Site icon Vistara News

Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

Job Alert

Job Alert

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Bmtc Conductor Recruitment 2024). ಈ ಹುದ್ದೆಗಳಿಗೆ ಹಿಂದೆ ಹೊರಡಿಸಿದ್ದ ಅಧಿಸೂಚನೆಗೆ ಈಗ ತಿದ್ದುಪಡಿ ತರಲಾಗಿದೆ. ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18 (Job alert). ಪರಿಷ್ಕೃತ ಅಧಿಸೂಚನೆಯಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಿಕ್ಕಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರುವುದು ಕಡ್ಡಾಯ. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರುನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಬಿಎಂಟಿಸಿ ಅಧಿಸೂಚನೆ-ಕೆಕೆ (ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಬಿಎಂಟಿಸಿ ಅಧಿಸೂಚನೆ-ಆರ್‌ಪಿಸಿ (ಎನ್‌ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: KPSC: ಗಮನಿಸಿ; ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ತಿದ್ದುಪಡಿ ಅಧಿಸೂಚನೆಯಲ್ಲಿ ಏನಿದೆ?

Exit mobile version