ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (Bharat Earth Movers Limited) ಖಾಲಿ ಇರುವ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BEML Recruitment 2024). ಬೆಮೆಲ್ (ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್) ರಕ್ಷಣೆ ಮತ್ತು ಏರೋಸ್ಪೇಸ್ ವಲಯದಲ್ಲಿ ನಾನಾ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ. ಗಣಿಗಾರಿಕೆ ಮತ್ತು ನಿರ್ಮಾಣ ವಲಯದ ಯಂತ್ರೋಪಕರಣಗಳನ್ನು ಉತ್ಪಾದಿಸುತ್ತದೆ. ಮೆಟ್ರೊ, ರೈಲ್ವೆ ವಲಯದಲ್ಲೂ ಸಕ್ರಿಯವಾಗಿದೆ. ಹೀಗಾಗಿ ಉದ್ಯೋಗ ಅರಸುವವರಿಗೆ ಇದೊಂದು ಅತ್ಯುತ್ತಮ ಅವಕಾಶ. ಐಟಿಐ ಟ್ರೈನಿ, ಆಫೀಸ್ ಅಸಿಸ್ಟಂಟ್ ಸೇರಿ ಸುಮಾರು 100 ಹುದ್ದೆಗಳು ಖಾಲಿ ಇದ್ದು, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್ 4 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಐಟಿಐ ಟ್ರೈನಿ-ಫಿಟ್ಟರ್- 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಟರ್ನರ್- 11 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಮೆಕ್ಯಾನಿಷ್ಟ್- 10 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ಎಲೆಕ್ಟ್ರಿಷಿಯನ್- 8 ಹುದ್ದೆ, ವಿದ್ಯಾರ್ಹತೆ: ಐಟಿಐ
ಐಟಿಐ ಟ್ರೈನಿ-ವೆಲ್ಡರ್- 18 ಹುದ್ದೆ, ವಿದ್ಯಾರ್ಹತೆ: ಐಟಿಐ
ಆಫೀಸ್ ಅಸಿಸ್ಟಂಟ್ ಟ್ರೈನಿ-46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಪದವಿ. ಎಲ್ಲ ಹುದ್ದೆಗಳಿಗೆ 3 ವರ್ಷಗಳ ಕಾರ್ಯಾನುಭವ ಕಡ್ಡಾಯ.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಕೆಯ ಗರಿಷ್ಠ ವಯೋಮಿತಿ 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಇಡಬ್ಲ್ಯುಎಸ್ / ಒಬಿಸಿ ಅಭ್ಯರ್ಥಿಗಳು 200 ರೂ. ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ಸಂದರ್ಸನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://kps14.exmegov.com/).
- ಹೆಸರು ನೋಂದಾಯಿಸಿ ಲಾಗಿನ್ ಆಗಿ.
- ಇಲ್ಲಿ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂನ ಪ್ರಿಂಟ್ಔಟ್ ತೆಗೆದಿಡಿ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: bemlindia.inಗೆ ಭೇಟಿ ನೀಡಿ ಅಥವಾ ಇಮೇಲ್ ವಿಳಾಸ recruitment@bemlltd.inಗೆ ಮೇಲ್ ಕಳುಹಿಸಿ.
ಇದನ್ನೂ ಓದಿ: RRB Recruitment 2024: ಗುಡ್‌ನ್ಯೂಸ್; ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ