ನವದೆಹಲಿ: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕ ಕನಸು. ಆ ಕನಸು ನನಸಾಗಿಸಲು ಸುವರ್ಣಾವಕಾಶವೊಂದು ಬಂದಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ ಕ್ರೀಡಾ ಕೋಟಾದಡಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CRPF Recruitment 2024). 169 ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ ಹುದ್ದೆ ಖಾಲಿ ಇದ್ದು, ಎಸ್ಸೆಸ್ಸೆಲ್ಸಿ ತೇರ್ಗಡೆಯಾವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 15 (Job Alert).
ಹುದ್ದೆಗಳ ವಿವರ
ಮೊದಲೇ ಹೇಳಿದಂತೆ ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ಭರ್ತಿ ಮಾಡಲಾಗುತ್ತದೆ. ಹೀಗಾಗಿ ಜಿಮ್ನಾಸ್ಟಿಕ್, ಜುಡೊ, ಶೂಟಿಂಗ್, ಬಾಕ್ಸಿಂಗ್, ಅಥ್ಲೆಟಿಕ್ಸ್, ಆರ್ಚರಿ, ಕುಸ್ತಿ, ಸ್ವಿಮ್ಮಿಂಗ್, ವೈಟ್ ಲಿಫ್ಟಿಂಗ್, ಡೈವಿಂಗ್, ಹಾಕಿ, ಸ್ಕೇಟಿಂಗ್ ಮುಂತಾದ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ, ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಸಾಧನೆ ಮಾಡಿರುವವರು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ವಯೋಮಿತಿ
ಮೆಟ್ರಿಕ್ಯುಲೇಷನ್, ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ/ ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ
ಮೊದಲು ಅರ್ಜಿ ಸಲ್ಲಿಸಿದವರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ದಾಖಲೆಗಳ ಪರಿಶೀಲನೆ / ಲಿಖಿತ ಪರೀಕ್ಷೆ / ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 21,700-69,100 ರೂ. ಮಾಸಿಕ ವೇತನ ಪಾತಸಿಲಾಗುವುದು. ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ಆಗಿ ನೇಮಕ ಆಗುವವರು ಸೀನಿಯರ್ ಕಾನ್ಸ್‌ಟೇಬಲ್, ಹೆಡ್ ಕಾನ್ಸ್‌ಟೇಬಲ್, ಅಸಿಸ್ಟಂಟ್ ಸಬ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಮುಂತಾದ ಹುದ್ದೆಗಳಿಗೆ ಮುಂಭಡ್ತಿ ಪಡೆಯುವ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.
CRPF Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
- Recruitment ಆಯ್ಕೆ ಮೇಲೆ ಕ್ಲಿಕ್ ಮಾಡಿ
- GD Constable Posts under sports quota ಆಯ್ಕೆ ಮೇಲೆ ಕ್ಲಿಕ್ ಮಾಡಿ
- ಗಮನವಿಟ್ಟು ಓಡಿ ಅರ್ಜಿ ಫಾರಂ ಭರ್ತಿ ಮಾಡಿ. ಅರ್ಜಿ ಸಲ್ಲಿಸುವ ಮುನ್ನ ಕ್ರಿಯೇಟ್ ಆಗುವ ನಂಬರ್ ತೆಗೆದಿಡಿ.
- ಅರ್ಜಿ ಶುಲ್ಕ ಪಾವತಿಸಿ (ಅಗತ್ಯವದ್ದರು ಮಾತ್ರ).
- ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿ ಫಾರಂನ ಪ್ರಿಂಟ್ ಔಟ್ ತೆಗೆದಿಡಿ.
ಇದನ್ನೂ ಓದಿ: Job Fair: ಜ. 28ರಂದು ಉದ್ಯೋಗ ಮೇಳ; ಎಸ್ಸೆಸ್ಸೆಲಿ ವಿದ್ಯಾರ್ಹತೆ ಹೊಂದಿದವರಿಗೂ ಇದೆ ಅವಕಾಶ