Site icon Vistara News

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Job Alert

Job Alert

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ನಿಮ್ಮ ಕನಸು ನನಸಾಗಿಸುವ ಗೋಲ್ಡನ್‌ ಚಾನ್ಸ್‌ ಇಲ್ಲಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ (GTTC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 15 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್‌ 29ರವರೆಗೆ ವಿಸ್ತರಿಸಲಾಗಿದೆ. ಡಿಪ್ಲೋಮಾ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ (Job Alert).

ಹುದ್ದೆಗಳ ವಿವರ

ಉಪನ್ಯಾಸಕ (ಎಂಜಿನಿಯರಿಂಗ್)- 30 ಹುದ್ದೆ, ವಿದ್ಯಾರ್ಹತೆ: ಮೆಕಾಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ / ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ.
ಇಂಜಿನಿಯರ್- 2 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್ / ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಪದವಿ
ಆಫೀಸರ್ ಗ್ರೇಡ್-II- 2 ಹುದ್ದೆ, ವಿದ್ಯಾರ್ಹತೆ: ಕಲೆ / ವಿಜ್ಞಾನ / ಬಿಸಿನೆಸ್ ಅಡ್ಮಿನ್‌ನಲ್ಲಿ ಪದವಿ
ಫೋರ್‌ಮನ್‌ ಗ್ರೇಡ್-II- 4 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಟೂಲ್ & ಡೈ ಮೇಕಿಂಗ್
ಬೋಧಕ (Instructor) ಗ್ರೇಡ್-I- 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಟೆಕ್ನಿಷಿಯನ್ ಗ್ರೇಡ್-II- 8 ಹುದ್ದೆ, ವಿದ್ಯಾರ್ಹತೆ: 15 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್
ಬೋಧಕ ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್
ಟೆಕ್ನಿಷಿಯನ್ ಗ್ರೇಡ್-III- 23 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಮೆಕಾಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಟೆಕ್ನಿಷಿಯನ್ ಗ್ರೇಡ್-IV- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್, ಮೆಕ್ಯಾನಿಕ್ ಮೆಷಿನ್ ಟೂಲ್ ನಿರ್ವಹಣೆಯಲ್ಲಿ ಐಟಿಐ
ಸಹಾಯಕ (Assistant) ಗ್ರೇಡ್-II- 5 ಹುದ್ದೆ, ವಿದ್ಯಾರ್ಹತೆ: ಕಲೆ / ವಾಣಿಜ್ಯ / ವಿಜ್ಞಾನದಲ್ಲಿ ಪದವಿ, ಸೆಕ್ರೆಟರಿಯಲ್ ಪ್ರಾಕ್ಟೀಸ್ / ಮಾಡರ್ನ್ ಆಫೀಸ್ ಪ್ರಾಕ್ಟೀಸ್ / ಕಮರ್ಷಿಯಲ್ ಪ್ರಾಕ್ಟೀಸ್ / ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೋಮಾ.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18-27 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ಮತ್ತು ಎಸ್‌ಸಿ / ಎಸ್‌ಟಿ / ಕ್ಯಾಟಗರಿ-I / ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ವಿಭಾಗದ ಅಭ್ಯರ್ಥಿಗಳು 750 ರೂ., ಎಸ್‌ಸಿ / ಎಸ್‌ಟಿ / ಕ್ಯಾಟಗರಿ I / ಮಾಜಿ ಯೋಧರು 500 ರೂ., ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯ ನೋಟಿಸ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

GTTC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ 91 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Exit mobile version