ್ಟು 38 ಮ್ಯಾನೇಜರ್ (ಸೆಕ್ಯುರಿಟಿ ಆಫೀಸರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2024). ಭಾರತದ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನ (Job Alert).
ವಿದ್ಯಾರ್ಹತೆ ಮತ್ತು ವಯೋಮಿತಿ
ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಜತೆಗೆ ಭೂ ಸೇನೆ, ನೌಕಾಪಡೆ ಅಥವಾ ವಾಯುಪಡೆಯಲ್ಲಿ ಅಧಿಕಾರಿಯಾಗಿ ಕನಿಷ್ಠ ಐದು ವರ್ಷಗಳ ಸೇವೆ ಸಲ್ಲಿಸಿರಬೇಕು. ಅಲ್ಲದೆ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗಿಂತ ಕಡಿಮೆಯಿಲ್ಲದ ಶ್ರೇಣಿಯ ಪೊಲೀಸ್ ಅಧಿಕಾರಿಯಾಗಿರಬೇಕು. ಕ್ಲಾಸ್ -1 ಗೆಜೆಟೆಡ್ ಆಫೀಸರ್ ಆಗಿ ಕನಿಷ್ಠ ಐದು ವರ್ಷಗಳ ಸೇವೆಯನ್ನು ಹೊಂದಿರಬೇಕು. ಯುಆರ್-18, ಎಸ್‌ಸಿ-5, ಎಸ್‌ಟಿ-2, ಒಬಿಸಿ-10, ಇಡಬ್ಲ್ಯುಎಸ್ ವಿಭಾಗಕ್ಕೆ 3 ಹುದ್ದೆಗಳಿವೆ. ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ ವಯಸ್ಸು 25 ವರ್ಷ ಮತ್ತು ಗರಿಷ್ಠ 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್ / ಒಬಿಸಿ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಆಯ್ಕೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಆನ್‌ಲೈನ್ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಆಯ್ಕೆಯಾದವರಿಗೆ 48,170 ರೂ.-69,810 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬ್ಯಾಂಕ್ ಆಫ್ ಬರೋಡಾದ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- ಹೋಮ್ ಪೇಜ್ನಲ್ಲಿ ಕಂಡು ಬರುವ Careers ಅಥವಾ Recruitment ಆಯ್ಕೆ ಮೇಲೆ ಕ್ಲಿಕ್ ಮಾಡಿ.
- Bank of Baroda Security Officer Recruitment 2024 ಬಟನ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಹೆಸರು, ಇ ಮೇಲ್ ವಿಳಾಸ, ಫೋನ್ ನಂಬರ್ ಇತ್ಯಾದಿ ನೀಡಿ ಹೆಸರು ನೋಂದಾಯಿಸಿ.
- ನಿಮ್ಮ ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್ ಫಾರ್ಮ್ ಭರ್ತಿ ಮಾಡಿ.
- ನೋಟಿಫಿಕೇಷನ್ನಲ್ಲಿ ಉಲ್ಲೇಖಿಸಿರುವ ಡಾಕ್ಯುಮೆಂಟ್, ಫೋಟೊಗಳನ್ನು ಸರಿಯಾದ ಗಾತ್ರದಲ್ಲಿ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಅಪ್ಲಿಕೇಷನ್ ಫಾರಂನಲ್ಲಿ ಉಲ್ಲೇಖಿಸಿರುವ ಮಾಹಿತಿಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಇದನ್ನೂ ಓದಿ: Job Alert: ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ