ಬೆಂಗಳೂರು: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ (Bureau of Indian Standards) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(BIS Consultant Recruitment). ಸುಮಾರು 107 ಸಲಹೆಗಾರರ ಹುದ್ದೆ ಖಾಲಿ ಇದ್ದು, ವಿವಿಧ ವಿಭಾಗಗಳಲ್ಲಿ ಪದವಿಗಳನ್ನು ಓದಿರುವವರು ಅರ್ಜಿ ಸಲ್ಲಿಸಬಹುದು. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 19 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸಿವಿಲ್ ಎಂಜಿನಿಯರಿಂಗ್: 15, ಕೆಮಿಕಲ್ ಎಂಜಿನಿಯರಿಂಗ್: 6, ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಫಾರ್ಮೇಷನ್ ಟೆಕ್ನಾಲಜಿ: 3, ಎಲೆಕ್ಟ್ರೋಟೆಕ್ನಿಕಲ್: 6, ಫುಡ್ ಆ್ಯಂಡ್ ಅಗ್ರಿಕಲ್ಚರ್: 6, ಮೆಕ್ಯಾನಿಕಲ್ ಎಂಜಿನಿಯರಿಂಗ್: 7, ಮೆಡಿಕಲ್ ಎಕ್ವಿಪ್‌ಮೆಂಟ್ ಅಂಡ್ ಹಾಸ್ಪಿಟಲ್ ಪ್ಲಾನಿಂಗ್: 2, ಮೆಟಾಲರ್ಜಿಕಲ್ ಎಂಜಿನಿಯರಿಂಗ್: 9, ಪೆಟ್ರೋಲಿಯಮ್ ಕೋಲ್ ಮತ್ತು ಇತರ ಉತ್ಪನ್ನಗಳು: 5, ಪ್ರೊಡಕ್ಷನ್ ಅಂಡ್ ಜನೆರಲ್ ಎಂಜಿನಿಯರಿಂಗ್: 10 ಹುದ್ದೆಗಳಿವೆ. ಆಯಾ ವಿಭಾಗಗಳಿಗೆ ಸಂಬಂಧಿಸಿ ತಾಂತ್ರಿಕ / ತಾಂತ್ರಿಕೇತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 5-10 ವರ್ಷಗಳ ಕಾರ್ಯಕ್ಷೇತ್ರ ಅನುಭವ ಇರುವುದು ಕಡ್ಡಾಯ.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆಯ್ಕೆಯಾದವರು ದೆಹಲಿಯಲ್ಲಿ ಉದ್ಯೋಗ ನಿರ್ವಹಿಸಬೇಕಾಗುತ್ತದೆ ಎಂದು ಎಂದು ಪ್ರಕಟಣೆ ತಿಳಿಸಿದೆ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಅರ್ಜಿ ಸಲ್ಲಿಸಿದವರ ವಿದ್ಯಾರ್ಹತೆ ಹಾಗೂ ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 75,000 ರೂ. ಮಾಸಿಕ ವೇತನ ದೊರೆಯಲಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Job Alert: ಪಶ್ಚಿಮ ಕೇಂದ್ರ ರೈಲ್ವೆಯಿಂದ 3,015 ಅಪ್ರೆಂಟಿಸ್‌ಗಳ ಆಯ್ಕೆಗೆ ಅರ್ಜಿ ಆಹ್ವಾನ