Site icon Vistara News

Job Alert: ನೌಕರರ ರಾಜ್ಯ ವಿಮಾ ನಿಗಮದಲ್ಲಿದೆ 1,930 ಹುದ್ದೆ; ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಇನ್ನು ಎರಡೇ ದಿನ ಅವಕಾಶ

esic

esic

ಬೆಂಗಳೂರು: ನರ್ಸಿಂಗ್‌ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣಾವಕಾಶ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (Employees State Insurance Corporation) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗವು (Union Public Service Commission) ಅಧಿಸೂಚನೆಯನ್ನು ಹೊರಡಿಸಿದೆ. ಬರೋಬ್ಬರಿ 1,930 ನರ್ಸಿಂಗ್‌ ಅಧಿಕಾರಿ ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ವರ್ಗ-892, ಇಡಬ್ಲ್ಯುಎಸ್‌-193, ಎಸ್‌ಸಿ-235, ಎಸ್‌ಟಿ-164, ಒಬಿಸಿ ವರ್ಗಗಳಿಗೆ 446 ಹುದ್ದೆಗಳಿವೆ. ಬಿ.ಎಸ್‌ಸಿ (Hons) ನರ್ಸಿಂಗ್/ ಬಿ.ಎಸ್‌ಸಿ ನರ್ಸಿಂಗ್/ ಪೋಸ್ಟ್ ಬೇಸಿಕ್ ಬಿ.ಎಸ್‌ಸಿ ನರ್ಸಿಂಗ್ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಗಮನಿಸಿ ಅಭ್ಯರ್ಥಿಗಳು ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನರ್ಸ್ ಅಥವಾ ನರ್ಸ್ ಸೂಲಗಿತ್ತಿಯಾಗಿ ನೋಂದಾಯಿಸಿಕೊಂಡಿರಬೇಕು ಅಥವಾ ಜನರಲ್ ನರ್ಸಿಂಗ್ ಮಿಡ್ ವೈಫರಿಯಲ್ಲಿ ಡಿಪ್ಲೊಮಾ ಕೋರ್ಸ್ ಮಾಡಿರಬೇಕು. ಅಲ್ಲದೆ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಕನಿಷ್ಠ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷ ಮತ್ತು ವಿಶೇಷ ಚೇತನ ವ್ಯಕ್ತಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 25 ರೂ. ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ / ವಿಶೇಷ ಚೇತನ ವ್ಯಕ್ತಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 2 ವರ್ಷ ಪ್ರೊಬೇಷನರಿ ಅವಧಿ ಇರಲಿದ್ದು, ಬಳಿಕ ಹುದ್ದೆ ಖಾಯಂ ಆಗಲಿದೆ. 42,300 ರೂ.- 63,300 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

Exit mobile version