Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ - Vistara News

ಉದ್ಯೋಗ

Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

Job Alert: ಎಂಜಿನಿಯರಿಂಗ್‌ ಶಿಕ್ಷಣ ಮುಗಿಸಿದವರಿಗೆ ಗುಡ್‌ನ್ಯೂಸ್‌. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್‌ 13.

VISTARANEWS.COM


on

BEL
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ (Bharat Electronics Limited) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಕಂಪೆನಿ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಿಕೊಳ್ಳುತ್ತಿದೆ (BEL Trainee Engineer Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನ ಮಾರ್ಚ್‌ 13 (Job Alert).

ಹುದ್ದೆಗಳ ವಿವರ

ಬಿಇಎಲ್‌ ತನ್ನ ಕೇಂದ್ರ ವಲಯದಲ್ಲಿ – 68, ಪೂರ್ವ ವಲಯ – 86, ಪಶ್ಚಿಮ ವಲಯ – 139, ಉತ್ತರ ವಲಯ – 78, ಈಶಾನ್ಯ ವಲಯ – 15, ದಕ್ಷಿಣ ವಲಯ – 131 ಹುದ್ದೆಗಳು ಭರ್ತಿ ಮಾಡಲಿದೆ. ಈ ಪೈಕಿ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ, ಆಂಧ್ರ ಪ್ರದೇಶಗಳನ್ನು ಒಳಗೊಂಡ ದಕ್ಷಿಣ ವಲಯದಲ್ಲಿ 131 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಇ / ಬಿ.ಟೆಕ್, ಎಂಇ / ಎಂ.ಟೆಕ್. ಓದಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ ಬಿ.ಇ / ಬಿ.ಟೆಕ್‌ ಅಭ್ಯರ್ಥಿಗಳಿಗೆ 28 ವರ್ಷ ಮತ್ತು ಎಂ.ಇ / ಎಂ.ಟೆಕ್‌ ಅಭ್ಯರ್ಥಿಗಳಿಗೆ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದವರ ಶಾರ್ಟ್‌ ಲಿಸ್ಟ್‌ ಮಾಡಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ತೇರ್ಗಡೆಯಾವರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ 2 ವರ್ಷಕ್ಕೆ ನಿಯೋಜನೆಗೊಳಿಸಲಾಗುತ್ತದೆ. ಕಾರ್ಯಕ್ಷಮತೆ ಆಧರಿಸಿ ಮತ್ತೊಂದು ವರ್ಷ ಹುದ್ದೆ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ

ಪಿಡಬ್ಲ್ಯುಬಿಡಿ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 + 18% ಜಿಎಸ್‌ಟಿ ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬಹುದು. ಆಯ್ಕೆಯಾದವರಿಗೆ 40,000 ರೂ. ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಈ ಅರ್ಜಿ ಗೂಗಲ್ ಫಾರ್ಮ್ ಆಗಿದ್ದು, ಬೇರೆ ಯಾವುದೇ ಮಾದರಿಯ, ಅಪೂರ್ಣ ಅರ್ಜಿಯನ್ನು ಸ್ವೀಕರಿಸುವುದಿಲ್ಲ. ಅಭ್ಯರ್ಥಿಗಳು ಗೂಗಲ್ ಫಾರ್ಮ್ ಅನ್ನು ಯಶಸ್ವಿಯಾಗಿ ಭರ್ತಿ ಮಾಡಲು ಗೂಗಲ್ ಕ್ರೋಮ್ ಅನ್ನು ಬಳಸಬೇಕು. ಸರಿಯಾಗಿ ಭರ್ತಿ ಮಾಡಿದ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆಯಬೇಕು. ನೇಮಕಾತಿಯ ಸಂದರ್ಭದಲ್ಲಿ ಇದನ್ನು ಹಾಜರು ಪಡಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಮೇಲ್‌ ಐಡಿ: E-mail: rechr4042@bel.co.in ಅಥವಾ ದೂರವಾಣಿ ಸಂಖ್ಯೆ: 080-22195629 ಸಂಪರ್ಕಿಸಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗುಪ್ತಚರ ಇಲಾಖೆಯಲ್ಲಿದೆ 660 ಹುದ್ದೆಗಳು; ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ

Job Alert: ಗುಪ್ತಚರ ಇಲಾಖೆ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟೆಲಿಜೆನ್ಸ್‌ ಆಫೀಸರ್‌-I, ಸೆಕ್ಯುರಿಟಿ ಅಸಿಸ್ಟೆಂಟ್‌ ಸೇರಿದಂತೆ ಒಟ್ಟು 660 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯದವರೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್‌ಲೈನ್‌ (ಅಂಚೆ) ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 25. ಈ ಬಗೆಗಿನ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌ ಇಲ್ಲಿದೆ. ಗುಪ್ತಚರ ಇಲಾಖೆ (Intelligence Bureau) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟೆಲಿಜೆನ್ಸ್‌ ಆಫೀಸರ್‌-I, ಸೆಕ್ಯುರಿಟಿ ಅಸಿಸ್ಟೆಂಟ್‌ ಸೇರಿದಂತೆ ಒಟ್ಟು 660 ಹುದ್ದೆಗಳಿವೆ (Intelligence Bureau Recruitment 2024). ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯದವರೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್‌ಲೈನ್‌ (ಅಂಚೆ) ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 25 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟಲಿಜೆನ್ಸ್‌ ಆಫೀಸರ್‌-I/ ಎಕ್ಸಿಕ್ಯುಟಿವ್‌- 80 ಹುದ್ದೆ, ವಿದ್ಯಾರ್ಹತೆ: ಪದವಿ
ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟಲಿಜೆನ್ಸ್‌ ಆಫೀಸರ್‌-II/ ಎಕ್ಸಿಕ್ಯುಟಿವ್‌- 136 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್‌ ಇಂಟಲಿಜೆನ್ಸ್‌ ಆಫೀಸರ್‌-I/ ಎಕ್ಸಿಕ್ಯುಟಿವ್‌- 120 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಜೂನಿಯರ್‌ ಇಂಟಲಿಜೆನ್ಸ್‌ ಆಫೀಸರ್‌-II/ ಎಕ್ಸಿಕ್ಯುಟಿವ್‌- 170 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಸೆಕ್ಯುರಿಟಿ ಅಸಿಸ್ಟೆಂಟ್‌ / ಎಕ್ಸಿಕ್ಯುಟಿವ್‌- 100 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಜೂನಿಯರ್‌ ಇಂಟಲಿಜೆನ್ಸ್‌ ಆಫೀಸರ್‌-II/ ಟೆಕ್‌- 8 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್‌ ಸೆಂಟ್ರಲ್‌ ಇಂಟಲಿಜೆನ್‌ ಆಫೀಸರ್‌-II/ ಸಿವಿಲ್‌ ವರ್ಕ್ಸ್‌- 3 ಹುದ್ದೆ, ವಿದ್ಯಾರ್ಹತೆ: ಬಿ.ಇ, ಬಿ.ಟೆಕ್‌
ಜೂನಿಯರ್‌ ಇಂಟಲಿಜೆನ್ಸ್‌ ಆಫೀಸರ್‌-I (ಮೋಟರ್‌ ಟ್ರಾನ್ಸ್‌ಪೋರ್ಟ್‌)- 22 ಹುದ್ದೆ, ವಿದ್ಯಾರ್ಹತೆ: ಡ್ರೈವಿಂಗ್‌ ಲೈಸನ್ಸ್‌
ಹಾಲ್ವಾಯಿ & ಕುಕ್‌- 10 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ, ಡಿಪ್ಲೋಮಾ
ಕೇರ್‌ ಟೇಕರ್‌- 5 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಪರ್ಸನಲ್‌ ಅಸಿಸ್ಟಂಟ್‌- 5 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.
  • Notification ಆಯ್ಕೆ ಮೇಲೆ ಕ್ಲಿಕ್‌ ಮಾಡಿ Vacanvies ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಅಧಿಸೂಚನೆ ಮತ್ತು ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆಯಿರಿ.
  • ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  • ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಾದ ದಾಖಲೆಗಳಿಗೆ ಸೆಲ್ಫ್‌ ಅಟೆಸ್ಟ್‌ ಮಾಡಿ ಅಟ್ಯಾಚ್‌ ಮಾಡಿ.
  • ಈ ಅಪ್ಲಿಕೇಷನ್‌ ಅನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ:

Joint Deputy Director/G-3,
Intelligence Bureau, Ministry of Home Affairs, 35 S P Marg,
Bapu Dham, New Delhi-110021.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ವೇಳಾಪಟ್ಟಿ

Continue Reading

ಉದ್ಯೋಗ

Job Alert: ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದ ಕರ್ನಾಟಕ ಲೋಕಸೇವಾ ಆಯೋಗ; ಟೈಮ್‌ ಟೇಬಲ್‌ ಇಲ್ಲಿ ವೀಕ್ಷಿಸಿ

Job Alert: ಸರ್ಕಾರಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಗಮನಿಸಿ. ಬಹು ನಿರೀಕ್ಷಿತ ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಪ್ರಥಮ ಹಂತದ ಪರೀಕ್ಷೆಗಳು ಜೂನ್‌ 7ರಿಂದ 9ರ ತನಕ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ವೇಳಾಪಟ್ಟಿ ಮತ್ತು ಇನ್ನಿತರ ವಿವರಗಳು ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಗಮನಕ್ಕೆ. ಕರ್ನಾಟಕ ಲೋಕಸೇವಾ ಆಯೋಗ (KPSC)ವು 2024ನೇ ಸಾಲಿನ ಪ್ರಥಮ ಅಧಿವೇಶನದ ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಥಮ ಹಂತದ ಪರೀಕ್ಷೆಗಳು ಜೂನ್‌ 7ರಿಂದ 9ರ ತನಕ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಕುರಿತಾದ ವಿವರ ಇಲ್ಲಿದೆ (Job Alert).

ಪ್ರಥಮ ಹಂತದ ಪರೀಕ್ಷೆಗಳು

ಜೂನ್‌ 7ರಂದು ಬೆಳಗ್ಗೆ 10ರಿಂದ 12ರ ತನಕ ಅಕೌಂಟ್ಸ್‌ ಲೋಯರ್‌ (01) ಮತ್ತು ಮಧ್ಯಾಹ್ನ 2ರಿಂದ 4ರ ತನಕ ಜನರಲ್‌ ಲಾ ವಿಭಾಗ-II (08) ಪರೀಕ್ಷೆ ನಡೆಯಲಿದೆ.
ಜೂನ್‌ 8ರಂದು ಬೆಳಗ್ಗೆ 10ರಿಂದ 12ರ ತನಕ ಅಕೌಂಟ್ಸ್‌ ಹೈಯರ್‌-ಪತ್ರಿಕೆ -1 (22/1) ಮತ್ತು ಮಧ್ಯಾಹ್ನ 2ರಿಂದ 4 ಗಂಟೆ ತನಕ ಹೈಯರ್‌-ಪತ್ರಿಕೆ -2 (22/2) ಪರೀಕ್ಷೆ ಆಯೋಜಿಸಲಾಗಿದೆ.
ಜೂನ್‌ 9ರಂದು ಬೆಳಗ್ಗೆ 10ರಿಂದ 12ರ ತನಕ ಜನರಲ್‌ ಲಾ ಭಾಗ-I ಪತ್ರಿಕೆ-1 (36/1) ಮತ್ತು ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಜನರಲ್‌ ಲಾ ಭಾಗ-I ಪತ್ರಿಕೆ-2 (36/2) ಪರೀಕ್ಷೆ ನಡೆಯಲಿದೆ.

ದ್ವಿತೀಯ ಹಂತದ ಪರೀಕ್ಷೆಗಳು

ಇನ್ನು ದ್ವಿತೀಯ ಹಂತದ ಪರೀಕ್ಷೆಗಳು ವಿಭಾಗೀಯ ಕೇಂದ್ರಗಳಲ್ಲಿ ಜೂನ್‌ 11ರಿಂದ 23ರ ತನಕ ಆಯೋಜಿಸಲಾಗಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ.

ತೃತೀಯ ಹಂತದ ಪರೀಕ್ಷೆ

ಮೂರನೇ ಹಂತದ ಪರೀಕ್ಷೆ ಜೂನ್‌ 24ರಿಂದ 29ರ ತನಕ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್‌ ಕುಮಾರ್‌ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತಾದ ವಿವರವಾದ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕೆಲವು ದಿನಗಳ ಹಿಂದೆ  ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿತ್ತು. ಆನ್‌ಲೈನ್‌ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿ ಸಲ್ಲಿಸಲಿರುವ ದಿನಾಂಕವನ್ನು ಮುಂದೂಡಲಾಗಿದೆ. ಅದರಂತೆ ಏಪ್ರಿಲ್‌ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನಾಂಕ ಮೇ 5 ಎಂದು ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

Continue Reading

ಉದ್ಯೋಗ

Job Alert: ಸಿಬಿಎಸ್‌ಇಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಏ. 11 ಕೊನೆಯ ದಿನ

Job Alert: ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಖಾಲಿ ಇರುವ ಗ್ರೂಪ್‌ ಎ, ಬಿ, ಸಿಯ ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್, ಟ್ರಾನ್ಸ್‌ಲೇಟ್‌ ಆಫೀಸರ್‌​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮಾರ್ಚ್‌ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನ ಏಪ್ರಿಲ್ 11. ಈ ಕುರಿತಾದ ಹೆಚ್ಚಿನ ವಿವರ, ಅಧಿಸೂಚನೆ, ಅರ್ಜಿ ಸಲ್ಲಿಸಬೇಕಾದ ರೀತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Educationಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ (CBSE Recruitment 2024). ಗ್ರೂಪ್‌ ಎ, ಬಿ, ಸಿಯ ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್, ಟ್ರಾನ್ಸ್‌ಲೇಟ್‌ ಆಫೀಸರ್‌ ಸೇರಿದಂತೆ ವಿವಿಧ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್‌ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನ ಏಪ್ರಿಲ್ 11 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್ ಸೆಕ್ರೆಟರಿ- 64, ಅಕೌಂಟ್ಸ್ ಆಫೀಸರ್- 3, ಜೂನಿಯರ್ ಎಂಜಿನಿಯರ್- 17, ಜೂನಿಯರ್ ಟ್ರಾನ್ಸ್​ಲೇಶನ್ ಆಫೀಸರ್-7, ಅಕೌಂಟೆಂಟ್​-7, ಜೂನಿಯರ್ ಅಕೌಂಟೆಂಟ್​-20 ಹುದ್ದೆಗಳಿವೆ.

ಉದ್ಯೋಗದ ಸ್ಥಳ ಮತ್ತು ಅರ್ಜಿ ಶುಲ್ಕ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನಿರ್ವಹಿಸಲು ತಯಾರಿರಬೇಕು.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಯೋಧರು / ಮಹಿಳೆಯರು ಮತ್ತು ಸಿಬಿಎಸ್‌ಇ ಉದ್ಯೋಗಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಗ್ರೂಪ್‌ ಎ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಗ್ರೂಪ್‌ ಬಿ ಮತ್ತು ಸಿ ಹುದ್ದೆಗಳಿಗೆ 800 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕಿದ್ದು, ಇದಕ್ಕಾಗಿ ಡೆಬಿಟ್‌ / ಕ್ರೆಡಿಟ್‌ ಕಾರ್ಡ್‌, ಇಂಟರ್‌ನೆಟ್‌ ಬ್ಯಾಂಕಿಂಗ್‌ ವಿಧಾನ ಬಳಸಬಹುದು.

ವಿವಿಧ ಹುದ್ದೆಗಳಿಗಿರುವ ವಯೋಮಿತಿ

ಅಸಿಸ್ಟಂಟ್‌ ಸೆಕ್ರಟರಿ (ಅಡ್ಮಿನಿಸ್ಟ್ರೇಷನ್‌)-18ರಿಂದ 35 ವರ್ಷ, ಅಸಿಸ್ಟಂಟ್‌ ಸೆಕ್ರಟರಿ (ಅಕಾಡೆಮಿಕ್ಸ್‌)-18ರಿಂದ 30 ವರ್ಷ, ಅಸಿಸ್ಟಂಟ್‌ ಸೆಕ್ರಟರಿ (ಸ್ಕಿಲ್‌ ಎಜುಕೇಷನ್‌)-18ರಿಂದ 30 ವರ್ಷ, ಅಸಿಸ್ಟಂಟ್‌ ಸೆಕ್ರಟರಿ (ಟ್ರೇನಿಂಗ್‌)-18ರಿಂದ 30 ವರ್ಷ, ಅಕೌಂಟ್‌ ಆಫೀಸರ್‌-18ರಿಂದ 35 ವರ್ಷ, ಜೂನಿಯರ್‌ ಎಂಜಿನಿಯರ್‌-18ರಿಂದ 32 ವರ್ಷ, ಜೂನಿಯರ್‌ ಟ್ರಾನ್ಸ್‌ಲೇಟ್‌ ಆಫೀಸರ್‌ -18ರಿಂದ 30 ವರ್ಷ, ಅಕೌಂಟೆಂಟ್‌-18ರಿಂದ 30 ವರ್ಷ, ಜೂನಿಯರ್‌ ಅಕೌಂಟೆಂಟ್‌-18ರಿಂದ 27 ವರ್ಷ ಎಂದು ಪ್ರಕಟಣೆ ತಿಳಿಸಿದೆ.

CBSE Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಸೂಕ್ತ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ವೈಯಕ್ತಿಕ, ಶೈಕ್ಷಣಿಕ ವಿವರ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

Continue Reading

ಪ್ರಮುಖ ಸುದ್ದಿ

Job Alert: ಗಮನಿಸಿ, 364 ಭೂ ಮಾಪಕರ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇನ್ನು ಎರಡೇ ದಿನ ಅವಕಾಶ

Job Alert: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಸುಮಾರು 364 ಗ್ರೂಪ್‌ ಸಿ ಭೂ ಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 10. ಉಳಿಕೆ ಮೂಲ ವೃಂದದಲ್ಲಿ 264 ಮತ್ತು ಹೈದರಾಬಾದ್‌-ಕರ್ನಾಟಕ ವೃಂದದಲ್ಲಿ 100 ಹುದ್ದೆಗಳಿವೆ. ಸ್ಪರ್ಧಾತ್ಮಕ ಪರೀಕ್ಷೆ, ಡಾಕ್ಯುಮಂಎಟ್‌ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹೀಗಾಗಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.

VISTARANEWS.COM


on

Job Alert
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಸುಮಾರು 364 ಗ್ರೂಪ್‌ ಸಿ ಭೂ ಮಾಪಕರ ಹುದ್ದೆ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (KPSC Land Surveyor Recruitment 2024). ಮಾರ್ಚ್‌ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 10ರ ವರೆಗೆ ಅವಕಾಶವಿದೆ (Job Alert).

ವಿದ್ಯಾರ್ಹತೆ

ಈ ಪೈಕಿ ಉಳಿಕೆ ಮೂಲ ವೃಂದದಲ್ಲಿ 264 ಮತ್ತು ಹೈದರಾಬಾದ್‌-ಕರ್ನಾಟಕ ವೃಂದದಲ್ಲಿ 100 ಹುದ್ದೆಗಳಿವೆ. ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಇ. (ಸಿವಿಲ್‌) / ಬಿ.ಟೆಕ್‌ (ಸಿವಿಲ್‌) ಅಥವಾ ಡಿಪ್ಲೋಮಾ (ಸಿವಿಲ್‌ ಎಂಜಿನಿಯರಿಂಗ್‌) ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು) ಅಥವಾ ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್‌ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾ ಉತ್ತೀರ್ಣವಾಗಿರಬೇಕು ಇಲ್ಲವೇ ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್‌ ಸರ್ವೆ ಟ್ರೇಡ್‌ನಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಮತ್ತು ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸ ಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ, ಡಾಕ್ಯುಮಂಎಟ್‌ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾಗುವವರಿಗೆ 23,500 ರೂ.-47,650 ರೂ. ಮಾಸಿಕ ವೇತನ ದೊರೆಯಲಿದೆ.

ಇದನ್ನು ಗಮನಿಸಿ

ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಒಂದು ಬಾರಿಯ ನೋಂದಣಿ (OTR-One Time Registration)ಯನ್ನು ಒಳಗೊಂಡಿದ್ದು, ಅಭ್ಯರ್ಥಿಗಳು ನೀಡಿರುವ ಮಾಹಿತಿಗಳನ್ನು ಮುಂದಿನ ಎಲ್ಲ ಅಧಿಸೂಚನೆಗಳಿಗೂ ಪರಿಗಣಿಸುವುದರಿಂದ, ಜಾಗರೂಕತೆಯಿಂದ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.

ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (HK)

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (RPC)

ಹೆಚ್ಚಿನ ಮಾಹಿತಿಗೆ 080-30574957 / 30574901 / 22343137 ಸಂಖ್ಯೆಗೆ ಕರೆ ಮಾಡಬಹುದು.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ವೇಳಾಪಟ್ಟಿ

Continue Reading
Advertisement
IPL 2024
ಪ್ರಮುಖ ಸುದ್ದಿ13 mins ago

IPL 2024 : ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ ಡೆಲ್ಲಿ ತಂಡಕ್ಕೆ 6 ವಿಕೆಟ್​ ವಿಜಯ

NIA Raid
ಕರ್ನಾಟಕ25 mins ago

NIA Raid: ಹುಬ್ಬಳ್ಳಿಯಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದ ಎನ್‌ಐಎ

Khalistan Terrorist
ಪ್ರಮುಖ ಸುದ್ದಿ44 mins ago

Khalistani Terrorist : ದೆಹಲಿ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಉಗ್ರ ಪ್ರಭ್​ಪ್ರೀತ್ ಸಿಂಗ್ ಸೆರೆ

Lok Sabha Election 2024
ಕರ್ನಾಟಕ52 mins ago

Lok Sabha Election 2024: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ; ಇವರ ಆಸ್ತಿ ಎಷ್ಟು?

Pakistan
ಪ್ರಮುಖ ಸುದ್ದಿ1 hour ago

United Kingdom: ‘ಪ್ರಯಾಣಕ್ಕೆಅಪಾಯಕಾರಿ’ ದೇಶಗಳ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಿದ ಬ್ರಿಟನ್​!

Chikkaballapur Lok Sabha Constituency BJP Candidate Dr K Sudhakar is campaigning in various places today
ಚಿಕ್ಕಬಳ್ಳಾಪುರ2 hours ago

Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ರಿಂದ ಏ.13ರಂದು ಪ್ರಚಾರ

Union Minister Pralhad Joshi statement
ಹುಬ್ಬಳ್ಳಿ2 hours ago

Lok Sabha Election 2024: ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು: ಪ್ರಲ್ಹಾದ್‌ ಜೋಶಿ

Union Minister Pralhad Joshi latest statement in hubli
ಕರ್ನಾಟಕ2 hours ago

Lok Sabha Election 2024: ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ: ಪ್ರಲ್ಹಾದ್‌ ಜೋಶಿ ಸವಾಲು

Rashtrotthana Hospital adopts Dozi technology to provide greater safety to patients
ಕರ್ನಾಟಕ2 hours ago

Rashtrotthana Parishat: ಡೋಝಿ ತಂತ್ರಜ್ಞಾನ ಅಳವಡಿಸಿಕೊಂಡ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ

Iran- israel War
ದೇಶ2 hours ago

Iran- Israel War : ಮುಂದಿನ 48 ಗಂಟೆಗಳೊಳಗೆ ಇರಾನ್-ಇಸ್ರೇಲ್ ಭೀಕರ ಯುದ್ಧ ಶುರು!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameshwaram Cafe Blast Fake IDs created and captured bombers hiding in Kolkata
ಕ್ರೈಂ11 hours ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ19 hours ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 day ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20241 day ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ಅಧಿಕ ಲಾಭ

Ugadi 2024
ಬಾಗಲಕೋಟೆ3 days ago

Ugadi 2024 : ಬೀಳಗಿಯ ಎಕ್ಕೆ ಎಲೆ ಭವಿಷ್ಯ; ಈಶಾನ್ಯ, ಪಶ್ಚಿಮ ಭಾಗದಲ್ಲಿ ಭಾರಿ ಕಂಟಕ!

ugadi 2024
ಧಾರವಾಡ3 days ago

Ugadi 2024 : ಹನುಮನಕೊಪ್ಪದಲ್ಲಿ ಭವಿಷ್ಯ ನುಡಿದ ಬೊಂಬೆ! ಮುಂದಿನ ಪ್ರಧಾನಿ ಯಾರಾಗ್ತಾರೆ?

Dina Bhavishya
ಭವಿಷ್ಯ4 days ago

Dina Bhavishya : ನೂತನ ಸಂವತ್ಸರದಲ್ಲಿ ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ

Dina Bhavishya
ಭವಿಷ್ಯ5 days ago

Dina Bhavishya : ಅತಿರೇಕದ ಮಾತು ಈ ರಾಶಿಯವರಿಗೆ ಒಳ್ಳೆಯದಲ್ಲ

Rockstar Bull of bull festival king fame passes away
ಹಾವೇರಿ5 days ago

Rockstar Bull: ಹೋರಿ ಹಬ್ಬದ ಕಿಂಗ್ ಖ್ಯಾತಿಯ ರಾಕ್‌ ಸ್ಟಾರ್‌ ಬುಲ್‌ ಇನ್ನಿಲ್ಲ; ಬೊಮ್ಮಾಯಿ ಕಂಬನಿ

ಟ್ರೆಂಡಿಂಗ್‌