Site icon Vistara News

Job Alert: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

metro

metro

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (BMRCL Recruitment 2023). ಒಟ್ಟು 6 ಹುದ್ದೆಗಳು ಖಾಲಿ ಇವೆ. ಆಸಕ್ತರು ಡಿಸೆಂಬರ್‌ 22ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ ಬೆಂಗಳೂರು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ ಸಿವಿಲ್- 2 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಮ್ಯಾನೇಜರ್ (ಪಿ-ವೇ, ಕಾರ್ಯಾಚರಣೆಗಳು)- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ.

ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (ಎಚ್‌ಆರ್), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ, ಶಾಂತಿನಗರ, ಬೆಂಗಳೂರು-560027 ಇಲ್ಲಿಗೆ ಕಳುಹಿಸಬೇಕು.

ಇದನ್ನೂ ಓದಿ: Job Alert: ಐಡಿಬಿಐ ಬ್ಯಾಂಕ್‌ನಲ್ಲಿದೆ 2,100 ಉದ್ಯೋಗಾವಕಾಶ; ಇಂದಿನಿಂದಲೇ ಅರ್ಜಿ ಸಲ್ಲಿಸಿ

Exit mobile version