ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಬರೋಬ್ಬರಿ 11,307 ಡಿ ಗ್ರೂಪ್‌ನ ಪೌರ ಕಾರ್ಮಿಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ (BBMP Recruitment 2024). ಘನತ್ಯಾಜ್ಯ ನಿರ್ವಹಣೆ ವಿಭಾಗದಡಿ ನೇಮಕಾತಿ ನಡೆಯಲಿದೆ. ಕನ್ನಡ ಬಲ್ಲವರು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 17,000 ರೂ. – 28,950 ರೂ. ಮಾಸಿಕ ವೇತನ ದೊರೆಯಲಿದೆ.
BBMP Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಬಿಬಿಎಂಪಿಯ ಅಧಿಕೃತ ವೆಬ್ಸೈಟ್ bbmp.gov.in.ಗೆ ಭೇಡಿ ನೀಡಿ.
- ಈಗ ತೆರೆದುಕೊಳ್ಳುವ ಹೋಮ್ಪೇಜ್ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್ ಮಾಡಿ.
- ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಪ್ರಿಂಟ್ಔಟ್ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.
ಇದನ್ನೂ ಗಮನಿಸಿ
- ಈ ಹುದ್ದೆಗಳಿಗೆ ಯಾವುದೇ ಸಂದರ್ಶನ ನಿಗದಿಪಡಿಸಿಲ್ಲ.
- ಅಪೂರ್ಣ ಅರ್ಜಿಗಳನ್ನು ಕಡ್ಡಾಯವಾಗಿ ಸ್ವೀಕರಿಸುವುದಿಲ್ಲ.
- ಅರ್ಜಿಯೊಂದಿಗೆ ಕಡ್ಡಾಯವಾಗಿ ದಾಖಲೆಗಳನ್ನು ಲಗತ್ತಿಸಬೇಕು.
- ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಪತ್ನಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದಿಲ್ಲ.
- ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
- ಈಗಾಗಲೇ ಗಂಭೀರ ಪ್ರಕರಣದ ಕಾರಣದಿಂದ ಕರ್ತವ್ಯದಿಂದ ತೆಗೆದು ಹಾಕಿರಬಾರದು.
ಇದನ್ನೂ ಓದಿ: Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ