ಬೆಂಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್(Centre for Development of Advanced Computing) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CDAC Recruitment 2024). ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಮ್ಯಾನೇಜರ್ ಸೇರಿದಂತೆ ಒಟ್ಟು 250 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಬೆಂಗಳೂರು, ಶಿಮ್ಲಾ, ದಿಲ್ಲಿ ಮತ್ತು ಪುಣೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 16 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಪ್ರಾಜೆಕ್ಟ್ ಅಸೋಸಿಯೇಟ್- 43 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಎಂಜಿನಿಯರ್- 100 ಹುದ್ದೆ, ವಿದ್ಯಾರ್ಹತೆ:
ಪ್ರಾಜೆಕ್ಟ್ ಮ್ಯಾನೇಜರ್- 1 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಂ ಮ್ಯಾನೇಜರ್ / ಪ್ರೋಗ್ರಾಂ ಡೆಲಿವರಿ ಮ್ಯಾನೇಜರ್ / ನಾಲೆಡ್ಜ್ ಪಾರ್ಟನರ್- 19 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಪ್ರಾಜೆಕ್ಟ್ ಆಫೀಸರ್- 3 ಹುದ್ದೆ, ವಿದ್ಯಾರ್ಹತೆ: ಸಿಎ, ಸ್ನಾತಕೋತ್ತರ ಪದವಿ, ಎಂಬಿಎ, ಎಂ.ಕಾಂ., ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಸಪೋರ್ಟ್ ಸ್ಟಾಫ್- 5 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ, ಎಂ.ಕಾಂ, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್ / ಮಾಡ್ಯೂಲ್ ಲೀಡ್ / ಪ್ರಾಜೆಕ್ಟ್ ಲೀಡರ್- 41 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಎಚ್.ಡಿ.
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್ / ಮಾಡ್ಯೂಲ್ ಲೀಡ್- 16 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಎಚ್.ಡಿ.
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್- 22 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್, ಎಂಇ ಅಥವಾ ಎಂ.ಟೆಕ್, ಸ್ನಾತಕೋತ್ತರ ಪದವಿ, ಪಿಎಚ್.ಡಿ.
ವಯೋಮಿತಿ, ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ವಿವಿಧ ಹುದ್ದೆಗಳಿಗೆ ಅನುಗುಣವಾಗಿ 30-50 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://careers.cdac.in/advt-details/PN-1972024-TYT1X).
- ಮೊಬೈಲ್ ನಂಬರ್, ಇಮೇಲ್ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
- ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ತೆಗೆದಿಡಿ.
ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್ ಮೂಲಕ ಅಪ್ಲೈ ಮಾಡಿ